ಲೋಕಸಭಾ ಚುನಾವಣೆ: ಎಲ್ಲಾ ಗ್ಯಾರಂಟಿಗಳು ಅನುಷ್ಠಾನ, ಮತದಾರರು ಉತ್ತಮವಾಗಿ ಮತ ಚಲಾಯಿಸುವ ನಿರೀಕ್ಷೆ- ಡಿಕೆ ಶಿವಕುಮಾರ್

ಎಲ್ಲಾ ಚುನಾವಣಾ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಉತ್ತಮವಾಗಿ ಮತ ಚಲಾಯಿಸುವ ನಿರೀಕ್ಷೆಯಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ANI
Updated on

ಬೆಂಗಳೂರು: ಎಲ್ಲಾ ಚುನಾವಣಾ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಉತ್ತಮವಾಗಿ ಮತ ಚಲಾಯಿಸುವ ನಿರೀಕ್ಷೆಯಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡಿಕೆ ಶಿವಕುಮಾರ್
ನವದೆಹಲಿ: ಗುಜರಾತ್ ಗೆ ನೀಡಿರುವ ಯೋಜನೆಗಳನ್ನು ನಮಗೂ ನೀಡಬೇಕು- ಡಿಸಿಎಂ ಡಿಕೆ ಶಿವಕುಮಾರ್

ನಗರದಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದ ಜನರು ಸ್ಥಿರವಾಗಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಿದಂತೆ, ಲೋಕಸಭಾ ಚುನಾವಣೆಯಲ್ಲಿಯೂ ಉತ್ತಮವಾಗಿ ಮತ ಚಲಾಯಿಸುತ್ತಾರೆ. ಕಾಂಗ್ರೆಸ್ ಸರ್ಕಾರ ನೀಡಿದ್ದ ಎಲ್ಲಾ ಚುನಾವಣಾ ಭರವಸೆಗಳನ್ನು ಈಡೇರಿಸಲಿದೆ ಎಂದು ಹೇಳಿದರು.

ಚುನಾವಣಾ ಫಲಿತಾಂಶದ ನಂತರ ಪ್ರಧಾನಿ ಮೋದಿ, ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ, ಫಲಿತಾಂಶ ಬಂದ ನಂತರ ನೋಡೋಣಾ ಎಂದರು.

ಈ ಮಧ್ಯೆ ಸಂಸದ ಡಿಕೆ ಸುರೇಶ್ ಕೂಡಾ, ಈ ಬಾರಿ ಖಂಡಿತವಾಗಿಯೂ ರಾಜ್ಯದಲ್ಲಿ ಉತ್ತಮ ರೀತಿಯ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com