ಮಾಡೋದು ಅನಾಚಾರ ಮನೆ ಮುಂದೆ ಬೃಂದಾವನ: ಕಮಿಷನ್‌ ಆರೋಪಕ್ಕೆ ಬಿಜೆಪಿ ತಿರುಗೇಟು

ಶೇ 40ರಷ್ಟು ಕಮಿಷನ್‌ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮುಂದುವರಿದಿದೆ ಎಂಬ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಮಾಡಿರುವ ಆರೋಪವನ್ನು ಉಲ್ಲೇಖಿಸಿರುವ ಬಿಜೆಪಿ, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಬಿವೈ.ವಿಜಯೇಂದ್ರ
ಬಿವೈ.ವಿಜಯೇಂದ್ರ

ಬೆಂಗಳೂರು: ಶೇ.40ರಷ್ಟು ಕಮಿಷನ್‌ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮುಂದುವರಿದಿದೆ ಎಂಬ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಮಾಡಿರುವ ಆರೋಪವನ್ನು ಉಲ್ಲೇಖಿಸಿರುವ ಬಿಜೆಪಿ, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ‘ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ' ಎಂಬ ಗಾದೆ ಮಾತು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಷರಶಃ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ” ಎಂಬ ಗಾದೆ ಮಾತು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಷರಶಃ ಅನ್ವಯಿಸುತ್ತದೆ. ಬಿಜೆಪಿ ಸರ್ಕಾರದ ಕಾಲದಲ್ಲಿ ಇದೇ ಕೆಂಪಣ್ಣನವರು ಕಮಿಷನ್ ಆರೋಪದ ಗದ್ದಲ ಎಬ್ಬಿಸಿದ್ದರು, ಕಾಂಗ್ರೆಸ್ಸಿಗರು ಅದನ್ನು ಬಂಡವಾಳ ಮಾಡಿಕೊಂಡು ಸತ್ಯಹರಿಶ್ಚಂದ್ರರಂತೆ ಕೂಗಾಡಿದ್ದರು, ಆದರೆ ಈಗ ಸಾಕ್ಷಿ ಸಮೇತ ಶೇ.40 ಕಮೀಷನ್ ಆರೋಪ ಮಾಡುತ್ತಿದ್ದಾರೆ, ವಾಸ್ತವವಾಗಿ ಶೇ.80 ವರೆಗೂ ಕಮೀಷನ್ ದಂಧೆ ಈ ಕಾಂಗ್ರೆಸ್ ಸರ್ಕಾರದಲ್ಲಿ ಎಗ್ಗಿಲ್ಲದೇ ಜಿಗಿಯುತ್ತಿದೆ ಎಂಬ ಆರೋಪ ವ್ಯಾಪಕವಾಗಿದೆ.

ಸತ್ಯ ಏನೆಂಬುದು ಜನರಿಗೆ ಮನವರಿಕೆಯಾಗುತ್ತಿದೆ, ಮಾನ್ಯ ಕೆಂಪಣ್ಣನವರು ತಾವೇ ಹೇಳಿರುವಂತೆ ಕಮೀಷನ್ ವಸೂಲಿಗೆ ನಿಯುಕ್ತಿಯಾಗಿರುವ ಅಧಿಕಾರಗಳ ವಿವರ ಧೈರ್ಯವಾಗಿ ಬಹಿರಂಗ ಪಡಿಸಲಿ. ಆಗ ಅದರ ಹಿಂದಿರುವ ಮುಖ್ಯ, ಉಪ ಮುಖ್ಯ ಸೂತ್ರಧಾರಿಗಳ ನೈಜ ಮುಖವಾಡ ಕಳಚುತ್ತದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com