ರಾಜ್ಯಸಭೆ ಚುನಾವಣೆ: ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ!

ರಾಜ್ಯಸಭಾ ಚುನಾವಣೆಗೆ ಐದನೇ ಅಭ್ಯರ್ಥಿಯಾಗಿ, ಜೆಡಿಎಸ್ ಬಿಜೆಪಿ ಮೈತ್ರಿ ಮೂಲಕ ಕುಪೇಂದ್ರ ರೆಡ್ಡಿ ಅಖಾಡಕ್ಕೆ ಇಳಿದಿದ್ದಾರೆ. ಇಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕುಪೇಂದ್ರ ರೆಡ್ಡಿ
ಕುಪೇಂದ್ರ ರೆಡ್ಡಿKupendra Reddy

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಐದನೇ ಅಭ್ಯರ್ಥಿಯಾಗಿ, ಜೆಡಿಎಸ್ ಬಿಜೆಪಿ ಮೈತ್ರಿ ಮೂಲಕ ಕುಪೇಂದ್ರ ರೆಡ್ಡಿ ಅಖಾಡಕ್ಕೆ ಇಳಿದಿದ್ದಾರೆ. ಇಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ತೆರವಾಗಲಿರುವ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬಿಜೆಪಿ ಅಭ್ಯರ್ಥಿಯಾದ ನಾರಾಯಣ ಬಾಂಡಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಐದನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕೆ ಇಳಿಸಲು ಜೆಡಿಎಸ್- ಬಿಜೆಪಿ ನಿನ್ನೆ ನಿರ್ಧಾರ ಮಾಡಿದ್ದವು. ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಆಯ್ಕೆ ನಡೆಯುತ್ತಿದ್ದು, ಐದನೇ ಅಭ್ಯರ್ಥಿ ಕಣಕ್ಕೆ ಇಳಿದ್ರೆ ಚುನಾವಣೆ ನಡೆಯಲಿದೆ.

ಕುಪೇಂದ್ರ ರೆಡ್ಡಿ
ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ: ಸೋಮಣ್ಣ ಬದಲಿಗೆ ನಾರಾಯಣ ಭಾಂಡಗೆ ಟಿಕೆಟ್!

ರಾತ್ರಿ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರ ಮಾತುಕತೆ ನಡೆದಿದೆ. ಜೆಡಿಎಸ್ ಶಾಸಕರ ಮತಗಳು, ಬಿಜೆಪಿಯ ಹೆಚ್ಚುವರಿ ಮತಗಳು ಕುಪೇಂದ್ರ ರೆಡ್ಡಿಗೆ ದೊರೆಯಲಿವೆ. ಜೊತೆಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ, ಪುಟ್ಟಸ್ವಾಮಿಗೌಡ ಮತಗಳ ಮೇಲೆ ಕಣ್ಣು ಇದೆ. ಈಗಾಗಲೇ ನಿನ್ನೆ ಗಾಲಿ ಜನಾರ್ದನ ರೆಡ್ಡಿ ಜೊತೆ ಮಾತುಕತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಕುಪೇಂದ್ರ ರೆಡ್ಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಜೆಡಿಎಸ್ ಶಾಸಕ ಶರಣ್ ಗೌಡ ಕುಂದಕೂರ್ ಮೈತ್ರಿಯನ್ನು ವಿರೋಧಿಸಿದ್ದು ಜೆಡಿಎಸ್- ಬಿಜೆಪಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಮತದಾನ ಮಾಡುವುದು ಅನುಮಾನ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com