ನಿಖಿಲ್ ಕುಮಾರಸ್ವಾಮಿ ಸಾರಥ್ಯದಲ್ಲಿ ಭವಿಷ್ಯದ ಚುನಾವಣೆ; HDK ಪುತ್ರನಿಗೆ JDS ರಾಜ್ಯಾಧ್ಯಕ್ಷ ಹುದ್ದೆ!

ಈಗ ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವ ಕಾರಣ ನಿಖಿಲ್‌ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಹಸ್ತಾಂತರವಾಗುವ ಸಾಧ್ಯತೆಯಿದೆ.
Nikhil Kumaraswamy
ನಿಖಿಲ್ ಕುಮಾರಸ್ವಾಮಿ
Updated on

ಬೆಂಗಳೂರು: ಇತ್ತೀಚೆಗಷ್ಟೇ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸೋತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2025ರಲ್ಲಿ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಿಂದ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷವನ್ನು ಮುನ್ನಡೆಸುವ ಸಾಧ್ಯತೆ ಇದೆ.

ಕಳೆದ ತಿಂಗಳ ಉಪಚುನಾವಣೆಯ ಜೊತೆಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಪುತ್ರ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗನಾಗಿರುವ ನಿಖಿಲ್ ಹಿಂದಿನ ಎರಡು ಚುನಾವಣಾ ಕದನಗಳಲ್ಲಿಯೂ ಸೋತಿದ್ದರು. 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಮತ್ತು 2023 ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಚನ್ನಪಟ್ಟಣದಲ್ಲಿ ನಿಖಿಲ್ ಸತತ ಮೂರನೇ ಸೋಲು ಕಂಡಿದ್ದಾರೆ. ಸದ್ಯ ಕುಮಾರಸ್ವಾಮಿ ರಾಜ್ಯ ಜೆಡಿಎಸ್ ಅಧ್ಯಕ್ಷರಾಗಿದ್ದಾರೆ. ಈಗ ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವ ಕಾರಣ ನಿಖಿಲ್‌ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಹಸ್ತಾಂತರವಾಗುವ ಸಾಧ್ಯತೆಯಿದೆ ಎಂದು ಬಲ್ಲ ಮೂಲಗಳು ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

ಚನ್ನಪಟ್ಟಣದಲ್ಲಿ ಗೆಲುವು ನಿಖಿಲ್‌ಗೆ ಬಲ ತುಂಬುತ್ತಿತ್ತು. ಆದರೆ ಸತತ ಸೋಲಿನಿಂದ ಕಂಗೆಡದ ಜೆಡಿಎಸ್ ಯುವ ನಾಯಕ ಇದೀಗ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ ಎಂಬುದು ಜೆಡಿಎಸ್ ಒಳಗಿನವರ ಮಾತು. ನಿಖಿಲ್ ಇತ್ತೀಚೆಗೆ ನವದೆಹಲಿಯಲ್ಲಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಸೇರಿದಂತೆ ಹಲವು ಬಿಜೆಪಿ ಕೇಂದ್ರ ನಾಯಕರನ್ನು ಭೇಟಿಯಾಗಿದ್ದಾರೆ. ಸೋಮವಾರ, ನಿಖಿಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Nikhil Kumaraswamy
BL ಸಂತೋಷ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಭವಿಷ್ಯದ ರಾಜಕೀಯಕ್ಕಾಗಿ ಸಲಹೆ-ಮಾರ್ಗದರ್ಶನ

“ನನ್ನ ದೆಹಲಿ ಭೇಟಿಯ ಸಂದರ್ಭದಲ್ಲಿ, ಸಂತೋಷ್‌ಜಿ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆಯುವ ಭಾಗ್ಯ ನನಗೆ ಸಿಕ್ಕಿತು. ಅವರು ಚನ್ನಪಟ್ಟಣ ಉಪಚುನಾವಣೆಯ ಪ್ರಮುಖ ಅಂಶಗಳನ್ನು ಚರ್ಚಿಸಿದರು, ಮಾಹಿತಿ ಕೇಳಿದರು, ನನ್ನ ರಾಜಕೀಯ ಪ್ರಯಾಣದ ಜೊತೆಗೆ ನನಗೆ ಮಹತ್ವದ ಮಾರ್ಗದರ್ಶನವನ್ನು ನೀಡಿದರು ಎಂದು ದೆಹಲಿಯಲ್ಲಿ ಸಂತೋಷ್ ಅವರನ್ನು ಭೇಟಿಯಾದ ನಂತರ ನಿಖಿಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಾನು ಇದನ್ನು ಮಾತ್ರ ಹೇಳುತ್ತಿದ್ದೇನೆ, ಮುಂದೆ ನಿಖಿಲ್ ಪಕ್ಷದ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆ. ಶಾಸಕನಾಗುವುದೊಂದೇ ಸಾಧನೆಯಲ್ಲ. ಅವರು ಚಿಕ್ಕವರಾಗಿದ್ದು, ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ, ಅವರ ಬೆನ್ನಿಗೆ ಅನುಭವ ಮತ್ತು ಕುಟುಂಬದ ಹಿನ್ನೆಲೆಯೂ ಇದೆ. ಹೀಗಾಗಿ ನಾವು ನಿಖಿಲ್ ಗೆ ಹೆಚ್ಚಿನ ಜವಾಬ್ದಾರಿ ನೀಡುತ್ತೇವೆ ಎಂದು ದೇವೇಗೌಡರು ಶನಿವಾರ ನವದೆಹಲಿಯಲ್ಲಿ ಖಾಸಗಿ ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com