ಕಾಂಗ್ರೆಸ್‌ನ ದುರಾಡಳಿತ, ಭ್ರಷ್ಟಾಚಾರವನ್ನು BJP ಬಯಲಿಗೆಳೆಯಲಿದೆ: ಆರ್.ಅಶೋಕ್

ಬೆಳಗಾವಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೋಮವಾರ ನಡೆದಿದ್ದು, ಸಭೆಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ರೈತ ವಿರೋಧಿ ಆಡಳಿತದ ವಿರುದ್ಧ ಹೋರಾಟ ನಡೆಸುವ ಕುರಿತು ಚರ್ಚೆ ನಡೆದಿದೆ.
R.Ashok
ವಿಪಕ್ಷ ನಾಯಕ ಆರ್.ಅಶೋಕ್
Updated on

ಬೆಂಗಳೂರು/ಬೆಳಗಾವಿ: ಕಾಂಗ್ರೆಸ್ ಪಕ್ಷದ ದುರಾಡಳಿತ, ಭ್ರಷ್ಟಾಚಾರವನ್ನು ಬಿಜೆಪಿ ಬಯಲಿಗೆಳೆಯಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸೋಮವಾರ ಹೇಳಿದರು.

ಬೆಳಗಾವಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೋಮವಾರ ನಡೆದಿದ್ದು, ಸಭೆಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ರೈತ ವಿರೋಧಿ ಆಡಳಿತದ ವಿರುದ್ಧ ಹೋರಾಟ ನಡೆಸುವ ಕುರಿತು ಚರ್ಚೆ ನಡೆದಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಅವರು, ರಾಜ್ಯವನ್ನು ಕಾಡುತ್ತಿರುವ ಹಲವಾರು ಸಮಸ್ಯೆಗಳ ಕುರಿತು ಉತ್ತರದಾಯಿತ್ವಕ್ಕೆ ಒತ್ತಾಯಿಸಿ ಪ್ರತಿಪಕ್ಷಗಳು ಕಾಂಗ್ರೆಸ್‌ ವಿರುದ್ಧ ಹೋರಾಟ ನಡೆಸಲಿಗ ಎಂದು ಹೇಳಿದರು.

ಸರಕಾರದ ನಿರ್ಲಕ್ಷ್ಯದಿಂದ ಕರ್ನಾಟಕದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆಗಳು ಹಾಳಾಗಿವೆ, ಆಸ್ಪತ್ರೆಗಳು ತೀವ್ರ ಔಷಧದ ಕೊರತೆಯನ್ನು ಎದುರಿಸುತ್ತಿವೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಭಾರೀ ಮಳೆಯ ನಂತರವೂ ಈ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿದೆ. ಅಧಿವೇಶನದಲ್ಲಿ ಈ ಬಗ್ಗೆ ಪ್ರಶ್ನೆ ಎತ್ತಲಾಗುವುದು ಎಂದು ತಿಳಿಸಿದರು.

R.Ashok
ST Somashekar: ಮನಸ್ಸೆಲ್ಲಾ ಕಾಂಗ್ರೆಸ್ ಕಡೆಗಿದೆ, ಯಾವುದೇ ಕ್ರಮ ಕೈಗೊಂಡರೂ ಸ್ವಾಗತ

ಇದೇ ವೇಳೆ ಭ್ರಷ್ಟಾಚಾರ ವಿಚಾರ ಕುರಿತು ಮಾತನಾಡಿದ ಅವರು, ಹಣವಿಲ್ಲದೇ ಯಾವುದೇ ಕೆಲಸಗಳಾಗುತ್ತಿಲ್ಲ. ಕಾಮಗಾರಿ ಗುತ್ತಿಗೆ ಪಡೆಯಲು ಗುತ್ತಿಗೆದಾರರು ಅಧಿಕಾರಿಗಳಿಗೆ ಬಹಿರಂಗವಾಗಿ ಲಂಚ ನೀಡುತ್ತಿದ್ದಾರೆ. ಶಾಸಕರ ಮೇಲಿನ ಗೌರವ ಸಂಪೂರ್ಣ ಹಾಳಾಗಿದೆ. ಭ್ರಷ್ಟಾಚಾರವು ಬೇರುಬಿಟ್ಟಿದೆ, ಇದು ರಾಜ್ಯದ ಪ್ರಗತಿಯನ್ನು ಉಸಿರುಗಟ್ಟಿಸುತ್ತಿದೆ ಎಂದರು.

ಅಧಿವೇಶನದಲ್ಲಿ ಕೃಷ್ಣಾ ಯೋಜನೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮೇಲೆ ಪರಿಣಾಮ ಬೀರುವ ತೀವ್ರ ಹಣಕಾಸಿನ ಬಿಕ್ಕಟ್ಟುಸ ನೀರಿನ ಯೋಜನೆಗಳಿಗೆ ಹಣದ ಕೊರತೆ, ಭ್ರಷ್ಟಾಚಾರ, ದುರಾಡಳಿತ, ಸರ್ಕಾರದ ನಿರ್ಲಕ್ಷದಿಂದ ರೈತರ ಹಾಗೂ ಅವರ ಮಕ್ಕಳ ಸಾವು ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಗುತ್ತದೆ. ಅಧಿವೇಶನಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶಿಸಲಿದೆ ಎಂದು ಹೇಳಿದರು.

ವಿಜಯೇಂದ್ರ ಅವರೂ ಬೆಂಬಲ ನೀಡಿದ್ದಾರೆ. ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರಂತಹ ಕೆಲವು ಸದಸ್ಯರ ಗೈರುಹಾಜರಿಯ ಹೊರತಾಗಿಯೂ, ಕಾಂಗ್ರೆಸ್ ವೈಫಲ್ಯವನ್ನು ಬಹಿರಂಗಪಡಿಸಲು ಪಕ್ಷವು ಒಗ್ಗಟ್ಟಾಗಿದೆ ಎಂದು ಅಶೋಕ್ ಒತ್ತಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com