ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ತಯಾರಿಲ್ಲದ ಸರ್ಕಾರ, ಸದನದ ದಿಕ್ಕು ತಪ್ಪಿಸುವ ಕೆಲಸ: ಬಿ.ವೈ ವಿಜಯೇಂದ್ರ

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ತಯಾರಿಲ್ಲ. ಬಾಣಂತಿಯರು, ಶಿಶುಗಳ ಸಾವಿನ ಕುರಿತು ಚರ್ಚಿಸಲು ತಯಾರಿಲ್ಲ.
B.Y.Vijayendra
ಬಿ.ವೈ. ವಿಜಯೇಂದ್ರ
Updated on

ಬೆಂಗಳೂರು: ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ತಯಾರಿಲ್ಲದ ಸರ್ಕಾರ, ಈಗ ಕೋವಿಡ್ ಕುರಿತಂತೆ ಮಧ್ಯಂತರ ವರದಿ ತೆಗೆದುಕೊಂಡು ಅದರ ಆಧಾರದಲ್ಲಿ ಎಫ್‍ಐಆರ್ ದಾಖಲಿಸಿ, ಅಧಿವೇಶನದಲ್ಲಿ ಚರ್ಚಿಸಲು ಬಯಸುತ್ತಿರುವುದು ಸದನದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಳೆ ಅಧಿವೇಶನದಲ್ಲಿ ಮುನಿರತ್ನ, ಯಡಿಯೂರಪ್ಪ, ಕೋವಿಡ್ ಕುರಿತಂತೆ ಚರ್ಚಿಸಬೇಕೆಂದು ಚಿಂತಿಸುತ್ತಿರುವ ಬಗ್ಗೆ ವರದಿಯಾಗಿದೆ. ಕೋವಿಡ್ ಸಂಬಂಧ ಮೈಕೆಲ್ ಡಿಕುನ್ಹ ಅವರ ಮಧ್ಯಂತರ ವರದಿ ತರಿಸಲು ಏನು ಆತುರವಿತ್ತು ಎಂದು ಪ್ರಶ್ನಿಸಿದರು.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಈ ಲಜ್ಜೆಗೆಟ್ಟ ಕಾಂಗ್ರೆಸ್ ಸರಕಾರವು ಬೆಳಗಾವಿ ಚಳಿಗಾಲದ ಅಧಿವೇಶನದ ಸಮಯವನ್ನು ಸಂಪೂರ್ಣವಾಗಿ ವ್ಯರ್ಥ ಮಾಡುತ್ತಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರಕಾರ ತಯಾರಿಲ್ಲ ಎಂದು ಟೀಕಿಸಿದರು.

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ತಯಾರಿಲ್ಲ. ಬಾಣಂತಿಯರು, ಶಿಶುಗಳ ಸಾವಿನ ಕುರಿತು ಚರ್ಚಿಸಲು ತಯಾರಿಲ್ಲ; ಮುಡಾ ಹಗರಣ ಸಂಬಂಧ ಸಿಬಿಐ ತನಿಖೆ ಆಗಬೇಕೆಂಬ ಚರ್ಚೆ ನಡೆದಿದೆ. ಇನ್ನೊಂದೆಡೆ ಇ.ಡಿ. ತನಿಖೆ ನಡೆಯುತ್ತಿದೆ. ಹಾಗಾಗಿ ಮುಖ್ಯಮಂತ್ರಿಗಳು ವಿಚಲಿತರಾದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಿಸಿದರು.

B.Y.Vijayendra
ಬೆಳಗಾವಿ ಅಧಿವೇಶನ: ಸದನದಲ್ಲೂ ಸಮನ್ವಯದ ಕೊರತೆ; ತಾನೇ ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ!

ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಲಾಠಿ ಪ್ರಹಾರ: ರಾಜ್ಯ ಸರಕಾರಕ್ಕೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ; ಸಮಸ್ಯೆಗಳಿಂದ ಓಡಿಹೋಗುವ ಪ್ರಯತ್ನ ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಪಂಚಮಸಾಲಿ ಸಮುದಾಯದ ಮೇಲೆ, ಹಿಂದೂಗಳ ಮೇಲೆ ಲಾಠಿಪ್ರಹಾರ ಆಗಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು.

ನಾಳೆ ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ನಡೆಯಬೇಕಿದೆ. ಇವರ ರಾಜಕೀಯಪ್ರೇರಿತ ತನಿಖೆ, ದಬ್ಬಾಳಿಕೆಗಳಿಗೆ ಹೆದರಿ ಓಡಿಹೋಗುವ ಪ್ರಶ್ನೆ ಇಲ್ಲ; ಏನೇ ಬಂದರೂ ಅದನ್ನು ಧೈರ್ಯವಾಗಿ ಎದುರಿಸುತ್ತೇವೆ ಎಂದು ಸವಾಲು ಹಾಕಿದರು. ರಾಜ್ಯ ಸರಕಾರವು ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು.

ಇದೇ ವೇಳೆ ಅನ್ವರ್ ಮಾಣಿಪ್ಪಾಡಿಗೆ ರೂ. 150 ಕೋಟಿ ಆಫರ್ ಕುರಿತ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಬಿಜೆಪಿ ಸರಕಾರ ಇದ್ದಾಗ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅನ್ವರ್ ಮಾಣಿಪ್ಪಾಡಿ ಅವರ ವಕ್ಫ್ ಕುರಿತ ವರದಿಯಲ್ಲಿ ಕಾಂಗ್ರೆಸ್ ಮುಖಂಡರ ಅವ್ಯವಹಾರದ ವಿವರ ಇತ್ತು. ಮುಖ್ಯಮಂತ್ರಿಗಳ ಮಗನಾಗಿ ನಾನ್ಯಾಕೆ ಅನ್ವರ್ ಮಾಣಿಪ್ಪಾಡಿ ಅವರ ಮನೆಗೆ ಹೋಗಲಿ? ಕಾಂಗ್ರೆಸ್ ಮುಖಂಡರನ್ನು ಬಚಾವ್ ಮಾಡಲು ನಾನೇಕೆ ರೂ. 150 ಕೋಟಿ ಯಾಕೆ ಆಫರ್ ಮಾಡಲಿ. ಇದರಲ್ಲಿ ಏನಾದರೂ ತರ್ಕ ಇದೆಯೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಇದನ್ನು ಮುಂದಿಟ್ಟು ಸದನದ ಸಮಯ ವ್ಯರ್ಥ ಮಾಡುವುದಾದರೆ ಅದು ಮೂರ್ಖತನದ ಪರಮಾವಧಿ ಎಂದು ಆಕ್ಷೇಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com