ಲೋಕಸಭೆ ಚುನಾವಣೆ: ಫೆಬ್ರವರಿ ಅಂತ್ಯಕ್ಕೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ- ಪ್ರಹ್ಲಾದ್ ಜೋಶಿ

ಲೋಕಸಭಾ ಚನಾವಣೆಗೆ ಫೆಬ್ರವರಿ ಅಂತ್ಯದೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಶನಿವಾರ ಹೇಳಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಲೋಕಸಭಾ ಚನಾವಣೆಗೆ ಫೆಬ್ರವರಿ ಅಂತ್ಯದೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಶನಿವಾರ ಹೇಳಿದರು.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶನಿವಾರ ನಡೆದ ಬಿಜೆಪಿ ರಾಷ್ಟ್ರೀಯ ಮಂಡಳಿಯಲ್ಲಿ ಕೇಂದ್ರ ಸಚಿವರು, ಶಾಸಕರು, ಸಂಸದರು, ಪದಾಧಿಕಾರಿಗಳು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ನೂರಾರು ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ಸಭೆಯಲ್ಲಿ ಕರ್ನಾಟಕದ ರಾಜ್ಯದ ವಿವಿಧ ವಿಭಾಗಗಳ ಹೆಚ್ಚಿನ ಶಾಸಕರು ಮತ್ತು ಪದಾಧಿಕಾರಿಗಳು ಸೇರಿದಂತೆ 500 ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿದ್ದರು. ಈ ಬೆಳವಣಿಗೆ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದ ನೈತಿಕತೆಯನ್ನು ಹೆಚ್ಚಿಸುತ್ತದೆ ಎಂದು ನಾಯಕರೊಬ್ಬರು ಹೇಳಿದ್ದಾರೆ.

ಸಂಗ್ರಹ ಚಿತ್ರ
ಇಂದಿನಿಂದ ಎರಡು ದಿನ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಮಾವೇಶ

ಪ್ರಹ್ಲಾದ್ ಜೋಶಿಯವರು ಮಾತನಾಡಿ, ಅಭ್ಯರ್ಥಿಗಳ ಬಗ್ಗೆ ಪಕ್ಷದ ಹೈಕಮಾಂಡ್ ಸಮಾಲೋಚನೆ ನಡೆಸುತ್ತಿದ್ದು, ಹಂತ ಹಂತವಾಗಿ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.

ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದೇಶಾದ್ಯಂತ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ನಾಯಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ಪಕ್ಷದ ಹೈಕಮಾಂಡ್ ನನ್ನನ್ನು ಆಯ್ಕೆ ಮಾಡಿದರೆ ಬೆಳಗಾವಿ ಮಾತ್ರವಲ್ಲದೆ ಯಾವುದೇ ಕ್ಷೇತ್ರದಲ್ಲಿ ಬೇಕಾದರೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಹೇಳಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ನಾನು ಹಾವೇರಿ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡುವ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com