ಗ್ಯಾರಂಟಿ ಯೋಜನೆಗಳ ವಿರೋಧಿಸುತ್ತಿರುವ ಬಿಜೆಪಿ-ಜೆಡಿಎಸ್ ತಕ್ಕ ಬೆಲೆ ತೆರಬೇಕಾಗುತ್ತದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಲನ್ನು ವಿರೋಧಿಸುತ್ತಿರುವ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದರು.
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಸಿಎಂ ಸಿದ್ದರಾಮಯ್ಯ
ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಸಿಎಂ ಸಿದ್ದರಾಮಯ್ಯ

ಬಾಣಾವರ (ಹಾಸನ): ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಲನ್ನು ವಿರೋಧಿಸುತ್ತಿರುವ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದರು.

ಬಾಣಾವರದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಜಾತ್ಯತೀತತೆ ಮರೆತು ಕೋಮುವಾದಿ ಶಕ್ತಿಗಳೊಂದಿಗೆ ಕೈಜೋಡಿಸಿದ್ದಾರೆಂದು ಕಿಡಿಕಾರಿದರು.

ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಸಿಎಂ ಸಿದ್ದರಾಮಯ್ಯ
ರಾಜ್ಯವನ್ನು ಲೂಟಿ ಮಾಡಿದ ಕಾರಣ ಬಿಜೆಪಿಯನ್ನು ಜನರು ತಿರಸ್ಕರಿಸಿದ್ದರು: ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಸಾಧ್ಯವಿಲ್ಲ ಎಂಬುದನ್ನು ಇತ್ತೀಚಿನ ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಸಾಬೀತಾಗಿದೆ. ಮೋದಿ ಸರ್ಕಾರ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿದೆ. "ಮೋದಿ ಗ್ಯಾರಂಟಿ" ಎಂದು ಮರುನಾಮಕರಣ ಮಾಡಿದ್ದಾರೆ. “ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಶೇ,40 ಕಮಿಷನ್‌ನಲ್ಲಿ ತೊಡಗಿದ್ದರಿಂದ ಜನರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ್ದರು ಎಂದು ಹೇಳಿದರು.

ದೇವೇಗೌಡ ವಿರುದ್ಧ ವಾಗ್ದಾಳಿ ನಡೆಸಿ, ಮಣ್ಣಿನ ಮಗ ಎಂದು ಕರೆಯಲ್ಪಡುವವರು ರಾಜ್ಯದ ರೈತರು ಮತ್ತು ಬಡವರ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿರುವುದು ದುರಾದೃಷ್ಟಕರ ಸಂಗತಿ. ಅರಸೀಕೆರೆಯಂತಹ ಬತ್ತಿ ಹೋಗಿರುವ ಪ್ರದೇಶಗಳಿಗೆ ನೀರು ಕೊಡುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಎಚ್.ಡಿ.ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಕೇಂದ್ರದಿಂದ ವಿವಿಧ ಯೋಜನೆಗಳಿಗೆ ಭರವಸೆ ನೀಡಿದ್ದ ಅನುದಾನ ಪಡೆಯುವಲ್ಲಿ ಬಿಜೆಪಿ ನಾಯಕರು ಸಂಪೂರ್ಣ ವಿಫಲರಾಗಿದ್ದಾರೆ. ಜಿಎಸ್‌ಟಿಯಲ್ಲಿ ರಾಜ್ಯದ ಪಾಲನ್ನು ಬಿಡುಗಡೆ ಮಾಡದೆ ಕೇಂದ್ರವು 6.65 ಕೋಟಿ ಕನ್ನಡಿಗರಿಗೆ ಮೋಸ ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿಲ್ಲ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com