ಮಂಡ್ಯ-ಹಾಸನ ಟಿಕೆಟ್ ಹಂಚಿಕೆ ಕಗ್ಗಂಟು: ಮಾಜಿ ಸಿಎಂ ಕುಮಾರಸ್ವಾಮಿ ದೆಹಲಿಗೆ ದೌಡು

ಇಂದು ಅಮಿತ್ ಶಾ ಭೇಟಿ, ಮೈತ್ರಿ ಅಭ್ಯರ್ಥಿಗಳ ಆಯ್ಕೆ ಗೊಂದಲಕ್ಕೆ ಇಂದೇ ಬೀಳುತ್ತಾ ತೆರೆ?
ರಾಜ್ಯದ ಬಿಜೆಪಿ ನಾಯಕರೊಂದಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)
ರಾಜ್ಯದ ಬಿಜೆಪಿ ನಾಯಕರೊಂದಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)

ಬೆಂಗಳೂರು: ಫೆಬ್ರವರಿ 27ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ-ಜೆಡಿಎಸ್ ಮೈತ್ರಿಯ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಕದನ ಕುತೂಹಲ ಮೂಡಿಸಿರುವುದು ಗೊತ್ತೇ ಇದೆ. ಈಗ ಎರಡೂ ಪಕ್ಷಗಳ ನಾಯಕರಿಗೆ ಅದಕ್ಕಿಂತ ಹೆಚ್ಚು ತಲೆನೋವಾಗಿರುವುದು ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳ ಟಿಕೆಟ್ ಹಂಚಿಕೆ.

ಮಂಡ್ಯ ಜಿಲ್ಲೆಯ ಹಾಲಿ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಯಿಂದ ತಮಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದರೆ ಇತ್ತ ಹಾಸನದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈ ಎರಡೂ ಕ್ಷೇತ್ರಗಳನ್ನು ಜೆಡಿಎಸ್ ಬಿಟ್ಟುಕೊಡಲು ಸುತಾರಾಂ ಒಪ್ಪುತ್ತಿಲ್ಲ, ಮಂಡ್ಯದಲ್ಲಿ ಸಿಎಸ್ ಪುಟ್ಟರಾಜು ಅಥವಾ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಈ ನಡುವೆ ಹೆಚ್ ಡಿ ಕುಮಾರಸ್ವಾಮಿ ಅವರ ಹೆಸರೂ ಕೇಳಿಬರುತ್ತಿದೆ. ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೊಮ್ಮೆ ಸ್ಪರ್ಧಿಸಿ ಗೆದ್ದು ಬರುವ ಹುಮ್ಮಸ್ಸಿನಲ್ಲಿದ್ದಾರೆ. ಹೀಗಾಗಿ ಬಿಜೆಪಿ-ಜೆಡಿಎಸ್ ಹೈಕಮಾಂಡ್ ಗೆ ಈ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ.

ರಾಜ್ಯದ ಬಿಜೆಪಿ ನಾಯಕರೊಂದಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)
ಲೋಕ ಸಮರ: ಮಂಡ್ಯ ಕ್ಷೇತ್ರದಿಂದ ಸುಮಲತಾ ಶಿಫ್ಟ್? ಬೆಂಗಳೂರು ಗ್ರಾಮಾಂತರಕ್ಕೆ ನಾನೇ ಫಿಟ್- ಸಿ.ಪಿ ಯೋಗೇಶ್ವರ್ !


ಕುಮಾರಸ್ವಾಮಿ ದೆಹಲಿಗೆ:
ಮುಂಬರುವ ಸಾರ್ವತ್ರಿಕ ಚುನಾವಣೆಗಳು, ಟಿಕೆಟ್ ಹಂಚಿಕೆ ಸಂಬಂಧ ಚರ್ಚಿಸಲು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿದ್ದು, ಇಂದು ಗೃಹ ಸಚಿವ ಅಮಿತ್‌ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಸಂಸದೆ ಸುಮಲತಾ ಅವರಿಗೆ ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡಲಾಗುವುದು ಎಂಬ ಸುದ್ದಿ ಹಬ್ಬಿದ್ದು ಇದರ ಬೆನ್ನಲ್ಲೇ ಕುಮಾರಸ್ವಾಮಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಮತ್ತು ಹಾಸನ ಟಿಕೆಟ್‌ ಜೆಡಿಎಸ್‌ಗೆ ನೀಡುವಂತೆ ಕಸರತ್ತು ನಡೆಸಲಾಗುತ್ತಿದೆ. ಆದರೆ, ಬಿಜೆಪಿಗೆ ಟಿಕೆಟ್‌ ನೀಡುವ ಸಾಧ್ಯತೆ ಇದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ದೆಹಲಿ ಭೇಟಿ ಪ್ರಮುಖವಾಗಿದೆ.

ರಾಜ್ಯದ ಬಿಜೆಪಿ ನಾಯಕರೊಂದಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)
ಹಾಸನ ಕ್ಷೇತ್ರ ಯಾರಿಗೆ: ಜೆಡಿಎಸ್-ಬಿಜೆಪಿ ನಾಯಕರುಗಳ ಭಿನ್ನ ಹೇಳಿಕೆ; ಸಂದಿಗ್ಧತೆಯಲ್ಲಿ ಎರಡೂ ಪಕ್ಷದ ಕಾರ್ಯಕರ್ತರು!

ಅಲ್ಲದೇ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಐದನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಪೇಂದ್ರರೆಡ್ಡಿ ಅವರ ಗೆಲುವಿಗೆ ರೂಪಿಸಲಾಗಿರುವ ರಾಜಕೀಯ ತಂತ್ರಗಾರಿಕೆ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದೇ ಗೊಂದಲಕ್ಕೆ ಅಮಿತ್ ಶಾ ತೆರೆ?: ಲೋಕಸಭೆ ಚುನಾವಣೆಗೆ ಮುಂದಿನ ತಿಂಗಳ ಆರಂಭದಲ್ಲಿ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ. ಹೀಗಾಗಿ ಎಲ್ಲಾ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡುವ ಸಿದ್ಧತೆಯಲ್ಲಿವೆ. ಚುನಾವಣೆ ದಿನಾಂಕ ಪ್ರಕಟವಾಗುವ ಹೊತ್ತಿಗೆ ಈಗಿರುವ ಟಿಕೆಟ್ ಹಂಚಿಕೆ ಗೊಂದಲ ಬರೆಹರಿಯಬೇಕು. ಹೀಗಾಗಿ ಅಭ್ಯರ್ಥಿಗಳ ಆಯ್ಕೆಗೆ ಇಂದೇ ಕೊನೆ ಸುತ್ತಿನ ಮಾತುಕತೆ ನಡೆಸಿ ಗೊಂದಲ ಬಗೆಹರಿದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಇಂದೇ ಬಗೆಹರಿಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಬಿಜೆಪಿ ನಾಯಕರೊಂದಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)
ಬಿಜೆಪಿ –ಜೆಡಿಎಸ್ ಮೈತ್ರಿಯ ಹಾದಿ ನಿರ್ಧರಿಸಲಿರುವ ರಾಜ್ಯಸಭೆ ಚುನಾವಣೆ ಫಲಿತಾಂಶ (ಸುದ್ದಿ ವಿಶ್ಲೇಷಣೆ)

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com