ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ರಾಜ್ಯಸಭೆ ಚುನಾವಣೆ: ಮತ ಚಲಾಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ-ಜೆಡಿಎಸ್ ವಿರುದ್ಧ ವಾಗ್ದಾಳಿ

ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಹಕ್ಕು ಚಲಾಯಿಸಿದರು. ಮತ ಚಲಾವಣೆ ಬಳಿಕ ಮಾತನಾಡಿದ ಸಿಎಂ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಹಕ್ಕು ಚಲಾಯಿಸಿದರು. ಮತ ಚಲಾವಣೆ ಬಳಿಕ ಮಾತನಾಡಿದ ಸಿಎಂ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಪಕ್ಷೇತರರು ಸೇರಿದಂತೆ ನಾಲ್ಕು ಶಾಸಕರ ಮತಗಳು ನಮ್ಮ ಅಭ್ಯರ್ಥಿಗಳಿಗೆ ಬೀಳಲಿವೆ.‌ ನಮ್ಮ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ. ಜೆಡಿಎಸ್ ಪಕ್ಷಕ್ಕೆ ಇರುವುದೇ 19 ಶಾಸಕರು. ಹೀಗಿರುವಾಗ ಅವರು ಅಭ್ಯರ್ಥಿ ಕಣಕ್ಕಿಳಿಸಬಾರದಿತ್ತು. ಆದರೂ, ಕಣಕ್ಕಿಳಿಸಿದರು. ಅದ್ದರಿಂದ ನಾವು ಹೋಟೆಲ್ ಗೆ ಹೋಗಿ ಒಟ್ಟಾಗಿ ಮತದಾನಕ್ಕೆ ಬರಬೇಕಾಯಿತು' ಎಂದು ಹೇಳಿದರು.

'ನಮ್ಮ ಪಕ್ಷದ 134 ಶಾಸಕರ ಜತೆಗೆ ಪಕ್ಷೇತರರಾದ ಲತಾ ಮಲ್ಲಿಕಾರ್ಜುನ, ಕೆ.ಎಚ್. ಪುಟ್ಟಸ್ವಾಮಿ ಗೌಡ, ಸರ್ವೋದಯ ಕರ್ನಾಟಕದ ದರ್ಶನ್ ಪುಟ್ಟಣ್ಣಯ್ಯ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿ. ಜನಾರ್ದನ ರೆಡ್ಡಿ ಕೂಡ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಲಿದ್ದಾರೆ. ಮೂರೂ ಮಂದಿಯ ಗೆಲುವಿಗೆ ಬೇಕಾಗುವಷ್ಟು ಮತಗಳು ನಮ್ಮ‌ ಬಳಿ ಇವೆ' ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ
ರಾಜ್ಯಸಭಾ ಚುನಾವಣೆ: ಅಡ್ಡಮತ ಚಲಾಯಿಸಿ ಬಿಜೆಪಿಗೆ ಶಾಕ್ ನೀಡಿದ ಎಸ್'ಟಿ.ಸೋಮಶೇಖರ್

ಇದೇ ವೇಳೆ ಆತ್ಮ ಸಾಕ್ಷಿಯ ಮತಗಳು ಬರಲಿವೆ ಎಂಬ ಜೆಡಿಎಸ್ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ, 'ಜೆಡಿಎಸ್ ಪಕ್ಷದವರಿಗೆ ಆತ್ಮವೂ ಇಲ್ಲ, ಸಾಕ್ಷಿಯೂ ಇಲ್ಲ' ಎಂದು ಲೇವಡಿ ಮಾಡಿದರು.

ಜೆಡಿಎಸ್‍ನವರು ತಮ್ಮ ಗೆಲುವಿಗಾಗಿ ಬೇರೆ ಬೇರೆ ಪ್ರಯತ್ನ ಮಾಡಿದರು. ಆದರೆ ಅದರಲ್ಲಿ ಅವರು ಯಶಸ್ವಿಯಾಗುವುದಿಲ್ಲ. ನಮ್ಮ ಪಕ್ಷದ ಎಲ್ಲಾ ಶಾಸಕರೂ ಪಕ್ಷನಿಷ್ಠರಾಗಿದ್ದಾರೆ. ಹೋಟೆಲ್‍ನಿಂದ ನೇರವಾಗಿ ಇಲ್ಲಿಗೆ ಬಂದು ಮತ ಹಾಕಿದ್ದಾರೆ. ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರಿಂದಾಗಿ ಚುನಾವಣೆ ನಡೆಯಬೇಕಾದ ಪರಿಸ್ಥಿತಿ ಎದುರಾಯಿತು ಎಂದರು.

ಬಿಜೆಪಿಯವರು ಚುನಾವಣೆಯಲ್ಲಿ ಗೆಲ್ಲಲು ಅಭ್ಯರ್ಥಿಗಳನ್ನು ನಿಲ್ಲಿಸಿದ್ದಾರೆ. ಆದರೆ, 5 ನೇ ಅಭ್ಯರ್ಥಿಗೆ ಅವರಿಗೆ 45 ಮತಗಳು ಬೇಕು, ಅವರಿಗೆ 45 ಮತಗಳಿವೆಯೇ? ಸಂಖ್ಯಾ ಬಲವಿಲ್ಲದೆ ಹೇಗೆ ಗೆಲ್ಲುತ್ತಾರೆ? ಅದು ಅವರಿಗೆ ತಿಳಿದಿದ್ದರೂ ಕೂಡ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ಪು, ನಮ್ಮ ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸಿದರು, ಹೀಗಾಗಿಯೇ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಮ್ಮ 3 ಅಭ್ಯರ್ಥಿಗಳು ಗೆಲ್ಲುವ ವಿಸ್ವಾಸ ನಮಗಿದೆ ಎಂದು ಹೇಳಿದರು.

Related Stories

No stories found.

Advertisement

X
Kannada Prabha
www.kannadaprabha.com