ನಾನು ಕೂಡ ಕೊಡಗು-ಮೈಸೂರು ಕ್ಷೇತ್ರದ ಆಕಾಂಕ್ಷಿ: MLC ವಿಶ್ವನಾಥ್

ಲೋಕಸಭಾ ಚುನಾವಣೆಗೆ‌ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ. ನನ್ನ ಅನುಭವ ಪರಿಗಣಿಸಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು‌ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್  ಹೇಳಿದ್ದಾರೆ.
ಎಚ್. ವಿಶ್ವನಾಥ್
ಎಚ್. ವಿಶ್ವನಾಥ್

ಮಡಿಕೇರಿ: ಲೋಕಸಭಾ ಚುನಾವಣೆಗೆ‌ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ. ನನ್ನ ಅನುಭವ ಪರಿಗಣಿಸಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು‌ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಹೇಳಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಕೊಡಗು-ಮೈಸೂರು ಕ್ಷೇತ್ರದ ಸಂಸದ ಸ್ಥಾನದ ಆಕಾಂಕ್ಷಿ. ಇದೇ ವಿಚಾರವಾಗಿ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದ್ದೇನೆ. ರಾಜ್ಯಪಾಲರು ನನ್ನನ್ನು ಎಂಎಲ್‌ಸಿಯನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ ಮತ್ತು ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ದ್ವೇಷ ಮತ್ತು ಧರ್ಮ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ನೆಹರೂ ಅವರ ಮಾತನ್ನು ತಪ್ಪಾಗಿ ಅರ್ಥೈಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ಬಂದಾಗ 33 ಕೋಟಿ ಜನರಿಗೆ ಅನ್ನ ಇರಲಿಲ್ಲ. ಪಂಚವಾರ್ಷಿಕ ಯೋಜನೆಗಳು ಮತ್ತು ಇತರ ಅಭಿವೃದ್ಧಿ ಯೋಜನೆಗಳ ಮೂಲಕ ನೆಹರು ದೇಶವನ್ನು ಅಭಿವೃದ್ಧಿ ಪಡಿಸಿದರು ಎಂದರು.

ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕವು ಅತಿ ಹೆಚ್ಚು ತೆರಿಗೆ ಪಾವತಿಸುತ್ತದೆ ಮತ್ತು ಕೇಂದ್ರವು ಜನರ ಹಣವನ್ನು ಇತರರಿಗೆ ಹಂಚುತ್ತಿದೆ ಎಂದು ಆರೋಪಿಸಿದರು. ರಾಜ್ಯದ ಬಿಜೆಪಿ ಸಂಸದರಿಗೆ ಈ ಬಗ್ಗೆ ಕಾಳಜಿ ಇಲ್ಲ. ದಕ್ಷಿಣ ಭಾರತದ ಹಣ ಉತ್ತರಕ್ಕೆ ಹರಿಯುತ್ತಿದೆ. ಶ್ರೀರಾಮ ಈ ದೇಶದ ಅಸ್ಮಿತೆಯಾಗಿದ್ದು, ಅವರು ಬಿಜೆಪಿಗೆ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com