ಕರ್ನಾಟಕಕ್ಕೆ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಿ: ಕೇಂದ್ರಕ್ಕೆ ಸುರ್ಜೇವಾಲಾ ಆಗ್ರಹ; ಬಿಜೆಪಿ ಸಂಸದರ ಮೌನ ಪ್ರಶ್ನಿಸಿದ ಕಾಂಗ್ರೆಸ್

ಯಾವುದೇ ವಿಳಂಬ ಮಾಡದೆ ತಕ್ಷಣ ಕರ್ನಾಟಕಕ್ಕೆ ಬರ ಪರಿಹಾರ ಸೇರಿದಂತೆ ರಾಜ್ಯಕ್ಕೆ ಕೇಂದ್ರದ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ...
ರಣದೀಪ್ ಸುರ್ಜೇವಾಲಾ
ರಣದೀಪ್ ಸುರ್ಜೇವಾಲಾ

ಬೆಂಗಳೂರು: ಯಾವುದೇ ವಿಳಂಬ ಮಾಡದೆ ತಕ್ಷಣ ಕರ್ನಾಟಕಕ್ಕೆ ಬರ ಪರಿಹಾರ ಸೇರಿದಂತೆ ರಾಜ್ಯಕ್ಕೆ ಕೇಂದ್ರದ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬುಧವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ವಿಚಾರದಲ್ಲಿ ಬಿಜೆಪಿ ಸಂಸದರ ಮೌನವನ್ನು ಅವರು ಪ್ರಶ್ನಿಸಿದ ಸುರ್ಜೇವಾಲಾ, ರಾಜ್ಯ ಸರ್ಕಾರ ಒಟ್ಟು 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, 48.19 ಲಕ್ಷ ಹೆಕ್ಟೇರ್ ಗೂ ಹೆಚ್ಚು ಬೆಳೆ ನಷ್ಟವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಸುರ್ಜೇವಾಲಾ ಹೇಳಿದ್ದಾರೆ.

ರಾಜ್ಯ ಸರ್ಕಾರವು ಕೇಂದ್ರಕ್ಕೆ ಸಲ್ಲಿಸಿದ ಮನವಿ ಪತ್ರದಲ್ಲಿ 18,177 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಕೋರಿದೆ. ಆದರೆ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ಕೇಂದ್ರದ ನೆರವು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ಇದುವರೆಗೂ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಇದು ಕೇಂದ್ರ ಸರ್ಕಾರ ನಡೆದುಕೊಳ್ಳುವ ರೀತಿಯೇ? ಎಂದು ಸುರ್ಜೇವಾಲಾ ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com