ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಗೆ ಬಿಗಿಪಟ್ಟು ಹಿಡಿದಿರುವ ಸಂಸದೆ ಸುಮಲತಾ ಅಂಬರೀಶ್ ಭಾನುವಾರ ಜೆಪಿ ನಗರದ ತಮ್ಮ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ನಟ ದರ್ಶನ್, ರಾಕ್ ಲೈನ್ ವೆಂಕಟೇಶ್, ಬೆಂಬಲಿಗ ಇಂಡವಾಳು ಸಚ್ಚಿದಾನಂದ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಬೆಂಬಲಿಗರು, ಹಿತೈಷಿಗಳು ಪಾಲ್ಗೊಂಡಿದ್ದು, ಸುಮಲತಾ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ.
ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಹಿನ್ನೆಲೆಯಲ್ಲಿ ಇತ್ತೀಚಿಗೆ ನವದೆಹಲಿಯಲ್ಲಿ ಅಮಿತ್ ಶಾ- ಕುಮಾರಸ್ವಾಮಿ ನಡುವೆ ನಡೆದ ಚರ್ಚೆ ವೇಳೆ ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ ಎಂಬಂತಹ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಕಳೆದ ಬಾರಿ ಪಕ್ಷೇತರ ವಾಗಿ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದ ಸುಮಲತಾ, ಈ ಬಾರಿ ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದರೆ ಮುಂದೆ ಏನು ಮಾಡಬೇಕೆಂಬ ಬಗ್ಗೆ ಸಭೆಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಮತ್ತೊಂದೆಡೆ ಸಂಸದೆಯೊಂದಿಗೆ ಬಹಳ ದಿನಗಳಿಂದ ಅಂತರ ಕಾಯ್ದುಕೊಂಡಿದ್ದ ಬೆಂಬಲಿಗ ಇಂಡವಾಳು ಸಚ್ಚಿದಾನಂದ ಅವರ ಮುನಿಸು ಶಮನಗೊಳಿಸುವ ಪ್ರಯತ್ನ ನಡೆಯುತ್ತಿದೆ. ಸಚ್ಚಿ ಜೊತೆ ಮತ್ತೆ ಬಾಂಧವ್ಯ ಬೆಸಯಲು ಡಿ ಬಾಸ್ ಮೊರೆ ಹೋಗಿರುವ ಸುಮಲತಾ ಅವರು ಸಚ್ಚಿದಾನಂದ ಜೊತೆ ಸಂಧಾನ ಮಾಡಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement