ಈ ರಾಜ್ಯದಲ್ಲಿ ಏನೇ ನಡೆದರೂ ನಾವೇ ಹೊಣೆಯೇ? ಒಂದು ಸುಳ್ಳು ಮುಚ್ಚಿಕೊಳ್ಳಲು ನೂರು ಸುಳ್ಳು: ಡಿ.ಕೆ ಶಿವಕುಮಾರ್

ಈ ವ್ಯಕ್ತಿಯಿಂದ ಇಂತಹ ಪ್ರವೃತ್ತಿ ಇದೇ ಮೊದಲಲ್ಲ. ಸಿದ್ದರಾಮಯ್ಯ ಅವರು, ಜಯಮಾಲ, ಸೇರಿದಂತೆ ನಮ್ಮ ನಾಯಕರ ಬಗ್ಗೆ ಈ ಹಿಂದೆ ಅನೇಕ ಬಾರಿ ಹೀನಾಯವಾಗಿ ಮಾತನಾಡಿದ್ದಾರೆ.
D K Shivakumar
ಡಿ ಕೆ ಶಿವಕುಮಾರ್
Updated on

ಬೆಂಗಳೂರು: ಈ ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವೇ? ಎಲ್ಲದಕ್ಕೂ ನಾನೇ ಹೊಣೆಯೇ? ಸಿ.ಟಿ. ರವಿ ಅವರ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಸಿ.ಟಿ. ರವಿ ಅವರ ಮೇಲೆ ಪೊಲೀಸ್ ಕ್ರಮ ತೆಗೆದುಕೊಳ್ಳುವ ವೇಳೆ ಡಿ.ಕೆ.ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಭಾವ ಬೀರಿದ್ದಾರೆ ಎನ್ನುವ ಬಿಜೆಪಿಯವರ ಆರೋಪಕ್ಕೆ ಅವರು ಈ ರೀತಿ ತಿರುಗೇಟು ನೀಡಿದರು. ಕ್ರಮ ತೆಗೆದುಕೊಳ್ಳಲು ಪೊಲೀಸರಿದ್ದಾರೆ, ಕಾನೂನಿದೆ. ಅವರು ಯಾವ, ಯಾವ ಸೆಕ್ಷನ್ ಗಳನ್ನು ಹಾಕಿದ್ದಾರೆ ಎಂಬುದು ನಮಗೆ ತಿಳಿದಿಲ್ಲ. ಇದರಲ್ಲಿ ನಮ್ಮ ಯಾವ ಹಸ್ತಕ್ಷೇಪವೂ ಇಲ್ಲ. ಅವರುಂಟು, ಕಾನೂನು ಹಾಗೂ ಪೊಲೀಸರುಂಟು" ಎಂದರು.

ಜಾಮೀನು ಸಿಕ್ಕಿರುವುದು ಮೊದಲ ಗೆಲುವು ಎಂದು ಸಿ.ಟಿ. ರವಿ ಅವರು ಹೇಳಿದ್ದಾರೆ ಎಂದಾಗ, "ತಾಯಿಗೆ, ಹೆಣ್ಣು ಕುಲಕ್ಕೆ, ನಮ್ಮ ಸಂಸ್ಕೃತಿಗೆ ಆಗಿರುವ ಅವಮಾನದ ಬಗ್ಗೆ ಮೊದಲು ಉತ್ತರ ನೀಡಲಿ" ಎಂದು ತಿರುಗೇಟು ನೀಡಿದರು.“ಬಿಜೆಪಿ ನಾಯಕ ಸಿ.ಟಿ ರವಿ ಅವರ ಹೇಳಿಕೆ ಇಡೀ ಹೆಣ್ಣು ಕುಲಕ್ಕೆ ಮಾಡಲಾದ ದೊಡ್ಡ ಅಪಮಾನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಈ ವ್ಯಕ್ತಿಯಿಂದ ಇಂತಹ ಪ್ರವೃತ್ತಿ ಇದೇ ಮೊದಲಲ್ಲ. ಸಿದ್ದರಾಮಯ್ಯ ಅವರು, ಜಯಮಾಲ, ಸೇರಿದಂತೆ ನಮ್ಮ ನಾಯಕರ ಬಗ್ಗೆ ಈ ಹಿಂದೆ ಅನೇಕ ಬಾರಿ ಹೀನಾಯವಾಗಿ ಮಾತನಾಡಿದ್ದಾರೆ. ಸಿ.ಟಿ. ರವಿ ಅವರ ಹೇಳಿಕೆ ಹಾಗೂ ನಡತೆ ಸರಿಯೋ ತಪ್ಪೋ ಎಂದು ಬಿಜೆಪಿಯ ಎಲ್ಲಾ ನಾಯಕರು ಹೇಳಲಿ. ಪೊಲೀಸರ ವಿಚಾರ ನಂತರ ಮಾತನಾಡೋಣ. ಅದನ್ನು ಬಿಟ್ಟು ಪೊಲೀಸರ ಮೇಲೆ ದೂರು ನೀಡುವುದಲ್ಲ. ಪೊಲೀಸರು ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳೋಣ” ಎಂದು ತಿಳಿಸಿದರು.

D K Shivakumar
ಸತ್ಯಕ್ಕೆ ಜಯ ಸಿಕ್ಕಿದೆ; ನನ್ನ ಮೇಲೆ ದೈಹಿಕವಾಗಿ ಹಲ್ಲೆ, ರಾತ್ರಿಯಿಡೀ 'ಟೆರರಿಸ್ಟ್' ರೀತಿ ಕಿರುಕುಳ: ಸಿಟಿ ರವಿ ಆರೋಪ

ಚಿಕ್ಕಮಗಳೂರು ಮಾತ್ರವಲ್ಲ, ದೇಶವನ್ನೇ ಬಂದ್ ಮಾಡಲಿ. ಆತ ಮಾಡಿರುವುದು ಘನಕಾರ್ಯವೇ? ಘನಕಾರ್ಯ ಮಾಡಿ ಧೀರಾದಿ ಧೀರನಂತೆ ಬಂದ್ ಮಾಡುತ್ತಾರಾ ಮಾಡಿಕೊಳ್ಳಲಿ” ಎಂದು ತಿಳಿಸಿದರು.

ನೀವು ಜೀವ ಬೆದರಿಕೆ ಒಡ್ಡಿದ್ದೀರಿ ಎಂದು ಬಿಜೆಪಿ ಆರೋಪ ಮಾಡುತ್ತಿದೆ ಎಂದು ಕೇಳಿದಾಗ, “ನಾನು ಆ ಜಾಗದಲ್ಲೇ ಇರಲಿಲ್ಲ. ಪರಿಷತ್ ನಲ್ಲಿ 10 ಪ್ರಶ್ನೆಗೆ ಉತ್ತರ ನೀಡಿ, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಾನು ವಿಧಾನಸಭೆ ಕಲಾಪಕ್ಕೆ ಹೋದೆ. ನಂತರ ಈ ಘಟನೆ ನಡೆದಿದೆ. ನಂತರ ನಾನು ಮತ್ತೆ ಪರಿಷತ್ತಿಗೆ ಹೋದೆ. ಜೀವ ಬೆದರಿಕೆ ಒಡ್ಡಿದ್ದರೆ ತನಿಖೆ ಮಾಡಲಿ. ಎಲ್ಲಾ ವಿಡಿಯೋ ದಾಖಲೆ ಇದೆಯಲ್ಲ. ಜೀವ ಬೆದರಿಕೆ ಹಾಕಿದ್ದರೆ ಕ್ರಮ ಕೈಗೊಳ್ಳಲಿ. ನಾನು ಏನು ದೊಡ್ಡವನಲ್ಲ. ನಾನು ತಪ್ಪು ಮಾಡಿದ್ದರೆ ಕಾನೂನು ಶಿಕ್ಷೆ ನೀಡಲಿದೆ” ಎಂದರು.

ನಾನು ಫಸ್ಟ್ರೇಷನ್ ಎಂದು ಹೇಳಿದ್ದೇನೆ ಹೊರತು ಬೇರೆ ಪದ ಬಳಸಿಲ್ಲ ಎಂಬ ಸಿ.ಟಿ ರವಿ ಹೇಳಿಕೆ ವಿಚಾರವಾಗಿ ಕೇಳಿದಾಗ, “ಎಲ್ಲಾ ಮಾಧ್ಯಮಗಳಲ್ಲೂ ಪ್ರಸಾರವಾಗಿದೆ. ಆತ ರಾಹುಲ್ ಗಾಂಧಿ ಅವರನ್ನು ಡ್ರಗ್ ಅಡಿಕ್ಟ್ ಎಂದು ಕರೆದಿದ್ದಾರೆ. ರಾಷ್ಟ್ರೀಯ ಮಾಧ್ಯಮಗಳಲ್ಲಿ ಇದು ಪ್ರಕಟವಾಗಿವೆ. ಅವರು ಒಂದು ಸುಳ್ಳು ಮುಚ್ಚಿಹಾಕಲು ನೂರು ಸುಳ್ಳು ಹೇಳಬೇಕಾಗಿದೆ” ಎಂದು ತಿಳಿಸಿದರು. ವಿಡಿಯೋ ದಾಖಲೆಗಳು ಇಲ್ಲ ಎಂಬ ಸಭಾಪತಿಯವರ ಹೇಳಿಕೆ ಬಗ್ಗೆ ಕೇಳಿದಾಗ, “ಹಾಗಾದರೆ ಮಾಧ್ಯಮಗಳು ತೋರುತ್ತಿರುವುದು ಸುಳ್ಳಾ?” ಎಂದು ಮರು ಪ್ರಶ್ನೆ ಹಾಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com