ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರ ಆಕ್ರೋಶ, ರಾಜಭವನ ಚಲೋ

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಸಂಸದರು ಭಾಗವಹಿಸಿದರು.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರ ಆಕ್ರೋಶ, ರಾಜಭವನ ಚಲೋ
Updated on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಶನಿವಾರ ಪ್ರತಿಭಟನೆ ನಡೆಸಿತು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಸಂಸದರು ಭಾಗವಹಿಸಿದರು.

ನಂತರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಿಂದ ರಾಜಭವನದವರೆಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಡಳಿತ ಪಕ್ಷದ ನಾಯಕರು ‘ರಾಜಭವನ ಚಲೋ’ ಮೆರವಣಿಗೆ ನಡೆಸಿದರು. ಈ ವೇಳೆ ರಾಜ್ಯಪಾಲರು ತೊಲಗಲಿ ಎಂದು ಘೋಷಣೆ ಕೂಗುವ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂದರ್ಭದಲ್ಲಿ ಗೆಹ್ಲೋಟ್ ತಮ್ಮ ವಿರುದ್ಧ ತಾರತಮ್ಯ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ತನಿಖೆ ನ್ಯಾಯಯುತವಾಗಿರಬೇಕು ಎಂದು ನಾವು ರಾಜ್ಯಪಾಲರನ್ನು ಒತ್ತಾಯಿಸುತ್ತೇವೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ತನಿಖೆಯಾಗಿದೆ. ಆದ್ದರಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಸಂವಿಧಾನದ ಪ್ರಕಾರ ಅನುಮತಿ ನೀಡಿ, ಕಾನೂನು ಕ್ರಮ ತೆಗೆದುಕೊಳ್ಳಬೇಕು. ಅನೇಕ ಒತ್ತಡವಿದ್ದರೂ ರಾಜ್ಯಪಾಲರು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ರಾಜ್ಯಪಾಲರ ಮುಂದೆ ಬೇರೆ ಪ್ರಕರಣಗಳೂ ಇವೆ, ಆದರೆ ಆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಅವರನ್ನು ಏಕೆ ಪರಿಗಣಿಸುತ್ತಿಲ್ಲ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುತ್ತಿಲ್ಲ ಎಂಬುದು ನಮ್ಮ ಬೇಡಿಕೆಯಾಗಿದೆ ಎಂದರು. ರಾಜ್ಯಪಾಲರು ನ್ಯಾಯಸಮ್ಮತ ನಿರ್ಧಾರ ಕೈಗೊಂಡು ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿರುವುದಾಗಿ ಎಂದು ಸಚಿವ ಎಚ್. ಕೆ.ಪಾಟೀಲ್ ಹೇಳಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರ ಆಕ್ರೋಶ, ರಾಜಭವನ ಚಲೋ
ರಾಜೀನಾಮೆ ಇಲ್ಲ; ಮತ್ತೆ ಹೋರಾಟದ ಹಾದಿ ಹಿಡಿದ ಸಿದ್ದರಾಮಯ್ಯ (ಸುದ್ದಿ ವಿಶ್ಲೇಷಣೆ)

1988ರ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 218ರ ಅಡಿಯಲ್ಲಿ ಸಿಎಂ ವಿರುದ್ಧ ಮೂವರು ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿರುವ ದೂರುಗಳಲ್ಲಿ ಉಲ್ಲೇಖಿಸಿರುವ ಅಪರಾಧ ಕುರಿತ ತನಿಖೆ ನಡೆಸಿ, ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಆಗಸ್ಟ್ 16ರಂದು ಅನುಮತಿ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com