ಸಿದ್ದರಾಮಯ್ಯ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ. ಸರ್ಕಾರದ ಭ್ರಷ್ಟಾಚಾರಕ್ಕೆ ಸ್ವತಃ ಕಾಂಗ್ರೆಸ್ಸಿಗರೇ ರೋಸಿ ಹೋಗಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ. ಸರ್ಕಾರದ ಭ್ರಷ್ಟಾಚಾರಕ್ಕೆ ಸ್ವತಃ ಕಾಂಗ್ರೆಸ್ಸಿಗರೇ ರೋಸಿ ಹೋಗಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಾಗಿಲು ತೆರೆದು ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಪರ್ಸೆಂಟೇಜ್ ವ್ಯವಹಾರವನ್ನು ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಬಯಲು ಮಾಡಿದ್ದಾರೆ. ಈ ಹಿಂದೆ ಬಿಜೆಪಿ ಮೇಲೆ ಹೊರಿಸಿದ್ದ ಆಧಾರ ರಹಿತ ಶೇ.40 ಆರೋಪ ಅದಕ್ಕೆ ಮೀರಿಸಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎನ್ನುವುದನ್ನು ಮಾಧ್ಯಮ ಗೋಷ್ಠಿ ಕರೆದು ಸಾಕ್ಷೀಕರಿಸಿದ್ದಾರೆ, ಸ್ವತಃ ಕಾಂಗ್ರೆಸ್ಸಿಗರೇ ಈ ಮಟ್ಟದಲ್ಲಿ ರೋಸಿ ಹೋಗಿದ್ದಾರೆಂದರೆ ಸಿದ್ದರಾಮಯ್ಯ ಅವರ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ ಎಂದು ಹೇಳಿದ್ದಾರೆ.

ಅಭಿವೃದ್ಧಿ, ಜನಕಲ್ಯಾಣ ಕಾರ್ಯಗಳನ್ನು ಸಂಪೂರ್ಣವಾಗಿ ಮರೆತಿರುವ ಕಾಂಗ್ರೆಸ್ ಸರ್ಕಾರ ಎಲ್ಲೆಂದರಲ್ಲಿ ಭ್ರಷ್ಟಾಚಾರದ ಅಂಗಡಿಗಳನ್ನು ತೆರೆಯುವುದರ ಜತೆಗೇ ಹೆಜ್ಜೆ ಹೆಜ್ಜೆಗೂ ATM ಮಾದರಿ ಕಮೀಷನ್ ಕೌಂಟರ್ ಗಳನ್ನೂ ತೆರೆದು ಕುಳಿತಿದೆ. ಈ ಸರ್ಕಾರವನ್ನು ಕಿತ್ತೊಗೆಯುವುದೊಂದೇ ಜನರಿಗಿರುವ ಮಾರ್ಗವಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ್ದ ಶಿವರಾಮ್ ಅವರು, ಬಿಜೆಪಿಗಿಂತ ಕಾಂಗ್ರೆಸ್‌ನಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ. ಹಾಸನ ಜಿಲ್ಲೆಯಲ್ಲಿ ಶೇ.40 ಕಮಿಷನ್ ಮೀರಿ ಲಂಚ ನಡೆಯುತ್ತಿದೆ ನಾವು ಅಧಿಕಾರಕ್ಕೆ ಬರುವಾಗ ಬಿಜೆಪಿ ವಿರುದ್ಧ ಕಮಿಷನ್ ಆರೋಪ ಮಾಡಿದ್ದೆವು. ಆದರೆ ಈಗ ಜಿಲ್ಲೆಯಲ್ಲಿ ಅದಕ್ಕಿಂತ ಹೆಚ್ಚಾಗಿ ಭ್ರಷ್ಟಾಚಾರ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಿ ಎಂದು ನಾನೇ ಹೇಳಿದ್ದೇನೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com