ನನ್ನ ಮೌನವನ್ನು ದೌರ್ಬಲ್ಯ ಎಂದು ಭಾವಿಸದಿರಿ: ಬಂಡಾಯ ನಾಯಕರಿಗೆ ವಿಜಯೇಂದ್ರ ಎಚ್ಚರಿಕೆ

ಎಲ್ಲರನ್ನು ಕರೆದುಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಗನಾಗಿರುವುದೇ ಅಪರಾಧ ಎಂಬ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತೇವೆ.
B.y. Vijayendra
ಬಿ.ವೈ. ವಿಜಯೇಂದ್ರ
Updated on

ಬೆಂಗಳೂರು: ನನ್ನ ಮೌನವನ್ನು ದೌರ್ಬಲ್ಯವೆಂದು ಭಾವಿಸಬೇಡಿ, ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿರುವವರಿಗೆ ನಿರಾಶೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಶನಿವಾರ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರನ್ನು ಕರೆದುಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪಕ್ಷದ ಕೇಂದ್ರ ನಾಯಕರು ನನ್ನ ಪ್ರಯತ್ನದಿಂದ ತೃಪ್ತರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಗನಾಗಿರುವುದೇ ಅಪರಾಧ ಎಂಬ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತೇವೆಂದು ಹೇಳಿದರು.

B.y. Vijayendra
ಯತ್ನಾಳ್ ಹರಕುಬಾಯಿಂದ ಉಪ ಚುನಾವಣೆಯಲ್ಲಿ ಸೋಲು; ಯಡಿಯೂರಪ್ಪಗೆ ಮೀರ್ ಸಾಧಕ್, ಶಕುನಿಗಳ ಕಾಟ: ರೇಣುಕಾಚಾರ್ಯ

ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ದೆಹಲಿಗೆ ತೆರಳಿ ದೂರು ಕೊಡುತ್ತಿಲ್ಲ. ಕೇಂದ್ರ ನಾಯಕರು ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ, ದಿನನಿತ್ಯ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದು, ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಅವರದೇ ಆದ ರೀತಿಯಲ್ಲಿ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.

ದೆಹಲಿಯಲ್ಲಿ ಪಕ್ಷದ ಕೇಂದ್ರ ನಾಯಕರನ್ನು ಭೇಟಿ ಮಾಡಿದ್ದೇನೆ. ದೆಹಲಿ ಮತ್ತು ರಾಜ್ಯದ ಮೂರು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆ ಫಲಿತಾಂಶಗಳ ಬಗ್ಗೆ ರಾಜ್ಯದಲ್ಲಾಗುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಗಮನಕ್ಕೆ ತಂದಿದ್ದೇನೆ. ಕೆಲವರ ನಡವಳಿಕೆಯಿಂದ ಅವರು ಎತ್ತರಕ್ಕೆ ಬೆಳೆಯುವ ಭ್ರಮೆಯಲ್ಲಿದ್ದರೆ, ಅದು ಖಂಡಿತ ಸಾಧ್ಯವಿಲ್ಲ. ನನ್ನ ಮೌನವನ್ನು ದೌರ್ಬಲ್ಯವೆಂದು ಪರಿಗಣಿಸಿದರೆ ಅದು ತಪ್ಪು. ಕಾರ್ಯಕರ್ತರು ಕೂಡ ಹಿಡಿಶಾಪ ಹಾಕುತ್ತಿದ್ದಾರೆ. ಇದೆಲ್ಲಕ್ಕೂ ಇತಿಶ್ರೀ ಹಾಡಬೇಕೆಂಬ ಅಪೇಕ್ಷೆ ಕಾರ್ಯಕರ್ತರಲ್ಲೂ ಇದೆ. ಯಾರ ಗಮನಕ್ಕೆ ತರಬೇಕೋ ಅದನ್ನು ತಂದಿದ್ದೇನೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com