ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಊಹಾಪೋಹಗಳಿಗೆ ಸಚಿವ ಸತೀಶ್ ಜಾರಕಿಹೊಳಿ ತೆರೆ

ಸಿದ್ದರಾಮಯ್ಯ ಇನ್ನು ಅಪರಾಧಿ ಎಂದು ಸಾಬೀತಾಗಿಲ್ಲ. ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬೆಂಬಲವಿದೆ. ಹಾಗಾಗ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಬಿಜೆಪಿ ಯತ್ನ ವಿಫಲವಾಗಲಿದೆ.
ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
Updated on

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್'ಗೆ ರಾಜ್ಯಪಾಲರು ಅನುಮತಿ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳು ಶುರುವಾಗಿದೆ.

ಈ ನಡುವೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿಯವರು ಹೇಳಿದ್ದು, ಈ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನು ಅಪರಾಧಿ ಎಂದು ಸಾಬೀತಾಗಿಲ್ಲ. ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬೆಂಬಲವಿದೆ. ಹಾಗಾಗ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಬಿಜೆಪಿ ಯತ್ನ ವಿಫಲವಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಮೇಲೆ ಯಾವುದೇ ಆರೋಪ ಸಾಬೀತಾಗಿಲ್ಲ. ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿದೆ. ಇದೇ ರೀತಿ ಆದರೆ, ಮುಂದೆ ತೆಲಂಗಾಣ ಸಿಎಂಗೂ ಸಮಸ್ಯೆ ಮಾಡುತ್ತಾರೆ. ತೆಲಂಗಾಣ ಸಿಎಂಗೂ ರಾಜ್ಯಪಾಲರು ನೋಟಿಸ್ ನೀಡಬಹುದು. ರಾಜ್ಯಪಾಲರಿಂದ ನೋಟಿಸ್ ಕೊಟ್ಟು ಕೆಳಗೆ ಇಳಿಸಲು ಯತ್ನಿಸುತ್ತಾರೆ. ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರವಾಗಿದೆ. ಹೀಗಾಗಿ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವ ದೃಢ ನಿರ್ಧಾರ ಕೈಗೊಂಡಿದೆ. ನಮ್ಮ ಮುಖ್ಯಮಂತ್ರಿಗಳು ಕೆಳಗಿಳಿಸಲು ನಾವು ಬಿಡುವುದಿಲ್ಲ ಎಂದು ತಿಳಿಸಿದರು.

ಸಚಿವ ಸತೀಶ್ ಜಾರಕಿಹೊಳಿ
ಸಿಎಂ ಹುದ್ದೆ ಕಳೆದುಕೊಳ್ಳುತ್ತಾರೆಯೇ ಸಿದ್ದರಾಮಯ್ಯ?: ಕಾಂಗ್ರೆಸ್ ನಲ್ಲಿ 'ಕುರ್ಚಿ' ರಾಜಕೀಯ ಆರಂಭ?

ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಿದ್ದೆ. ಭೇಟಿ ವೇಳೆ ಪಕ್ಷ ಸಂಘಟನೆಯ ವಿಚಾರ ಕುರಿತು ಚರ್ಚಿಸಿದ್ದೇವೆ. ಬೆಳಗಾವಿ ಡಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚಿಸಲಾಗಿದೆ. ಚಿಕ್ಕೋಡಿ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಧ್ಯಕ್ಷರ ನೇಮಕ ಕುರಿತಂತೆ ಚರ್ಚೆ ನಡೆಸಲಾಗಿದೆ. ನನ್ನ ಕ್ಷೇತ್ರದಲ್ಲಿ (ಯಮಕನಮರಡಿ) ಹಲವು ನೀರಾವರಿ ಯೋಜನೆಗಳಿದ್ದು, ಅವುಗಳ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com