ಗೃಹ ಇಲಾಖೆ ತಾಲಿಬಾನಿಗಳ ಕೈಯಲ್ಲಿದೆಯೋ ಅಥವಾ ತಾಲೀಬಾನಿಗಳ ಸರ್ಕಾರ ರಾಜ್ಯದಲ್ಲಿದೆಯೋ?: ಸರ್ಕಾರದ ವಿರುದ್ಧ BJP ಆಕ್ರೋಶ

ಒಬ್ಬ ಮಾಜಿ ಸಚಿವರು, ಹಾಲಿ ಶಾಸಕರೇ ತಮ್ಮ ಜೀವಕ್ಕೆ ಅಪಾಯವಿದೆ, ಕಾಂಗ್ರೆಸ್ ಸರ್ಕಾರ ಕೊಲೆ‌ ಮಾಡಲು ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಗೃಹ ಇಲಾಖೆ ತಾಲಿಬಾನಿಗಳ ಕೈಯಲ್ಲಿದೆಯೋ ಅಥವಾ ತಾಲೀಬಾನಿಗಳ ಸರ್ಕಾರ ರಾಜ್ಯದಲ್ಲಿದೆಯೋ?
BJP
BJPPTI
Updated on: 

ಬೆಂಗಳೂರು: ದೆಹಲಿಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಜೆಪಿ ಸಂಸದರ‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಪೊಲೀಸ್ ಇಲಾಖೆಯ ಮೂಲಕ ಮರ್ಡರ್ ಮಾಡಿಸಲು ಪ್ರಯತ್ನ ನಡೆಸಿರುವುದು ಖಂಡನೀಯ ಎಂದು ಬಿಜೆಪಿ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಒಬ್ಬ ಮಾಜಿ ಸಚಿವರು, ಹಾಲಿ ಶಾಸಕರೇ ತಮ್ಮ ಜೀವಕ್ಕೆ ಅಪಾಯವಿದೆ, ಕಾಂಗ್ರೆಸ್ ಸರ್ಕಾರ ಕೊಲೆ‌ ಮಾಡಲು ಸಂಚು ರೂಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಗೃಹ ಇಲಾಖೆ ತಾಲಿಬಾನಿಗಳ ಕೈಯಲ್ಲಿದೆಯೋ ಅಥವಾ ತಾಲೀಬಾನಿಗಳ ಸರ್ಕಾರ ರಾಜ್ಯದಲ್ಲಿದೆಯೋ? ಎಂದು ಪ್ರಶ್ನಿಸಿದೆ.

BJP
ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ಯಾವುದೇ ತೊಂದರೆಯಾದರೆ ಪೊಲೀಸ್ ಇಲಾಖೆ-ಕಾಂಗ್ರೆಸ್ ಕಾರಣ: ಸಿಟಿ ರವಿ

ಒಬ್ಬ ಶಾಸಕನನ್ನೇ ಕೊಲೆ ಮಾಡಲು ಯತ್ನಿಸುತ್ತಿದೆಯೇ ಸರ್ಕಾರ!? ಬಂಧಿತನಾದ ಶಾಸಕರನ್ನು ಒಂದು ಪೊಲೀಸ್ ಠಾಣೆಯಿಂದ ಮತ್ತೊಂದು ಪೊಲೀಸ್ ಠಾಣೆಗೆ ಅಕ್ರಮವಾಗಿ ಕರೆದುಕೊಂಡು ಹೋಗಿ ದಾರಿ ಮಧ್ಯೆ ಎನ್‌ಕೌಂಟರ್‌ ಮಾಡಲು ಯೋಜನೆ ರಾಜ್ಯ ಸರ್ಕಾರ ರೂಪಿಸಿತ್ತೇ ಎನ್ನುವ ಅನುಮಾನ ಕಾಡುತ್ತಿದೆ. ದೆಹಲಿಯಲ್ಲಿ ವಿಪಕ್ಷ ನಾಯಕ ಬಿಜೆಪಿ ಸಂಸದರ‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನ ಪರಿಷತ್ ಸದಸ್ಯರು ಮತ್ತು ಮಾಜಿ ಸಚಿವರಾದ ಸಿಟಿ ರವಿ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಪೊಲೀಸ್ ಇಲಾಖೆಯ ಮೂಲಕ ಮರ್ಡರ್ ಮಾಡಿಸಲು ಪ್ರಯತ್ನ ನಡೆಸಿರುವುದು ಖಂಡನೀಯ. ಒಬ್ಬ ಮಾಜಿ ಸಚಿವ, ಹಾಲಿ ಪರಿಷತ್ ಸದಸ್ಯರ ಮೇಲೆ‌ ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಷರಶಃ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com