ವಿಧಾನಮಂಡಲ ಅಧಿವೇಶನ: ಪಾಕ್ ಪರ ಘೋಷಣೆ ವಿವಾದ, ಉಭಯ ಸದನಗಳಲ್ಲಿ ಗದ್ದಲ, ಕಲಾಪ ಮುಂದೂಡಿಕೆ

ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಸೈಯದ್‌ ನಾಸೀರ್‌ ಹುಸೇನ್‌ ಬೆಂಬಲಿಗರಿಂದ ವಿಧಾನಸೌಧ ಕಾರಿಡಾರ್‌ನಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕುರಿತ ವಿವಾದ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಬುಧವಾರ ಭಾರಿ ಗದ್ದಲ, ಕೋಲಾಹಲ ಉಂಟು ಮಾಡಿದ್ದರಿಂದ ಕಲಾಪವನ್ನು ಎರಡು ಬಾರಿ, ಕೊನೆಗೆ ನಾಳೆಗೆ ಮುಂದೂಲಾಯಿತು.
ವಿಧಾನಸಭೆ
ವಿಧಾನಸಭೆ
Updated on

ಬೆಂಗಳೂರು: ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಸೈಯದ್‌ ನಾಸೀರ್‌ ಹುಸೇನ್‌ ಬೆಂಬಲಿಗರಿಂದ ವಿಧಾನಸೌಧ ಕಾರಿಡಾರ್‌ನಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕುರಿತ ವಿವಾದ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಬುಧವಾರ ಭಾರಿ ಗದ್ದಲ, ಕೋಲಾಹಲ ಉಂಟು ಮಾಡಿದ್ದರಿಂದ ಕಲಾಪವನ್ನು ಎರಡು ಬಾರಿ, ಕೊನೆಗೆ ನಾಳೆಗೆ ಮುಂದೂಲಾಯಿತು.

ಕಲಾಪ ಆರಂಭವಾಗುತ್ತಿದ್ದಂತೆಯೇ ಈ ವಿಚಾರ ಕುರಿತು ಪ್ರತಿಪಕ್ಷ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್‌ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಒಂದು ಹಂತದಲ್ಲಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಪರಿಸ್ಥಿತಿಯನ್ನು ಅರಿತು ಮಾರ್ಷಲ್ ಗಳು ಸದನದ ಬಾವಿಗೆ ಧಾವಿಸಿದರು. ತೀವ್ರ ಗದ್ದಲ, ಕೋಲಾಹಲದಿಂದ ಸದನವನ್ನು ಎರಡು ಬಾರಿ ಮುಂದೂಡಲಾಗಿತ್ತು.

ಗದ್ದಲದ ನಡುವೆ ಕೆಲ ಮಸೂದೆಗಳನ್ನು ಅಂಗೀಕರಿಸಲಾಯಿತು. ಭೋಜನ ವಿರಾಮದ ನಂತರವೂ ಗದ್ದಲ, ಕೋಲಾಹಲ ಮುಂದುವರೆದಿದ್ದರಿಂದ ಉಭಯ ಸದನಗಳನ್ನು ದಿನದ ಮಟ್ಟಿಗೆ ಮುಂಡೂಲಾಯಿತು. ಇದಕ್ಕೂ ಮುನ್ನ ಕೆಲ ಶಾಸಕರು ವಿಧಾನಸೌಧ ಬಳಿ ಪ್ರತಿಭಟನೆ ನಡೆಸಲು ವಿಧಾನಸಭೆಯಿಂದ ಹೊರಗೆ ಬಂದರು.

ವಿಧಾನಸಭೆ
ಪಾಕಿಸ್ತಾನ ಪರ ಘೋಷಣೆ ಪ್ರಕರಣ: ವಿಧಾನಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ವಾಗ್ಯುದ್ಧ, ಸರ್ಕಾರದ ವಿರುದ್ಧ ಆರ್.ಅಶೋಕ್ ಕಿಡಿ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ಗೆ ಉತ್ತರ ನೀಡಬೇಕಿತ್ತು. ಆದರೆ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸದಸ್ಯರು ವಿಧೇಯಕಗಳ ಪ್ರತಿಗಳನ್ನು ಹರಿದು ಸಭಾಧ್ಯಕ್ಷರ ಪೀಠದತ್ತ ಎಸೆದರು. ಈ ಸಂದರ್ಭದಲ್ಲಿ ವಿಧಾನಸಭೆಯನ್ನೂ ಎರಡು ಬಾರಿ ಮುಂದೂಡಲಾಯಿತು.

ವಿಧಾನಸಭೆ
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ: ಸಭಾಪತಿಗಳ ಮುಂದೆ ಕೈ ಕೈ ಮಿಲಾಯಿಸಲು ಮುಂದಾದ ಸದಸ್ಯರು

ಪ್ರತಿಪಕ್ಷ ನಾಯಕ ಆರ್.ಅಶೋಕ ಮಾತನಾಡಿ, ವಿಧಾನಸೌಧ ಕೇವಲ ಕಟ್ಟಡವಲ್ಲ, 7 ಕೋಟಿ ಕನ್ನಡಿಗರನ್ನು ಪ್ರತಿನಿಧಿಸುತ್ತದೆ. ವಿಧಾನಸೌಧದೊಳಗೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ, ಅವರನ್ನು ಹೇಗೆ ಬಿಟ್ಟರು ಎಂದು ಕಿಡಿಕಾರಿದರು. ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮಾತನಾಡಿ, ಇಷ್ಟು ದಿನ ರಸ್ತೆಗಳಲ್ಲಿ ಘೋಷಣೆಗಳು ಕೇಳಿಬಂದವು, ಈಗ ಅದು ವಿಧಾನಸೌಧಕ್ಕೆ ಬಂದಿದೆ. ಇದಕ್ಕೆಲ್ಲ ಕಾಂಗ್ರೆಸ್ ಸರಕಾರವೇ ಕಾರಣ ಎಂದರು. ಎನ್‌ಐಎ ತನಿಖೆ ನಡೆಸಿ ರಾಜ್ಯ ಸರ್ಕಾರವನ್ನು ವಿಸರ್ಜಿಸುವಂತೆ ಬಿಜೆಪಿ ಸದಸ್ಯರು ಒತ್ತಾಯಿಸಿದರು.

ಈ ನಡುವೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಯಲ್ಲಿ ಪಾಕಿಸ್ತಾನದ ಪರ ಘೋಷಣೆ ನಿಜವೆಂದು ಸಾಬೀತಾದರೆ, ಗಂಭೀರ ಕ್ರಮ ಕೈಗೊಳ್ಳಲಾಗುವುದು. ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಇದಕ್ಕೆ ಪೂರಕವಾಗಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ, ಹುಸೇನ್ ಪಾಸ್ ಅಡಿಯಲ್ಲಿ 25 ಮಂದಿ ವಿಧಾನಸೌಧ ಪ್ರವೇಶಿಸಿದ್ದಾರೆ.ಎಫ್‌ಐಆರ್ ದಾಖಲಿಸಲಾಗಿದೆ, ಈ ಪ್ರಕರಣದಲ್ಲಿ ಮಾತ್ರವಲ್ಲ, ಎಲ್ಲಿಯಾದರೂ, ಇಂತಹ ಘೋಷಣೆ ಕೂಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com