ಕಾಂಗ್ರೆಸ್ ಪಾಪದ ಕೊಡ ತುಂಬಿದೆ; ಪ್ರಿಯಾಂಕ್ ಖರ್ಗೆಯಿಂದ ರಿಪಬ್ಲಿಕ್‌ ಆಫ್‌ ಕಲಬುರಗಿ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಸಚಿವರು ಎಲ್ಲದರಲ್ಲೂ ತನಗೆ ಬೇಕಾದವರನ್ನು ಪಾಲುದಾರರನ್ನಾಗಿ ಮಾಡುವ ಮೂಲಕ ಎಲ್ಲಾ ರೀತಿಯ ಹಗರಣಗಳಲ್ಲಿ ತನ್ನ ಆಪ್ತರನ್ನು ತೊಡಗಿಸಿಕೊಂಡಿದ್ದಾರೆ.
Priyank Kharge
ಸಚಿವ ಪ್ರಿಯಾಂಕ್ ಖರ್ಗೆ online desk
Updated on

ಬೆಂಗಳೂರು: ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಮತ್ತು ಬಂಧಿಸಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಎಂಎಲ್‌ಸಿ ಎನ್.ರವಿಕುಮಾರ್ ಶನಿವಾರ ಒತ್ತಾಯಿಸಿದರು.

ಕಲಬುರಗಿಯಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ ಎಂದು ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು. “ಸಚಿವರು ಎಲ್ಲದರಲ್ಲೂ ತನಗೆ ಬೇಕಾದವರನ್ನು ಪಾಲುದಾರರನ್ನಾಗಿ ಮಾಡುವ ಮೂಲಕ ಎಲ್ಲಾ ರೀತಿಯ ಹಗರಣಗಳಲ್ಲಿ ತನ್ನ ಆಪ್ತರನ್ನು ತೊಡಗಿಸಿಕೊಂಡಿದ್ದಾರೆ. ಮರಳು, ಟೈಲ್ಸ್ ಮತ್ತು ಸಿಮೆಂಟ್ ಕಾರ್ಖಾನೆಗಳ ಹಗರಣಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಿಪಬ್ಲಿಕ್‌ ಆಫ್‌ ಕಲಬುರಗಿ ಆಗಿದೆ. ಕರ್ನಾಟಕದ ವ್ಯವಸ್ಥೆಯೇ ಬೇರೆ, ಅಲ್ಲಿನ ವ್ಯವಸ್ಥೆಯೇ ಬೇರೆ ಇದೆ. ಪೊಲೀಸರೂ ಖರ್ಗೆ ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ದಲಿತ ಸಮುದಾಯಗಳು ಅವರ ವಿರುದ್ಧ ಮಾತನಾಡಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ದೂರಿದರು.

ಪ್ರಿಯಾಂಕ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ಕೂಡಲೇ ಬಂಧಿಸಬೇಕು. ತನಿಖೆಗೆ ಸರಕಾರ ಸಂಪೂರ್ಣ ಸಹಕಾರ ನೀಡಬೇಕು ಎಂದು ಆಗ್ರಹಿಸಿದರು. ಇಲ್ಲದಿದ್ದರೆ ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಗ್ರ ಹೋರಾಟ ನಡೆಸಲಿದ್ದಾರೆ ಎಂದು ಎಚ್ಚರಿಸಿದರು. ಮೃತ ಸಚಿನ್ 7 ಪುಟಗಳ ಡೆತ್ ನೋಟ್ ಬರೆದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಸುಪಾರಿ ಮೂಲಕ ಆಂದೋಲ ಸ್ವಾಮೀಜಿ, ಚಂದು ಪಾಟೀಲ, ಬಸವರಾಜ ಮತ್ತಿಮೂಡನ್ನು ಹತ್ಯೆ ಮಾಡುವ ವಿಚಾರ ಪ್ರಸ್ತಾಪವಾಗಿದೆ ಎಂದು ಆರೋಪಿಸಿದರು.

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ನ್ಯಾಯಾಲಯ ಹೇಳಿದ್ದರೂ ಮಾಜಿ ಆರ್‌ಡಿಪಿಆರ್ ಸಚಿವ ಈಶ್ವರಪ್ಪ ಅವರು ರಾಜೀನಾಮೆ ನೀಡಿದ್ದಾರೆ. ಪ್ರಿಯಾಂಕ್ ಕೂಡ ರಾಜೀನಾಮೆ ನೀಡಬೇಕು, ಏಕೆಂದರೆ ಸಚಿನ್ ಅವರ ಹೆಸರನ್ನು ಹಿಂದಿನವರು ಉಲ್ಲೇಖಿಸಿದ್ದಾರೆ. ಒಂದು ವೇಳೆ ತನಿಖೆಯಲ್ಲಿ ಅವರಿಗೆ ಕ್ಲೀನ್ ಚಿಟ್ ಸಿಕ್ಕರೆ ಪ್ರಿಯಾಂಕ್ ಸಿಎಂ ಬೇಕಾದರೂ ಆಗಲಿ ಎಂದು ಎಂಎಲ್ ಸಿ ರವಿಕುಮಾರ್ ಕಿಡಿಕಾರಿದರು.

Priyank Kharge
ಬ್ಯಾನರ್ ಹಾಕಿದ್ದು ಖಾಸಗಿ ಕಂಪನಿ, ಆ ಪೋಸ್ಟರ್ ಗಳನ್ನು ಈಗಾಗಲೇ ತೆಗೆದು ಹಾಕಲಾಗಿದೆ: ಪ್ರಿಯಾಂಕ್ ಖರ್ಗೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com