ಆದಾಯ/ತೆರಿಗೆ ಸಮಾನ ಹಂಚಿಕೆಯಾಗಿ ದೇಶವನ್ನು ಒಗ್ಗಟ್ಟಿನಿಂದ ಇರಿಸಬೇಕೆಂಬ ಉದ್ದೇಶದಿಂದ ಸುರೇಶ್ ಹೇಳಿಕೆ ನೀಡಿದ್ದಾರೆ: ಡಿಕೆ.ಶಿವಕುಮಾರ್

ಆದಾಯ/ತೆರಿಗೆ ಸಮಾನ ಹಂಚಿಕೆ ಮಾಡಿ ದೇಶವನ್ನು ಒಗ್ಗಟ್ಟಿನಿಂದ ಇರಿಸಬೇಕೆಂದು ಆಗ್ರಹಿಸಿ ಡಿಕೆ.ಸುರೇಶ್ ಹೇಳಿಕೆ ನೀಡಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಮ್ಮ ಸಹೋದರನ ಹೇಳಿಕೆಯನ್ನು ಶನಿವಾರ ಸಮರ್ಥಿಸಿಕೊಂಡಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಆದಾಯ/ತೆರಿಗೆ ಸಮಾನ ಹಂಚಿಕೆ ಮಾಡಿ ದೇಶವನ್ನು ಒಗ್ಗಟ್ಟಿನಿಂದ ಇರಿಸಬೇಕೆಂದು ಆಗ್ರಹಿಸಿ ಡಿಕೆ.ಸುರೇಶ್ ಹೇಳಿಕೆ ನೀಡಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಮ್ಮ ಸಹೋದರನ ಹೇಳಿಕೆಯನ್ನು ಶನಿವಾರ ಸಮರ್ಥಿಸಿಕೊಂಡಿದ್ದಾರೆ.

ತೆರಿಗೆಯ ಪಾಲು ನ್ಯಾಯಯುತವಾಗಿ ಹಂಚದಿದ್ದರೆ ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇರಿಸಬೇಕಾಗುತ್ತಿದೆ’ ಎಂದ ಡಿ.ಕೆ. ಸುರೇಶ್ ಹೇಳಿಕೆಗೆ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಇಡೀ ಭಾರತ ಒಂದು. ಕಾಂಗ್ರೆಸ್ ಪಕ್ಷ ಭಾರತವನ್ನು ಸದಾ ಒಗ್ಗಟ್ಟಾಗಿ ಇರಿಸಿದೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ನಮ್ಮ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ಯಾವಾಗಲೂ ಅಖಂಡ ಭಾರತವನ್ನು ಕಲ್ಪಿಸಿಕೊಂಡು ಕೆಲಸ ಮಾಡಿದೆ ಎಂದು ಹೇಳಿದರು.

ಅನುದಾನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸುವಲ್ಲಿ ಬಿಜೆಪಿ ವಿಫಲವಾಗಿದೆ, ಈ ಕುರಿತು ಪಕ್ಷದ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ಕೇಂದ್ರದ ಹಣ ಮತ್ತು ತೆರಿಗೆಯಲ್ಲಿ ರಾಜ್ಯಕ್ಕೆ ಸರಿಯಾದ ಪಾಲು ಸಿಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com