ಗಾಂಧೀಜಿ ಮಾತು ಧಿಕ್ಕರಿಸಿದ್ದ ನಕಲಿ ಗಾಂಧಿಗಳು ಯಾವ ನೈತಿಕತೆಯಿಂದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದ್ದಾರೆ?: ಆರ್.ಅಶೋಕ್

ಗಾಂಧೀಜಿ ಮಾತ್ರವಲ್ಲ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರೂ ಸಹ ಕಾಂಗ್ರೆಸ್ ಪಕ್ಷವನ್ನ ತಿರಸ್ಕಾರ ಮಾಡಿದ್ದರು. ಕಾಂಗ್ರೆಸ್ ಪಕ್ಷ ಸೇರುವುದು ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಅಂಬೇಡ್ಕರರು ದಲಿತರಿಗೆ ಸಲಹೆ ನೀಡಿದ್ದರು.
R Ashok
ಆರ್. ಅಶೋಕ್
Updated on

ಬೆಂಗಳೂರು: ಸ್ವಾತಂತ್ರ್ಯ ದೊರಕಿತು. ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇಲ್ಲ. ಅದನ್ನು ವಿಸರ್ಜಿಸಿ ಎಂದು ಹೇಳಿದ ಮಹಾತ್ಮ ಗಾಂಧಿಯವರ ಮಾತನ್ನು ಧಿಕ್ಕರಿಸಿದ ನಕಲಿ ಗಾಂಧಿಗಳು, ಇವತ್ತು ಯಾವ ನೈತಿಕತೆಯಿಂದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದ್ದಾರೆ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗುರುವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವ ಆಚರಣೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸ್ವಾತಂತ್ರ್ಯ ದೊರಕಿತು. ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇಲ್ಲ. ಅದನ್ನು ವಿಸರ್ಜಿಸಿ ಎಂದು ಹೇಳಿದ ಮಹಾತ್ಮ ಗಾಂಧಿಯವರ ಮಾತನ್ನು ಧಿಕ್ಕರಿಸಿದ ನಕಲಿ ಗಾಂಧಿಗಳು, ಇವತ್ತು ಯಾವ ನೈತಿಕತೆಯಿಂದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದ್ದಾರೆ? ಸ್ವಾತಂತ್ರ ಪೂರ್ವದ ಕಾಂಗ್ರೆಸ್ ಅಂದರೆ ಅದು ರಾಜಕೀಯ ಪಕ್ಷವಾಗಿರಲಿಲ್ಲ. ದೇಶವನ್ನ ದಾಸ್ಯದಿಂದ ಮುಕ್ತಿಗೊಳಿಸಲು ಹೋರಾಡುತ್ತಿದ್ದ ದೇಶಭಕ್ತರ ಒಕ್ಕೊರಲಿನ ವೇದಿಕೆಯಾಗಿತ್ತು. ಆದರೆ ಸ್ವತಂತ್ರ ಬಂದ ನಂತರ ಮಹಾತ್ಮ ಗಾಂಧೀಜಿ ಅವರ ಮಾತನ್ನು ಧಿಕ್ಕರಿಸಿ, ಕೇವಲ ಅಧಿಕಾರಕ್ಕಾಗಿ, ಕಾಂಗ್ರೆಸ್ ಪಕ್ಷವನ್ನು ಒಂದು ಕುಟುಂಬದ ಆಸ್ತಿ ಮಾಡಿಕೊಂಡ ನಕಲಿ ಗಾಂಧಿಗಳು ಮತ್ತು ಅವರ ಅನುಯಾಯಿಗಳು ಇವತ್ತು 'ಗಾಂಧಿ ಭಾರತ' ಹೆಸರಿನಲ್ಲಿ ಐತಿಹಾಸಿಕ ಬೆಳಗಾವಿ ಅಧಿವೇಶನ ಆಚರಿಸುತ್ತಿರುವುದು ವಿಪರ್ಯಾಸ ಎಂದು ಹೇಳಿದ್ದಾರೆ.

ಗಾಂಧೀಜಿ ಮಾತ್ರವಲ್ಲ, ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರೂ ಸಹ ಕಾಂಗ್ರೆಸ್ ಪಕ್ಷವನ್ನ ತಿರಸ್ಕಾರ ಮಾಡಿದ್ದರು. ಕಾಂಗ್ರೆಸ್ ಪಕ್ಷ ಸೇರುವುದು ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಅಂಬೇಡ್ಕರರು ದಲಿತರಿಗೆ ಸಲಹೆ ನೀಡಿದ್ದರು. ಸ್ವತಂತ್ಯಕ್ಕಾಗಿ ತಮ್ಮ ಸರ್ವಸ್ವವನ್ನೂ ಸಮರ್ಪಿಸಿದ ಗಾಂಧಿ, ಸರ್ದಾರ್ ಪಟೇಲ್ ಅಂತಹ ಮೇರು ನಾಯರನ್ನು ಒಳಗೊಂಡಿದ್ದ ಸ್ವಾತಂತ್ಯ ಪೂರ್ವ ಕಾಂಗ್ರೆಸ್ ಗು ಅಧಿಕಾರಕ್ಕಾಗಿ ನಕಲಿ ಗಾಂಧಿಗಳು ನಡೆಸುತ್ತಿರುವ ಈಗಿನ ನಕಲಿ ಕಾಂಗ್ರೆಸ್ ಗು ಸಂಬಂಧವೇ ಇಲ್ಲ.

R Ashok
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಬೆಳಗಾವಿ ಸಜ್ಜು; ಮೈಸೂರು ದಸರಾದಂತೆ ಕಂಗೊಳಿಸುತ್ತಿದೆ ಕುಂದಾನಗರಿ!

ದೇಶದ ಜನರಿಂದ ಪದೇ ಪದೇ ತಿರಸ್ಕಾರಗೊಳ್ಳುತ್ತಿರುವ ನಕಲಿ ಗಾಂಧಿಗಳನ್ನ ಮತ್ತೊಮ್ಮೆ ರೀಲಾಂಚ್ ಮಾಡಲು ರಾಜ್ಯದ 20 ಕೋಟಿ ರೂಪಾಯಿ ತೆರಿಗೆ ಹಣವನ್ನ ಪೋಲು ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ನಕಲಿ ಗಾಂಧಿಗಳ ಗುಲಾಮಗಿರಿ ಮಾಡಲು ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com