ಜೆಡಿಎಸ್‌-ಬಿಜೆಪಿ ಮೈತ್ರಿ ಸೀಟು ಹಂಚಿಕೆಯನ್ನು 'ವೈಫ್ ಸ್ವ್ಯಾಪಿಂಗ್‌ ಸಿಸ್ಟಂ' ಎಂದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್!

ಜೆಡಿಎಸ್‌-ಬಿಜೆಪಿ ಮೈತ್ರಿ ಸೀಟು ಹಂಚಿಕೆ ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಅವರು ವಾಗ್ದಾಳಿ ನಡೆಸಿದ್ದು, 'ವೈಫ್ ಸ್ವ್ಯಾಪಿಂಗ್‌ ಸಿಸ್ಟಂ' ರೀತಿ ಎರಡು ಪಕ್ಷಗಳು ಸೀಟು ಹಂಚಿಕೆ ಮಾಡಿಕೊಳ್ಳುತ್ತಿವೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ವಕ್ತಾರ ಲಕ್ಷ್ಮಣ್
ಕಾಂಗ್ರೆಸ್ ವಕ್ತಾರ ಲಕ್ಷ್ಮಣ್

ಮೈಸೂರು: ಜೆಡಿಎಸ್‌-ಬಿಜೆಪಿ ಮೈತ್ರಿ ಸೀಟು ಹಂಚಿಕೆ ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಅವರು ವಾಗ್ದಾಳಿ ನಡೆಸಿದ್ದು, 'ವೈಫ್ ಸ್ವ್ಯಾಪಿಂಗ್‌ ಸಿಸ್ಟಂ' ರೀತಿ ಎರಡು ಪಕ್ಷಗಳು ಸೀಟು ಹಂಚಿಕೆ ಮಾಡಿಕೊಳ್ಳುತ್ತಿವೆ ಎಂದು ಟೀಕಿಸಿದ್ದಾರೆ.

ಭಾನುವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎರಡು ವರ್ಷಗಳ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ವೈಫ್ ಸ್ವ್ಯಾಪಿಂಗ್‌ ದಂಧೆಯನ್ನು ಪೊಲೀಸರು ಭೇದಿಸಿದ್ದರು. ವೈಫ್-ಸ್ವಾಪಿಂಗ್ ಎಂದರೆ ವಿವಾಹಿತರ ನಡುವೆ ಕೆಲವು ಗಂಟೆಗಳ ಕಾಲ ಪತ್ನಿಯರನ್ನು ವಿನಿಮಯ ಮಾಡಿಕೊಳ್ಳುವುದಾಗಿದೆ. ಬೆಂಗಳೂರಿನಲ್ಲಿ ಪೊಲೀಸರು ಜಾಲವನ್ನು ಭೇದಿಸಿದ ನಂತರ ಇದು ದೊಡ್ಡ ಸುದ್ದಿಯಾಗಿತ್ತು. ಈಗ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸೀಟು ಹಂಚಿಕೆ ಕೂಡ ಹಾಗೆಯೇ ಆಗಿದೆ.

ಕಾಂಗ್ರೆಸ್ ವಕ್ತಾರ ಲಕ್ಷ್ಮಣ್
ದೇಶದಲ್ಲಿ ಸಿದ್ದರಾಮಯ್ಯ ಅವರದ್ದೇ ಕೊನೆಯ ಕಾಂಗ್ರೆಸ್ ಸರ್ಕಾರ: ಜಗದೀಶ್ ಶೆಟ್ಟರ್

ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು, ತುಮಕೂೂರು, ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿಗಳು ಬಿಜೆಪಿ ಚಿಹ್ನೆಯಲ್ಲಿ ಸ್ಪರ್ಧಿಸುತ್ತಾರೆ. ಹೀಗೆ ಮಾಡಿ ಜೆಡಿಎಸ್ ಪಕ್ಷವನ್ನು ಬಿಜೆಪಿ ಮುಗಿಸಲು ಹೊರಟಿದೆ. ಈಗಾಗಲೇ ಮೈತ್ರಿಗೆ ಜೆಡಿಎಸ್ ಕಾರ್ಯಕರ್ತರಿಗೆ ಅಸಮಾಧಾನವಾಗಿದೆ. ಮುಂದಿನ ದಿನಗಳಲ್ಲಿ ಜನರೇ ಇವರಿಗೆ ಉತ್ತರ ಕೊಡುತ್ತಾರೆಂದು ಹೇಳಿದರು.

ಮೇಲ್ಮನೆಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ (ತಿದ್ದುಪಡಿ) ಮಸೂದೆಯ ಸೋಲಿನ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಮಸೂದೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ. ಮಸೂದೆಯ ಮೂಲಕ, ಎ ಗ್ರೇಡ್ ಪಟ್ಟಿಯಡಿ ಬರುವ ಶ್ರೀಮಂತ ಹಿಂದೂ ದೇವಾಲಯಗಳ ಹಣದ ಒಂದು ಭಾಗವನ್ನು ಒಂದು ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಸಿ ದರ್ಜೆಯ ಹಿಂದೂ ದೇವಾಲಯಗಳಿಗೆ ನೀಡಲಾಗುವುದು. ಅರ್ಚಕರಿಗೆ ಆರೋಗ್ಯ ವಿಮೆ, ಅರ್ಚಕರ ಅಕಾಲಿಕ ಮರಣದ ಸಂದರ್ಭದಲ್ಲಿ ಕುಟುಂಬ ಸದಸ್ಯರಿಗೆ ರೂ 2 ಲಕ್ಷ ಪರಿಹಾರ ಮತ್ತು ದೇವಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಮಸೂದೆಯಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com