
ಬೆಂಗಳೂರು: 2028ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ತಂದೆ-ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಸಹೋದರ-ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಜೆಡಿಎಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಬುಧವಾರ ಹೇಳಿದ್ದಾರೆ.
ಹಾಸನದಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ (ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ) ಬಗ್ ಪ್ರತಿಕ್ರಿಯಿಸಿದ ಅವರು, ಸಮಾವೇಶ ನಡೆಸುವುದರಿಂದ ನಮಗೆ ಆತಂಕವಿಲ್ಲ. ಅವರು ಜೆಡಿಎಸ್ ಅನ್ನು ಗುರಿಯಾಗಿಟ್ಟುಕೊಂಡು ಸಮಾವೇಶ ನಡೆಸಲು ಬಯಸಿದರೆ, ಅದನ್ನು ಮಾಡಲಿ. ಇದಕ್ಕೆಲ್ಲ ನಾವೂ ಸಿದ್ಧರಿದ್ದೇವೆ ಮತ್ತು 2028ರ ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತೇವೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗುರಿಯಾಗಿಸಲು ಹೋದಾಗ ಏನಾಯಿತು ಎಂಬುದು ನಮಗೆ ತಿಳಿದಿದೆ ಎಂದರು. ಆ ವೇಳೆ ಕಾಂಗ್ರೆಸ್ ಎಚ್ ಡಿ ದೇವೇಗೌಡ, ಎಚ್ ಡಿ ಕುಮಾರಸ್ವಾಮಿ ಅವರ ಬಳಿ ಬರಬೇಕಿತ್ತು ಅಲ್ಲವೇ?’’ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಸಮಾವೇಶ ನಡೆಸಿ ಹಾಸನ ಜಿಲ್ಲೆಯನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲಿ, ನಮಗೆ ಯಾವುದೇ ತೊಂದರೆ ಇಲ್ಲ. ಕಳೆದ 50 ವರ್ಷಗಳಲ್ಲಿ ಹಾಸನಕ್ಕೆ ಕಾಂಗ್ರೆಸ್ ಏನೂ ಮಾಡಿಲ್ಲ. ನಾವು ಈಗಾಗಲೇ ಹಲವು ಬಾರಿ ಸೋಲು-ಗೆಲುವನ್ನು ಕಂಡಿದ್ದೇವೆ. ಕಾಂಗ್ರೆಸ್ ಸಮಾವೇಶ ನಡೆಸುವ ಬಗ್ಗೆ ನಾವು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
ವಿಧಾನಸಭೆ ಚುನಾವಣೆ ಮುಗಿದು ಒಂದು ವರ್ಷದ ನಂತರ ನಡೆದ ಲೋಕಸಭೆ ಚುನಾವಣೆಯಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ, ದೇವರು ಮತ್ತು ಜನರಿಂದ ಮಾತ್ರ ನಮ್ಮನ್ನು ಮುಗಿಸಲು ಸಾಧ್ಯ ಎಂದು ವ್ಯಂಗ್ಯವಾಡಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದು ಹಾಸನದಲ್ಲಿ ಹೊರ ವರ್ತುಲ ರಸ್ತೆಗೆ ಹಸಿರು ನಿಶಾನೆ ತೋರಿದ್ದೇನೆ ಎಂದು ಅವರು ಹೇಳಿದರು. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ರೈಲ್ವೆ ಮೇಲ್ಸೇತುವೆ, ದ್ವಿಪಥದಿಂದ ನಾಲ್ಕು ಪಥಕ್ಕೆ ಮೇಲ್ದರ್ಜೆಗೇರಿಸುವುದು ಸೇರಿದಂತೆ ಹಲವು ಯೋಜನೆಗಳಿಗೆ ಅನುಮತಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
Advertisement