ದೇಶದಲ್ಲಿ ಸಿದ್ದರಾಮಯ್ಯ ಅವರದ್ದೇ ಕೊನೆಯ ಕಾಂಗ್ರೆಸ್ ಸರ್ಕಾರ: ಜಗದೀಶ್ ಶೆಟ್ಟರ್

ದೇಶದಲ್ಲಿ ಸಿದ್ದರಾಮಯ್ಯ ಅವರದ್ದೇ ಕೊನೆಯ ಕಾಂಗ್ರೆಸ್ ಸರ್ಕಾರ, ಮುಂದೆ ಕಾಂಗ್ರೆಸ್ ಸರ್ಕಾರ ಬರಲ್ಲ ಎಂದು ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಂಗಳೂರು: ದೇಶದಲ್ಲಿ ಸಿದ್ದರಾಮಯ್ಯ ಅವರದ್ದೇ ಕೊನೆಯ ಕಾಂಗ್ರೆಸ್ ಸರ್ಕಾರ, ಮುಂದೆ ಕಾಂಗ್ರೆಸ್ ಸರ್ಕಾರ ಬರಲ್ಲ ಎಂದು ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಇದ್ದಾಗ ಕಾಂಗ್ರೆಸ್ ಪರಿಸ್ಥಿತಿ ಏನಿತ್ತು ಎಂಬುದನ್ನು ಸಿದ್ದರಾಮಯ್ಯ ತಿಳಿದುಕೊಳ್ಳಬೇಕು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅನುದಾನ ತಾರತಮ್ಯದ ಹೆಸರಿನಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಕೇಂದ್ರದಲ್ಲಿ ಯುಪಿಎ ಸರ್ಕಾರ ಇದಿದ್ದರೆ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡುತ್ತಿರಲಿಲ್ಲ ಎಂದರು.

ಜಗದೀಶ್ ಶೆಟ್ಟರ್
ಮಾತೃ ಪಕ್ಷಕ್ಕೆ ಮರಳಿದ ಮಾಜಿ ಸಿಎಂ: ಬೆಳಗಾವಿಯಿಂದ ಶೆಟ್ಟರ್ ಸೊಸೆ ಶ್ರದ್ಧಾ; ಹಾವೇರಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ?

ಮೋದಿ ಜನಪ್ರಿಯತೆ ಸಹಿಸಲಾಗದೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ. ಅನುದಾನ ನೀಡಿಕೆ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ. ನೀತಿ ಆಯೋಗದಲ್ಲಿ ರಾಜ್ಯದ ಹಣಕಾಸು ಮಂತ್ರಿ ಇರುವುದರಿಂದ ಅಲ್ಲಿ ಪ್ರಶ್ನಿಸಲಿ. ಕಾನೂನು ಪ್ರಕಾರ ಹೋರಾಡುವುದು ಬಿಟ್ಟು ಕೇಂದ್ರದ ವಿರುದ್ಧ ಎರಡು ನಿರ್ಣಯ ಕೈಗೊಂಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಏಟು ಬಿದ್ದಂತಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com