ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಖರ್ಗೆ ಕಳವಳ; ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದ ಎಐಸಿಸಿ ಅಧ್ಯಕ್ಷ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಬೀದರ್‌ನಲ್ಲಿ ಮಾಡಿದ ಭಾಷಣದಲ್ಲಿ ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on

ಬೀದರ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಬೀದರ್‌ನಲ್ಲಿ ಮಾಡಿದ ಭಾಷಣದಲ್ಲಿ ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ 371(ಜೆ) ಕಲಂ ತಿದ್ದುಪಡಿಯ ರೂವಾರಿ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜಕೀಯ ಜೀವನಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ನೆಹರೂ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಖರ್ಗೆ, ಇತ್ತೀಚೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದೆ. ಈ ವೇಳೆ ಎನ್‌ಡಿಎ ಕಡೆಗೆ ಆಕರ್ಷಿಸಲು ವಿರೋಧ ಪಕ್ಷದ ನಾಯಕರಿಗೆ ಏನು ಔಷಧಿ ನೀಡುತ್ತಿದ್ದೀರಿ ಮತ್ತು ಇನ್ನೂ ಎಷ್ಟು ವಿರೋಧ ಪಕ್ಷದ ನಾಯಕರನ್ನು ಎನ್‌ಡಿಎ ಕಡೆಗೆ ಸೆಳೆಯಲು ಬಯಸುತ್ತೀರಿ ಎಂದು ಕೇಳಿದೆ. ಅದಕ್ಕೆ ಅವರು ನಮ್ಮ ಬಳಿಗೆ ಅವರೇ ಬಂದರೆ ನಾನೇನು ಮಾಡಬೇಕು ಎಂದು ಮೋದಿ ನಗುತ್ತಲೇ ಹೇಳಿದರು.

ಅಭಿನಂದನಾ ಸಮಾರಂಭ
ಅಭಿನಂದನಾ ಸಮಾರಂಭ

ವಾಸ್ತವವಾಗಿ ಬಿಜೆಪಿ, ಆರೆಸ್ಸೆಸ್ ಮತ್ತು ಮೋದಿ ಪ್ರತಿಪಕ್ಷಗಳಿಗೆ ಆದಾಯ ತೆರಿಗೆ ಇಲಾಖೆ, ಇಡಿ, ಸಿಬಿಐ ಬೆದರಿಕೆ ಮಾತ್ರೆಗಳನ್ನು ನೀಡುತ್ತಿದ್ದಾರೆ. ಭಯದ ಕಾರಣದಿಂದ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ದೊಡ್ಡ ನಾಯಕರು, ಮಂತ್ರಿ, ಮುಖ್ಯಮಂತ್ರಿ ಸೇರಿದಂತೆ ಉನ್ನತ ಹುದ್ದೆಗಳನ್ನು ಅನುಭವಿಸಿದವರು ತಮ್ಮ ಪಕ್ಷವನ್ನು ತೊರೆದು ಎನ್‌ಡಿಎ ಸೇರುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು.

ಪ್ರಜಾಪ್ರಭುತ್ವ ಮತ್ತು ಭಾರತದ ಸಂವಿಧಾನ ಅಪಾಯದಲ್ಲಿದೆ ಎಂದ ಎಐಸಿಸಿ ಅಧ್ಯಕ್ಷರು, ಪ್ರಜಾಪ್ರಭುತ್ವ ಮತ್ತು ಭಾರತೀಯ ಸಂವಿಧಾನವನ್ನು ರಕ್ಷಿಸಲು ಬಯಸುವ ನಾವು ಒಗ್ಗಟ್ಟಾಗಿ ಮತ್ತು ಎಲ್ಲಾ ಬೆದರಿಕೆಗಳನ್ನು ಎದುರಿಸಿ 2024ರ ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಅವಶ್ಯಕತೆ ಇದೆ ಎಂದರು.

ಪ್ರಜಾಪ್ರಭುತ್ವ ಮತ್ತು ಭಾರತೀಯ ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ಖರ್ಗೆ ಕರೆ ನೀಡಿದರು.

ಮಲ್ಲಿಕಾರ್ಜುನ ಖರ್ಗೆ
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿಯವರು ಧರ್ಮವನ್ನು ರಾಜಕೀಯದೊಂದಿಗೆ ಬೆರೆಸುತ್ತಿದ್ದಾರೆ. ಧರ್ಮ ಬೋಧನೆ ಮಾಡಿದರೆ ಮನೆ, ಮಂದಿರಗಳಲ್ಲಿ ಮಾಡಬೇಕು. ಆದರೆ ರಾಜಕೀಯದಲ್ಲಿ ಧರ್ಮ ಬೆರೆಸಬಾರದು. ನೀವು ಜನರನ್ನು ಒಂದು ಅಥವಾ ಎರಡು ಬಾರಿ ಮರುಳು ಮಾಡಬಹುದು. ಪದೇಪದೆ ಸಾರ್ವಜನಿಕರನ್ನು ಮರುಳು ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷರು ಪ್ರಧಾನಿಗೆ ಎಚ್ಚರಿಕೆ ನೀಡಿದರು.

ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುತ್ತೇವೆ, ಪ್ರತಿಯೊಬ್ಬ ನಾಗರಿಕನಿಗೂ 15 ಲಕ್ಷ ರೂಪಾಯಿ ನೀಡುತ್ತೇವೆ, ಕಾಂಗ್ರೆಸ್ ಆಡಳಿತದಲ್ಲಿನ ಕಪ್ಪುಹಣವನ್ನಾಗಿ ತಂದು ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂಬ ನಿಮ್ಮ ಸುಳ್ಳು ಭರವಸೆಗಳನ್ನು ಜನ ಮರೆಯುವುದಿಲ್ಲ. 10 ವರ್ಷ ಕಳೆದರೂ ಒಂದೇ ಒಂದು ಭರವಸೆಯೂ ಈಡೇರಿಲ್ಲ ಎಂದು ಖರ್ಗೆ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com