ರಾಜಕೀಯ ಸೇಡಿನಿಂದ ಕಾಂಗ್ರೆಸ್ ಪಕ್ಷದ ಬ್ಯಾಂಕ್‌ ಖಾತೆಗಳನ್ನ ಬಿಜೆಪಿ ಸೀಜ್ ಮಾಡಿದೆ: ಪರಮೇಶ್ವರ್

ಆದಾಯ ತೆರಿಗೆ (ಐಟಿ) ಇಲಾಖೆಯು ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವ ಹಿಂದೆ ರಾಜಕೀಯ ದ್ವೇಷವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ಡಾ ಜಿ ಪರಮೇಶ್ವರ್
ಡಾ ಜಿ ಪರಮೇಶ್ವರ್

ಬೆಂಗಳೂರು: ಆದಾಯ ತೆರಿಗೆ (ಐಟಿ) ಇಲಾಖೆಯು ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವ ಹಿಂದೆ ರಾಜಕೀಯ ದ್ವೇಷವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಹೇಗಾದರೂ ತೊಂದರೆ ಕೊಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

ಡಾ ಜಿ ಪರಮೇಶ್ವರ್
ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ: ಗೃಹ ಸಚಿವ ಪರಮೇಶ್ವರ್

ಸುಪ್ರೀಂ ಕೋರ್ಟ್ ಚುನಾವಣೆ ಬಾಂಡ್ ತೆಗೆದುಕೊಳ್ಳಬಾರದು ಎಂದು ಆದೇಶ ಮಾಡಿದೆ. ಇಲ್ಲಿವರೆಗೂ ತೆಗೆದುಕೊಂಡಿರೋ ಬಾಂಡ್‌ಗಳ ಬಗ್ಗೆ ಮಾಹಿತಿ ಕೊಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ. ಈ ಹಿನ್ನೆಲೆಯಲ್ಲಿ ಅವರು ಸೀಜ್‌ ಮಾಡಿದ್ದಾರೆ ಎನಿಸುತ್ತಿದೆ. ಆದರೆ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಖಾತೆಗಳನ್ನ ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ. ಅಕೌಂಟ್ ‌ವಿವರ ಕೇಳಬಹುದಿತ್ತು. ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ ಎಂದು ತಿಳಿಸಿದ್ದಾರೆ.

ಐಟಿಗೆ ಅರಿವಾದ ಮೇಲೆ ಅಕೌಂಟ್ ಓಪನ್ ಮಾಡಿದ್ದಾರೆ. ಇದೆಲ್ಲವನ್ನು ನೋಡಿದರೆ ಉದ್ದೇಶ ಪೂರ್ವಕವಾಗಿ ಕೇಂದ್ರ ಮಾಡುತ್ತಿದೆ ಎಂದೆನಿಸುತ್ತಿದೆ. ಅಂತ ಈ ಸಂಧರ್ಭದಲ್ಲಿ ಮಾಡಿದಾಗ ಉದ್ದೇಶಪೂರ್ವಕವಾಗಿ ಚುನಾವಣೆಗೆ ತೊಂದರೆ ಮಾಡೋದಕ್ಕೆ‌ ಮಾಡುತ್ತಿದ್ದಾರೆಂ ಎನಿಸುತ್ತಿದೆ. ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹೀಗೆ, ಆದರೆ‌ ಇದು ಉದ್ದೇಶಪೂರ್ವಕವಾಗಿ ಆಗಿದೆ ಎನಿಸುತ್ತದೆ. ಇದರಲ್ಲಿ ‌ರಾಜಕೀಯ ಇದೆ ಎಂದೆನಿಸುತ್ತಿದೆ ಎಂದು ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com