ಗ್ಯಾರಂಟಿ ಯೋಜನೆ ನಿರ್ವಹಿಸಲು ಸಾಧ್ಯವಾಗದೆ ಕಾಂಗ್ರೆಸ್ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆ: ಪ್ರಹ್ಲಾದ್ ಜೋಶಿ

ಗ್ಯಾರಂಟಿ ಯೋಜನೆಗಳ ನಿರ್ವಹಿಸಲು ಸಾಧ್ಯವಾಗದೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ ಅವರು ಶನಿವಾರ ಹೇಳಿದ್ದಾರೆ.
ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ
ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ನಿರ್ವಹಿಸಲು ಸಾಧ್ಯವಾಗದೆ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಅನುದಾನ ನೀಡವಲ್ಲಿ ಕೇಂದ್ರ ತಾರತಮ್ಯ ಮಾಡುತ್ತಿಲ್ಲ. ಯುಪಿಎ ಸರ್ಕಾರ ಇದ್ದಾಗ ಕೇವಲ 81 ಸಾವಿರ ಕೋಟಿ ರೂ. ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ 2.60 ಲಕ್ಷ ಕೋಟಿ ರೂ. ಅನುದಾನ ಕೊಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆರ್ಥಿಕ ನಿರ್ವಹಣೆ ಮಾಡಲಾಗುತ್ತಿಲ್ಲ. ಘೋಷಣೆ ಮಾಡಿದ ಗ್ಯಾರಂಟಿಗಳು ಅರ್ಧಂಬರ್ಧ ಜಾರಿಯಾಗಿವೆ ಹೀಗಾಗಿ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಹೇಳಿದರು.

ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಅಂತ ಕಾಂಗ್ರೆಸ್ ಶಾಸಕರು ಆರೋಪ ಮಾಡಿದ್ದಾರೆ. ಕಾಂಗ್ರೆಸ್​ನವರು ದೆಹಲಿಯಲ್ಲಿ ಯಾವ ಕಾರಣಕ್ಕೆ ಧರಣಿ ಮಾಡುತ್ತಿದ್ದಾರೆ? 2004–2014 ರವರಗೆ 10 ವರ್ಷದಲ್ಲಿ ನೀಡಿದ ಅನುದಾನ 60 ಸಾವಿರ ಕೋಟಿ ರೂ. ಕಳೆದ 10 ವರ್ಷದಲ್ಲಿ ಪ್ರಧಾನಿ ಮೋದಿ ನೀಡಿದ ಅನುದಾನ 2.36 ಲಕ್ಷ ಕೋಟಿ ರೂ. ಅನುದಾನ ಹಂಚಿಕೆಯಲ್ಲಿ ಪ್ರತಿಶತ 240 ಹೆಚ್ಚಾಗಿದೆ. ಅನುದಾನ ಹೆಚ್ಚಳ ಆಗಿರುವುದಕ್ಕೆ ಸಿದ್ದರಾಮಯ್ಯ ಧರಣಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ನಿಮಗೆ ಸರಿಯಾಗಿ ಸರ್ಕಾರ ನಡೆಸಲಾಗುತ್ತಿಲ್ಲ. ನಿಮ್ಮ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ನೀವು ಭ್ರಷ್ಟಾಚಾರ ಮಾಡಿ ಹತ್ತು ಹಲವು ಹಗರಣ ಮಾಡಿದ್ದೀರಿ. ಯಾವುದೇ ರೀತಿಯ ಆರ್ಥಿಕ ಶಿಸ್ತನ್ನು ಪಾಲನೆ ಮಾಡಿದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದೀರಿ. ಅವರಲ್ಲಿರುವ ಒಳಜಗಳ ಡೈವರ್ಟ್ ಮಾಡಲು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ.

ಇದೇ ವೇಳೆ 5 ವರ್ಷದಲ್ಲಿ 62 ಸಾವಿರ ಕೋಟಿ ರೂ. ಅನ್ಯಾಯ ಆಗಿದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್​ ದಾಖಲೆ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು, ಅದೇನು ದಾಖಲೆ ಇದೆಯೊ ಡಿಕೆ ಶಿವಕುಮಾರ್​ ತೋರಿಸಲಿ. ಆ ದಾಖಲೆಯಲ್ಲಿ ಏನಿದೆ ಅಂತ ಅವರಿಗೂ ಅರ್ಥ ಆಗಿಲ್ಲ, ಬೇರೆಯವರಿಗೂ ಅರ್ಥವಾಗಿಲ್ಲ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com