ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್

ನಾಮ ಹಾಕುವುದರಲ್ಲಿ ಕಾಂಗ್ರೆಸ್‌ನವರು ಪಳಗಿದವರು. ಹಾಗಾಗಿ ಈ ವರ್ಷ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ.
R.Ashok
ವಿಪಕ್ಷ ನಾಯಕ ಆರ್.ಅಶೋಕ್
Updated on: 

ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ ಭಾರಿ ನಷ್ಟ ಉಂಟಾಗಿದ್ದು, ಇದನ್ನು ವಿರೋಧಿಸಿ ರಾಜ್ಯ ಸಾರಿಗೆ ನಿಗಮದ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಬುಧವಾರ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟು ಸಾರಿಗೆ ಇಲಾಖೆಗೆ ನಷ್ಟ ಉಂಟಾಗಿದೆ. ಸಾರಿಗೆ ನೌಕರರು ಧರಣಿ ಮಾಡುತ್ತಿದ್ದು, ಅವರಿಗೆ 4 ಸಾವಿರ ಕೋಟಿ ರೂ. ನೀಡಬೇಕು. ರೈತರಿಗೆ ಒಂದೂವರೆ ಸಾವಿರ ಕೋಟಿ ಸಬ್ಸಿಡಿ ನಾಮ ಹಾಕಿದ್ದಾರೆ ಎಂದು ಕಿಡಿಕಾರಿದರು.

ನಾಮ ಹಾಕುವುದರಲ್ಲಿ ಕಾಂಗ್ರೆಸ್‌ನವರು ಪಳಗಿದವರು. ಹಾಗಾಗಿ ಈ ವರ್ಷ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಮುಂದಿನ ವರ್ಷ ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿ 2 ಲಕ್ಷ ಕೋಟಿ ರೂ. ಸಾಲ ಮಾಡಿದರೆ ಕರ್ನಾಟಕ ಜನ್ಮದಲ್ಲಿ ಮುಂದೆ ಬರಲು ಸಾಧ್ಯವಿಲ್ಲ.

ಇನ್ನು ಕರ್ನಾಟಕಕ್ಕೆ ಕೃಷ್ಣರಾಜಸಾಗರ ಅಣೆಕಟ್ಟನ್ನು ನೀಡಿದ ಮನೆತನದವರ ಹೆಸರನ್ನು ತೆಗೆದು ಕೆ.ಆರ್.ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಇಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಹಾಗೇನಾದರೂ ಹೆಸರು ಇಡಬೇಕು ಎಂದಿದ್ದರೆ ಹೊಸ ರಸ್ತೆಯೊಂದನ್ನು ನಿರ್ಮಿಸಿ ಅವರ ಹೆಸರು ಅಥವಾ ಅವರ ಕುಟುಂಬದವರ ಹೆಸರನ್ನು ಇಡಲಿ. ಮಹಾರಾಜರ ಕುಟುಂಬ ಈ ನಾಡಿಗೆ ಸೇವೆ ಸಲ್ಲಿಸಿದೆ. ಅನ್ನ-ನೀರು ಕೊಟ್ಟಿದೆ. ಮಾರಿ ಕಣ್ಣು ಹೋರಿ ಮೇಲೆ ಎನ್ನುವಂತೆ ಆ ಕುಟುಂಬವನ್ನು ಗುರಿ ಮಾಡಬಾರದು. ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಅವರು ಇಂತಹ ಕೆಲಸಕ್ಕೆ ಕೈ ಹಾಕುತ್ತಾರೆಂದರೆ ಜನರಿಗೆ ಅವರ ಬಗ್ಗೆ ಇರುವ ಭಾವನೆ ಬದಲಾಗುತ್ತದೆ ಎಂದರು

R.Ashok
ಶಕ್ತಿ ಯೋಜನೆ: ಸಾರಿಗೆ ನಿಗಮಗಳಿಗೆ ಸರ್ಕಾರ ಪಾವತಿಸಬೇಕಾದ ಬಾಕಿ ಮೊತ್ತ 1,694 ಕೋಟಿ ರೂ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com