ವಕ್ಫ್ ವಿವಾದ: ನಿಲುವಳಿ ಸೂಚನೆಯಡಿ ಚರ್ಚೆಗೆ ಬಿಜೆಪಿ ಒತ್ತಾಯ, ತೀವ್ರ ಮಾತಿನ ಚಕಮಕಿ!

ಪ್ರಶ್ನೋತ್ತರ ಅವಧಿ ಬದಲಿಗೆ ನಿಲುವಳಿ ಸೂಚನೆಯಡಿ ಕೂಡಲೇ ವಕ್ಫ್ ವಿವಾದ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪೀಕರ್ ಬಳಿ ಮನವಿ ಮಾಡಿದರು.
Assembly
ವಿಧಾನಸಭೆ
Updated on

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ವಕ್ಪ್ ವಿವಾದ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ, ಪ್ರತಿಪಕ್ಷ ಬಿಜೆಪಿ ಹಾಗೂ ಆಡಳಿತಾರೂಢ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ, ವಾಗ್ಯುದ್ದಕ್ಕೆ ಕಾರಣವಾಯಿತು.

ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಶ್ನೋತ್ತರ ಅವಧಿ ಬದಿಗೊತ್ತಿ, ವಕ್ಫ್ ವಿವಾದ ಕುರಿತು ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ಒತ್ತಾಯಿಸಿತು. ಆದಾಗ್ಯೂ, ಇದಕ್ಕೆ ಅವಕಾಶ ನೀಡದ ಸ್ಪೀಕರ್ ಯು. ಟಿ.ಖಾದರ್ ನಿಯಮ ಪ್ರಕಾರವೇ ಕಲಾಪ ನಡೆಯಲು ಅವಕಾಶ ನೀಡುವಂತೆ ಪ್ರತಿಪಕ್ಷದ ಸದಸ್ಯರಿಗೆ ಹೇಳಿದರು.

ಪ್ರಶ್ನೋತ್ತರ ಅವಧಿ ಬದಲಿಗೆ ನಿಲುವಳಿ ಸೂಚನೆಯಡಿ ಕೂಡಲೇ ವಕ್ಫ್ ವಿವಾದ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪೀಕರ್ ಬಳಿ ಮನವಿ ಮಾಡಿದರು. ಅಶೋಕ್ ಜೊತೆಗೂಡಿದ ವಿಧಾನಸಭೆ ಉಪ ಪ್ರತಿಪಕ್ಷ ನಾಯಕ ಅರವಿಂದ್ ಬೆಲ್ಲದ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸುನೀಲ್ ಕುಮಾರ್ ವಕ್ಫ್ ವಿವಾದ ಕುರಿತು ಚರ್ಚಿಸಲು ಪ್ರಶ್ನೋತ್ತರ ಅವಧಿ ಬದಿಗೊತ್ತುವಂತೆ ಸಭಾಧ್ಯಕ್ಷರನ್ನು ಒತ್ತಾಯಿಸಿದರು.

Assembly
ಹಣಕಾಸು ಇಲಾಖೆ ಒಪ್ಪಿಗೆ ಪಡೆದ ನಂತರ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಸಚಿವ ಮಧು ಬಂಗಾರಪ್ಪ

ಈ ಮಧ್ಯೆ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದ ಪ್ರತಿಪಕ್ಷ ಶಾಸಕರ ನಡುವೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಟೀಕಿಸಿದರು. ಪ್ರತಿಪಕ್ಷಗಳು ಪ್ರಸ್ತಾಪಿಸುವ ವಿಚಾರಗಳ ಚರ್ಚೆಗೆ ಸರ್ಕಾರ ಸಿದ್ಧವಿದ್ದು, ಸದನದ ನಿಯಮಗಳನ್ನು ಗೌರವಿಸಬೇಕು ಎಂದು ಸ್ಪೀಕರ್ ಮನವಿ ಮಾಡಿದರು. ಇದರ ಹೊರತಾಗಿಯೂ ತಮ್ಮ ನಿಲುವುಗಳಿಗೆ ಅಂಟಿಕೊಂಡ ಪ್ರತಿಪಕ್ಷ ನಾಯಕರು, ಪದೇ ಪದೇ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವಂತೆ ಒತ್ತಾಯಿಸಿದರು.

ಈ ಪರಿಸ್ಥಿತಿ ನಡುವೆ ಬಿಜೆಪಿ ಮತ್ತು ಆರ್ ಎಸ್ಎಸ್ ಬಸವಣ್ಣ ವಿರೋಧಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ನೀಡಿದ ಹೇಳಿಕೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

ಈ ಗದ್ದಲದ ನಡುವೆಯೇ ಖಾದರ್ ಎರಡೂ ಕಡೆಯ ಸದಸ್ಯರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾದರು. ಶಾಸಕಾಂಗ ನಿಯಮಗಳ ಪ್ರಕಾರ ಸದನ ಕಾರ್ಯ ನಿರ್ವಹಿಸಲಿದ್ದು, ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿದ ನಂತರ ಮುಂದೂಡಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com