ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭ: ಬಿ.ವೈ. ವಿಜಯೇಂದ್ರ

ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು. ಮಂತ್ರಿಗಳು ವಿಧಾನಸೌಧಕ್ಕೆ ಬರುತ್ತಿಲ್ಲ. ಡಿ.ಕೆ ಶಿವಕುಮಾರ್ ವೈಷ್ಣೊದೇವಿಗೆ ಹೋಗಿ ಆರ್ಶಿವಾದ ಪಡೆದುಕೊಂಡು ಬಂದಿದ್ದಾರೆ.
BJP state president BY Vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ online desk
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಆರಂಭವಾಗಿದ್ದು, ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಗಳವಾರ ಹೇಳಿದರು.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು. ಮಂತ್ರಿಗಳು ವಿಧಾನಸೌಧಕ್ಕೆ ಬರುತ್ತಿಲ್ಲ. ಡಿ.ಕೆ ಶಿವಕುಮಾರ್ ವೈಷ್ಣೊದೇವಿಗೆ ಹೋಗಿ ಆರ್ಶಿವಾದ ಪಡೆದುಕೊಂಡು ಬಂದಿದ್ದಾರೆ. ಇದೀಗ ಮುಖ್ಯಮಂತ್ರಿಗಳ ರಾಜೀನಾಮೆಗೆ ಕ್ಷಣಗಣನೆ ಶುರುವಾಗಿದ್ದು, ಸಿದ್ದರಾಮಯ್ಯ ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು ಎಂದು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ಭ್ರಷ್ಟ ಕಾಂಗ್ರೆಸ್ ವಿರುದ್ಧ ಸದನದ ಹೊರಗೆ ಮತ್ತು ಒಳಗೆ ಹೋರಾಟ ಮಾಡುತ್ತಾ ಬಂದಿದೆ. ಈ ಹೋರಾಟ ಪರಿಣಾಮ ಸಚಿವ ಸ್ಥಾನದಿಂದ ಬಿ.ನಾಗೇಂದ್ರ ಅವರು ರಾಜೀನಾಮೆ ಕೊಡಬೇಕಾಯಿತು. ಸಿಎಂ ಸಿದ್ದರಾಮಯ್ಯ ಅವರು ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ಹಣ ದುರ್ಬಳಕೆ ಮಾಡಿಕೊಂಡಿದೆ, ಲೋಕಸಭೆ ಚುನಾವಣೆಗೆ ಬಳಕೆಯಾಗಿದೆ, ಹೆಂಡ ಖರೀದಿ ಮಾಡಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ ಎಂದರು.

ರಾಜ್ಯ ಸರ್ಕಾರ ರಚಿಸಿದ ಎಸ್‌ಐಟಿ ತರಾತುರಿಯಲ್ಲಿ ತನಿಖೆ ಮಾಡಿ ನಾಗೇಂದ್ರ ಮತ್ತು ದದ್ಧಲ್‌ಗೆ ಕ್ಲೀನ್‌ ಚಿಟ್ ಕೊಟ್ಟಿದ್ದಾರೆ. ಇದು ನಿರೀಕ್ಷಿತ ಎನ್ನುವುದು ನಮ್ಮಗೂ ಗೊತ್ತಿತ್ತು. ಎಸ್‌ಐಟಿ ನಾಗೇಂದ್ರ ಮತ್ತು ದದ್ಧಲ್ ತಪ್ಪಿಸ್ಥರು ಎಂದಿದ್ದರೆ ಸಿಎಂಗೆ ಸಮಸ್ಯೆಯಾಗುತ್ತಿತ್ತು. ಸಿಎಂ ಬುಡಕ್ಕೆ ಬರುತ್ತಿತ್ತು ಎನ್ನುವ ಕಾರಣಕ್ಕೆ ಕ್ಲೀನ್‌ ಚಿಟ್ ಕೊಟ್ಟಿದೆ.

BJP state president BY Vijayendra
ಮುಡಾ ಹಗರಣ: ಗಮನ ಬೇರೆಡೆಗೆ ಸೆಳೆಯುವ ಹುನ್ನಾರ, ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಮುಡಾ ಹಗರಣದಲ್ಲಿ 14 ಅಕ್ರಮ ನಿವೇಶನ ಪಡೆದಿದೆ. ಸಿದ್ದರಾಮಯ್ಯ ಸಿಎಂ ಆದ ಮೇಲೆ 5,000 ಕೋಟಿ ಹಗರಣವಾಗಿದೆ. ಅಭಿವೃದ್ಧಿ ಮಾಡುತ್ತೇವೆ ಎಂದು ಅಹಿಂದಾ ಸಮಾವೇಶ ಮಾಡಿಕೊಂಡು. ಈಗ ಅಹಿಂದಾ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ. ರಾಜ್ಯದಲ್ಲಿ ಎಸ್‌ ಎಸ್ಟಿಗೆ ಮೀಸಲಾದ ಹಣವನ್ನು ಲೂಟಿ ಹೊಡೆದಿದೆ ಎಂದು ಆರೋಪಿಸಿದರು.

ಮೈಸೂರಿನ ಮೂಡಾದಲ್ಲೂ ಬಡವರಿಗೆ ವಂಚನೆ ಮಾಡಿ, ರಿಯಲ್ ಎಸ್ಟೇಟ್ ನಡೆಸುವ ಪುಡಾರಿಗಳಿಗೆ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿ ಜೆಡಿಎಸ್ ಎತ್ತಿರುವ ಪ್ರಶ್ನೆಗಳಿಗೆ ಸಿಎಂ ಬಳಿ ಉತ್ತರ ಇಲ್ಲ. ಬಿಜೆಪಿ ಸರ್ಕಾರ ಇದ್ದಾಗಲೇ ನಿವೇಶನ ನೀಡಿದೆ ಎಂದು ಸಿಎಂ ಹೇಳಿದ್ದರು. ಬಿಜೆಪಿ ಅವಧಿಯಲ್ಲಿ 14 ನಿವೇಶನ ನೀಡಿದೆ ಎಂದು ಆರೋಪ ಮಾಡಿದೆ. ಆದರೆ, ಇದು ಮೂಡಾದ ಯಾವ ಸಭೆಯಲ್ಲಿ ಅನುಮತಿ ನೀಡಿಲ್ಲ. ರಾಜ್ಯ ಸರ್ಕಾರವೂ ಇದಕ್ಕೆ ಅನುಮತಿ ಪಡೆದುಕೊಂಡಿಲ್ಲ. ಅಕ್ರಮವಾಗಿ 14 ನಿವೇಶನ ಪಡೆದುಕೊಂಡಿದೆ ಎಂದು ಗೊತ್ತಿದ್ದರು. ವಿರೋಧ ಪಕ್ಷದ ನಾಯಕರಾಗಿ ಅನಾಯಸವಾಗಿ ಬರುತ್ತಿದೆ ಎಂದು ಸುಮ್ಮನೆ ಕೂತಿದ್ದರು ಎಂದು ವ್ಯಂಗ್ಯವಾಡಿದರು.

ವಿಜಯೇಂದ್ರ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಉನ್ನತ ಬಿಜೆಪಿ ನಾಯಕರನ್ನು ಭೇಟಿ ಮಾಡಲು ಮತ್ತು ರಾಜ್ಯದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಮತ್ತು ಪಕ್ಷದ ಸದಸ್ಯತ್ವ ವಿಚಾರದ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com