ಗ್ಯಾರಂಟಿ ಯೋಜನೆ ಫಲಾನುಭವಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡುತ್ತಾರೆ!

ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಉತ್ಸುಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕಣಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಭಾನುವಾರ ಕನಕ ಭವನ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಭಾನುವಾರ ಕನಕ ಭವನ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಉತ್ಸುಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕಣಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಹೆಚ್'ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು.

ನಮ್ಮ ವಿರೋಧಿಗಳು ಐದು ಗ್ಯಾರಂಟಿ ಘೋಷಣೆ ಮಾಡಿದಾಗ ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ಈಗ ರಾಜ್ಯ ಸುಭದ್ರವಾಗಿದೆ. ಕಳೆದ ಭಾರಿ ಬಜೆಟ್‍ಗಿಂತ 46 ಸಾವಿರ ಕೋಟಿ ರೂ. ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮಾನ ನೀಡಲಿದ್ದಾರೆ. 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆಂದು ಹೇಳಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಭಾನುವಾರ ಕನಕ ಭವನ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಕನಿಷ್ಟ 20 ಕ್ಷೇತ್ರಗಳಲ್ಲಿ ಗೆಲುವು ಖಚಿತ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಈಗ ಇರುವದು ಒಂದೇ ವಿರೋಧ ಪಕ್ಷ, ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನಗೊಂಡು ಕೇಸರಿ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಮುಸ್ಲಿಮನಾಗಿ ಮರುಹುಟ್ಟು ಪಡೆಯಬೇಕೆಂದು ಹಿಂದೊಮ್ಮೆ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು, ಇದೀಗ ಕೋಮುವಾದಿ ಪಕ್ಷ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಪಕ್ಷದ ಜಾತ್ಯಾತೀತ ಪದವನ್ನು ಮರೆದು ಮೋದಿಯವರನ್ನು ಕೊಂಡಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ 39ರಿಂದ 19 ಸ್ಥಾನಕ್ಕೆ ಕುಸಿದು ಮುಂದಿನ ಚುನಾವಣೆ ವೇಳೆಗೆ ರಾಜ್ಯ ರಾಜಕಾರಣದಿಂದ ಕಣ್ಮರೆಯಾಗುವ ಭೀತಿಯಿಂದಾಗಿ ಜೆಡಿಎಸ್ ಬಿಜೆಪಿ ಜತೆ ಕೈಜೋಡಿಸಿದೆ ಎಂದು ತಿಳಿಸಿದರು.

ಇದೇ ವೇಳೆ ಬಜೆಟ್ ಕುರಿತು ವಿಪಕ್ಷಗಳ ಟೀಕೆ ಕುರಿತು ಮಾತನಾಡಿ, ಬಡವರ ವಿರುದ್ಧ ಇರುವವರು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯನ್ನು ಕಲ್ಪಿಸಿರುವ ಬಜೆಟ್ ಅನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಕೇಂದ್ರವು ರಾಜ್ಯದ ಪಾಲಿನ 1.87 ಲಕ್ಷ ಕೋಟಿ ರೂ.ಗಳನ್ನು ನಮಗೆ ನೀಡಿದರೆ ನಾವು ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ಮಳವಳ್ಳಿಯಲ್ಲಿ 370 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಹಿಡಿದು ಬಿಜೆಪಿ-ಜೆಡಿಎಸ್ ಪಕ್ಷಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಳವಳ್ಳಿ ಮತ್ತು ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ವಿರೋಧ ಪಕ್ಷಗಳ ಕೊಡುಗೆ ಏನು? ನಾವು ಅವರಂತೆ ಕೊಟ್ಟ ಮಾತನ್ನು ಉಳಿಸಿಕೊಳ್ಳಂತೆ ನಡೆಯುವುದಿಲ್ಲ. ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಈ ಬಾರಿ ಪಕ್ಷವು ಎಲ್ಲಾ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯಲಾಗುತ್ತದೆ ಎಂದು ತಿಳಿಸಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಭಾನುವಾರ ಕನಕ ಭವನ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಮಂಗಳೂರು-ಉಡುಪಿ ಜನ ನಿಮ್ಮನ್ನೇಕೆ ಗೆಲ್ಲಿಸಬೇಕು: ಕಟೀಲ್, ಶೋಭಾ ಕರಂದ್ಲಾಜೆಗೆ ಸಿದ್ದರಾಮಯ್ಯ ಪ್ರಶ್ನೆ

ಸಿದ್ದು ಗ್ಯಾರಂಟಿ ಯೋಜನೆಗಳನ್ನು ಮೋದಿ ನಕಲು ಮಾಡಿದ್ದಾರೆ: ಸಚಿವ

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಕೇಂದ್ರದ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಭಾನುವಾರ ಟೀಕಿಸಿದ್ದಾರೆ.

ಹಲವು ರಾಜ್ಯಗಳು ಸಿಎಂ ಸಿದ್ದರಾಮಯ್ಯನವರ ಆಡಳಿತವನ್ನು ಪ್ರಶಂಸಿಸುತ್ತಿವೆ, ಸಿದ್ದರಾಮಯ್ಯ ಮೋದಿ ಸರ್ಕಾರವನ್ನು ಎದುರಿಸುವ ಏಕೈಕ ನಾಯಕರಾಗಿದ್ದಾರೆ. ಬಡವರ ಉದ್ಧಾರಕ್ಕಾಗಿ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com