ಇಂಡಿಯಾ ಮೈತ್ರಿಕೂಟದ ಜೊತೆ ಸೀಟು ಹಂಚಿಕೆ ಫಲಪ್ರದವಾಗಲಿದೆ: ಮಲ್ಲಿಕಾರ್ಜುನ ಖರ್ಗೆ

ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪಾಲುದಾರ ಪಕ್ಷಗಳ ನಡುವಿನ ಸೀಟು ಹಂಚಿಕೆಯು ಫಲಪ್ರದವಾಗುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಪಾಲುದಾರ ಪಕ್ಷಗಳ ನಡುವಿನ ಸೀಟು ಹಂಚಿಕೆಯು ಫಲಪ್ರದವಾಗುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ.

ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲು ಸುರಪುರಕ್ಕೆ ತೆರಳುವ ಮುನ್ನ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಖರ್ಗೆ ಮಾತನಾಡಿದರು.

'ನಮ್ಮ ವಿರೋಧಿಗಳು I.N.D.I.A ಮೈತ್ರಿಕೂಟದ ಬಗ್ಗೆ ಏನು ಬೇಕಾದರೂ ಹೇಳಬಹುದು. ನಾವು ಆಶಾವಾದಿಗಳಾಗಿದ್ದೇವೆ' ಎಂದು ಅವರು ಹೇಳಿದರು.

ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷದೊಂದಿಗೆ ಕಾಂಗ್ರೆಸ್ ಪಕ್ಷವು ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದೆ. ಇದರೊಂದಿಗೆ ಜಾರ್ಖಂಡ್ ಮುಕ್ತಿ ಮೋರ್ಚಾ, ಆರ್‌ಜೆಡಿ, ಡಿಎಂಕೆ ಮತ್ತು ಮುಸ್ಲಿಂ ಲೀಗ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಅದಿನ್ನೂ ಪ್ರಕಟವಾಗಬೇಕಿದೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ

'ಕಠಿಣ ಹೋರಾಟವನ್ನು ನೀಡಲು ನಾವು ಕೊನೆಯ ಕ್ಷಣದವರೆಗೂ I.N.D.I.A ಮೈತ್ರಿಕೂಟದ ಎಲ್ಲಾ ಪಾಲುದಾರ ಪಕ್ಷಗಳೊಂದಿಗೆ ಚರ್ಚೆ ನಡೆಸುತ್ತೇವೆ. ಸರ್ವಾಧಿಕಾರದತ್ತ ಸಾಗುತ್ತಿರುವ ಎನ್‌ಡಿಎ ಒಕ್ಕೂಟಕ್ಕೆ ದೇಶದ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com