ಪ್ರಾಮಾಣಿಕ ಬಿಜೆಪಿ ಕಾರ್ಯಕರ್ತರು ನನ್ನ ವಿರುದ್ಧ ಪತ್ರ ಚಳವಳಿ ನಡೆಸಿಲ್ಲ: ಶೋಭಾ ಕರಂದ್ಲಾಜೆ

ಪ್ರಾಮಾಣಿಕ ಬಿಜೆಪಿ ಕಾರ್ಯಕರ್ತರು ನನ್ನ ವಿರುದ್ಧ ಪತ್ರ ಚಳವಳಿ ಮಾಡಿಲ್ಲ. ಬೇರೆ ಪಕ್ಷದಲ್ಲಿದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸಿ ರೂಢಿ ಇರುವವರೇ ಈಗ ಹೀಗೆ ಮಾಡಿಸಿರುವ ಅನುಮಾನ ಇದೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದರು.
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
Updated on

ಚಿಕ್ಕಮಗಳೂರು: ಪ್ರಾಮಾಣಿಕ ಬಿಜೆಪಿ ಕಾರ್ಯಕರ್ತರು ನನ್ನ ವಿರುದ್ಧ ಪತ್ರ ಚಳವಳಿ ಮಾಡಿಲ್ಲ. ಬೇರೆ ಪಕ್ಷದಲ್ಲಿದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸಿ ರೂಢಿ ಇರುವವರೇ ಈಗ ಹೀಗೆ ಮಾಡಿಸಿರುವ ಅನುಮಾನ ಇದೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಲಾಗುತ್ತಿದೆ. ನಿಜವಾದ ಬೆಜೆಪಿ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ. ಯಾರೋ ಈ ರೀತಿ ಮಾಡಿಸಿದ್ದಾರೆ. ಅಧಿಕಾರಕ್ಕಾಗಿ ನಮ್ಮ ಪಕ್ಷಕ್ಕೆ ಬಂದವರು ಈ ರೀತಿ ಮಾಡಿಸಿರಬಹುದು, ಅವರು ಹಿಂದಿದ್ದ ಪಕ್ಷದಲ್ಲಿ ಇಂತಹ ಚಾಳಿಯನ್ನು ನಡೆಸಿದ್ದಾರೆ. ಇಲ್ಲೂ ನಡೆಸಿದ್ದಾರೆ. ಇದ್ಯಾವುದಕ್ಕೂ ತಲೆ ಕಡೆಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟಿಕೆಟ್ ಕೇಳಲು ಎಲ್ಲರಿಗೂ ಅವಕಾಶವಿದೆ. ಆದರೆ, ಇನ್ನೊಬ್ಬರನ್ನು ತೇಜೋವಧೆ ಮಾಡುವ ಕೆಲಸ ಮಾಡಬಾರದು. ಅಭಿಯಾನ, ಪತ್ರ ಚಳುವಳಿ ಯಾವುದೂ ಎಫೆಕ್ಟ್ ಆಗಲ್ಲ. ಇದೇ‌ ರೀತಿ ಹಿಂದಿನ ಚುನಾವಣೆಯಲ್ಲೂ ಮಾಡಿದ್ದರು. ನಾವು ನಮ್ಮ ವಿರುದ್ದ ನಿಲ್ಲುವ ಅಭ್ಯರ್ಥಿಯನ್ನು ಅಲ್ಲಗಳೆಯುವುದಿಲ್ಲ. ಅಭಿವೃದ್ಧಿ ಆಧಾರದ ಮೇಲೆ ಮತದಾರರ ಬಳಿ ತೆರಳುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
ಬರ ಪರಿಹಾರ ಬಿಡುಗಡೆಗೆ 'ಜಂಟಿ ಖಾತೆ' ಅನಿವಾರ್ಯ: ಕೇಂದ್ರ ಸಚಿವ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು- ಉಡುಪಿ ಕ್ಷೇತ್ರಕ್ಕೆ ಎಷ್ಟು ಅನುದಾನ ತಂದಿದ್ದೇನೆಂಬ ಮಾಹಿತಿ ನನಗೂ ಇದೆ. ಕೇಂದ್ರದ ಮಂತ್ರಿಗಳೊಂದಿಗೆ ಜಗಳವಾಡಿ ಇಲ್ಲಿಗೆ ಅನುದಾನ ತಂದಿದ್ದೇನೆ. ನಾನು ಇದುವರೆಗೂ ಯಾವ ಗುತ್ತಿಗೆದಾರನಿಂದ ಒಂದು ರೂ.ಪಡೆದಿಲ್ಲ. ಅವರ ಮುಖವನ್ನು ಕೂಡ ನೋಡಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದರು.

ಅನುದಾನ ತಂದಿರುವ ಬಗ್ಗೆ ಪ್ರಶ್ನಿಸುವಾಗ ಬಹಳ ಬುದ್ದಿವಂತಿಕೆಯಿಂದ ಕೇಳಿದ್ದಾರೆ. 2019, 2020, 2021ರ ಅನುದಾನ ಕೇಳಿದ್ದಾರೆ. ಆದರೆ, ಆ ವರ್ಷದಲ್ಲಿ ಕೇಂದ್ರದಿಂದ ಎಂ.ಪಿ ಗಳಿಗೆ ನಿಧಿಯನ್ನು ಕೊಟ್ಟಿಲ್ಲ. ಆ ವರ್ಷ ನಿಧಿಯನ್ನು ಕೊರೋನಕ್ಕೆ ಬಳಕೆ ಮಾಡಲಾಗಿತ್ತು. ಈ ಬಗ್ಗೆ ಆರ್ ಟಿಐನಲ್ಲಿ ಕೇಳಲಾಗಿದ್ದು, ಇದರ ಹಿಂದಿರುವ ಉದ್ದೇಶ ಕೆಟ್ಟದಿದೆ. ಇದನ್ನು ಯಾರು ಮಾಡಿದ್ದಾರೆ ಅವರು ಮುಂದೆ ಅನುಭವಿಸುತ್ತಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com