BJP ನಾಯಕರು ಅಂಬೇಡ್ಕರ್ ಅವರನ್ನು ಬಹಿರಂಗವಾಗಿ ಅವಮಾನಿಸುತ್ತಿದ್ದಾರೆ: ಸುರ್ಜೇವಾಲಾ

ಸಂವಿಧಾನವನ್ನು ಕಡೆಗಣಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸುತ್ತಿರುವ ಬಿಜೆಪಿ ವಿರುದ್ಧ ನಡೆಸಬೇಕಾಗಿರುವ ಹೋರಾಟಗಳ ಬಗ್ಗೆ ಬೆಳಗಾವಿಯ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಣದೀಪ್ ಸಿಂಗ್ ಸುರ್ಜೇವಾಲಾ
ರಣದೀಪ್ ಸಿಂಗ್ ಸುರ್ಜೇವಾಲಾ
Updated on

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಬಿಜೆಪಿ ನಾಯಕರು ಬಹಿರಂಗವಾಗಿ ನಿಂದಿಸುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ಧ ತೀವ್ರವಾಗಿ ಕಿಡಿಕಾರಿದರರು.

ಸಂವಿಧಾನವನ್ನು ಕಡೆಗಣಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸುತ್ತಿರುವ ಬಿಜೆಪಿ ವಿರುದ್ಧ ನಡೆಸಬೇಕಾಗಿರುವ ಹೋರಾಟಗಳ ಬಗ್ಗೆ ಬೆಳಗಾವಿಯ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೆಳಗಾವಿಯಲ್ಲಿ ಮತ್ತೊಮೆ ಬೂತ, ವರ್ತಮಾನ ಮತ್ತು ಭವಿಷ್ಯದ ವಿಚಾರಗಳನ್ನು ಸಮಿಶ್ರಗೊಳಿಸಿ ದೇಶದ ರಾಜಕೀಯದ ಚರ್ಚೆ ನಡೆಯಲಿದೆ. ದೇಶದ ಇತಿಹಾಸದಲ್ಲಿ ಬೆಳಗಾವಿ ಮಹತ್ವದ ಪಾತ್ರ ವಹಿಸಿದೆ. ಮಹಾತಗಾಂಧೀಜಿಯವರು ಇಲ್ಲಿ ನಡೆದ ಮಹಾಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಸ್ವರೂಪ ಮತ್ತು ದಿಕ್ಕನ್ನು ನೀಡಿದರು. ಸ್ವಾತಂತ್ರ್ಯ ಹೋರಾಟದಿಂದ ಗಾಂಧೀಜಿ ಹೊಸ ಸಂಚಲನ ಮೂಡಿಸಿ ಅಹಿಂಸಾ ಮಾರ್ಗದ ಲ್ಲಿಯೇ ಬ್ರಿಟಿಷರನ್ನು ಓಡಿಸಿದ್ದರು. ಜಾತಿ, ಧರ್ಮ, ಭೇದವಿಲ್ಲದೆ ದೇಶದ ಎಲ್ಲರೂ ಒಂದು ಸೂತ್ರದಡಿ ಸತ್ಯಾಗ್ರಹಕ್ಕೆ ಬೆಂಬಲ ನೀಡಿದರು. ಅದು ಸಾಧ್ಯವಾಗಿದ್ದು ಬೆಳಗಾವಿಯ ಅಧಿವೇಶನದ ಚರ್ಚೆಗಳಿಂದ. ನೂರು ವರ್ಷಗಳ ಬಳಿಕ ಬೆಳಗಾವಿಯಲ್ಲಿ ಮಹಾ ಅಧಿವೇಶನದ ಶತಮಾನೋತ್ಸವ ನಡೆಯುತ್ತಿದ್ದು, ಗಾಂಧೀಜಿ ಪಥದಲ್ಲಿ ನಡೆಯಲು ಬೃಹತ್ ಜಾಥಾ ಆಯೋಜನೆಗೊಳಿಸಲಾಗಿದೆ. ಸಮಾಜದ ಪ್ರತಿಯೊಬ್ಬರನ್ನೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಹ್ವಾನಿಸಲಾಗುತ್ತಿದೆ ಎಂದು ತಿಳಿಸಿದರು.

ರಣದೀಪ್ ಸಿಂಗ್ ಸುರ್ಜೇವಾಲಾ
ಅಂಬೇಡ್ಕರ್ ವಿರುದ್ಧ ಅಮಿತ್​ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್; ಗದಗ -ಬೆಟಗೇರಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಮತ್ತೊಮೆ ಸತ್ಯಾಗ್ರಹದ ಅಗತ್ಯವಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ಗಾಂಧಿ ನೇತೃತ್ವದಲ್ಲಿ ಐತಿಹಾಸಿಕ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಗಾಂಧಿ ಪ್ರತಿಮೆ ಅನಾವರಣ, ಬೃಹತ್ ಜನ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಅದು ನಮಗೆ ಪವಿತ್ರ ಗ್ರಂಥವಾಗಿದೆ. ಬಿಜೆಪಿ ಅಂಬೇಡ್ಕರ್ ಅವರಿಗೆ ಬಹಿರಂಗವಾಗಿ ಅಪಮಾನ ಮಾಡುತ್ತಿದೆ. ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಅವರ ವಿಚಾರವಾಗಿ ವಿರುದ್ಧವಾದ ಮಾತುಗಳನ್ನಾಡಿದ್ದಾರೆ. ಬಿಜೆಪಿ ಅದನ್ನು ಸಮರ್ಥಿಸಿಕೊಳ್ಳುತ್ತಿದೆ. ಸಂವಿಧನವನ್ನು ಕಡೆಗಣಿಸುತ್ತಿದ್ದಾರೆ ಅಂಬೇಡ್ಕರ್ ಅವರನ್ನೇ ಅಪಮಾನಿಸುತ್ತಿದ್ದಾರೆಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರನ್ನು ಬಿಡುತ್ತಾರೆಯೇ? "ಅದೇ ಸಿದ್ಧಾಂತ (ಬಿಜೆಪಿಯ) ಮಹಾತ್ಮ ಗಾಂಧಿಯವರ ಹತ್ಯೆಗೆ ಕಾರಣವಾಯಿತು, ಅದೇ ಸಿದ್ಧಾಂತವು ಗಾಂಧಿ ಬದುಕಿದ್ದಾಗ ಅವರನ್ನು ವಿರೋಧಿಸಿತು. ಕಾಂಗ್ರೆಸ್ ನಡೆಸುತ್ತಿರುವ ಸಮಾವೇಶದಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಸಿ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com