ಲೋಕಸಭೆ ಚುನಾವಣೆ: ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಶತ ಪ್ರಯತ್ನ- ಸಿ.ಟಿ.ರವಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿನ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಶತ ಪ್ರಯತ್ನ ಮಾಡಲಿದೆ ಎಂದು ಬಿಜೆಪಿ ಹಿರಿಯ ಮುಖಂಡ ಸಿ.ಟಿ. ರವಿ ಭಾನುವಾರ ಹೇಳಿದ್ದಾರೆ.
ಸಿಟಿ ರವಿ
ಸಿಟಿ ರವಿ

ಮೈಸೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿನ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಶತ ಪ್ರಯತ್ನ ಮಾಡಲಿದೆ ಎಂದು ಬಿಜೆಪಿ ಹಿರಿಯ ಮುಖಂಡ ಸಿ.ಟಿ. ರವಿ ಭಾನುವಾರ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯ ನಂತರ ಮಾತನಾಡಿದ ಸಿಟಿ ರವಿ, ಚುನಾವಣೆಯಲ್ಲಿ ಶೇ. 100ರಷ್ಟು ಫಲಿತಾಂಶ ಸಾಧಿಸುವ ಗುರಿ ಹೊಂದಲಾಗಿದೆ. ಎಲ್ಲಾ 28 ಸ್ಥಾನಗಳನ್ನು ಗೆಲ್ಲಲು, ಸಲಹೆಗಳನ್ನು ನೀಡಲಾಗಿದ್ದು, ಅದನ್ನು ನಾವು ಕಾರ್ಯಗತಗೊಳಿಸುತ್ತೇವೆ ಎಂದರು.

 ಪ್ರಸ್ತುತ ಎನ್ ಡಿಎ 27 ಸ್ಥಾನಗಳನ್ನು ಹೊಂದಿದ್ದು, ಸ್ವಲ್ಪ ಪ್ರಯತ್ನಿಸಿದರೆ ಮುಂದಿನ ಬಾರಿ ರಾಜ್ಯದ  ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸಿಟಿ ರವಿ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದರು. 

ಗುಜರಾತ್ ಮತ್ತು ದೆಹಲಿಯಲ್ಲಿ ಎನ್‌ಡಿಎ ಶೇಕಡಾ 100 ಸ್ಥಾನಗಳನ್ನು ಹೊಂದಿರುವಂತೆ, ನಮ್ಮ ಪಕ್ಷದ ಕಾರ್ಯಕರ್ತರು ಶ್ರಮಿಸಿದರೆ ಎನ್‌ಡಿಎ ಶೇಕಡಾ 100  ಕ್ಲಬ್‌ನ ಸದಸ್ಯನಾಗಲಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com