ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಲಂಚ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ.
ಪ್ರಕರಣದ ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆಗಾಗಿ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.
ಸಿಎಂ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ವರದಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದು, ತನಿಖೆಯನ್ನು ಮುಂದುವರಿಸುವಂತೆ ಸೂಚಿಸಿದೆ.
Advertisement