ಪಾಕ್​ ಪರ ಘೋಷಣೆ ಆರೋಪ; ಎನ್​ಐಎ ತನಿಖೆ ನಡೆಸುವಂತೆ ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪ ಕೇಳಿಬಂದಿದ್ದು, ಘಟನೆ ಕುರಿತು ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದಿಂದ ತನಿಖೆ ನಡೆಸುವಂತೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ.
Shobha Karandlaje
Shobha Karandlaje

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪ ಕೇಳಿಬಂದಿದ್ದು, ಘಟನೆ ಕುರಿತು ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದಿಂದ ತನಿಖೆ ನಡೆಸುವಂತೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.

ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ನಡೆದ ಘಟನೆಯಲ್ಲಿ ಅವರು ಭಾಗಿಯಾಗಿರುವ ಅನುಮಾನ ಇದೆ ಎಂದು ಕೇಂದ್ರ ಸಚಿವೆ ಹೇಳಿದ್ದಾರೆ.

ವಿಧಾನಸೌಧದಲ್ಲಿ ಭದ್ರತಾ ಲೋಪ ಆಗಿದೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವ ಅಗತ್ಯ ಇದೆ. ಹೀಗಾಗಿ ಪ್ರಕರಣವನ್ನು ಎನ್ಐಎಗೆ ವಹಿಸುವುದು ಸೂಕ್ತ ಎಂದು ಶೋಭಾ ಕರಂದ್ಲಾಜೆ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

Shobha Karandlaje
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ: ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ ಪೊಲೀಸರು

ನಿನ್ನೆ ರಾಜ್ಯಸಭೆಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com