ಪ್ರತಾಪ್ ಸಿಂಹ ಸಹೋದರ, ಹಿಂದೂ ಕಾರ್ಯಕರ್ತನ ಬಂಧನ: ಸಿದ್ದರಾಮಯ್ಯರಿಂದ ಅಧಿಕಾರ ದುರುಪಯೋಗ ಎಂದ ಎಚ್ ಡಿಕೆ

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ಮರ ಕಡಿದ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ಮರ ಕಡಿದ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಆರೋಪಿಸಿದ್ದಾರೆ.

ಇಂದು ಜೆ.ಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ, ಸಿದ್ದರಾಮಯ್ಯನವರ ನಿರ್ದೇಶನದ ಮೇರೆಗೆ ಅರಣ್ಯಾಧಿಕಾರಿಗಳು ಗೆಂಡೆಕೆರೆ ಅರಣ್ಯದಿಂದ ರೋಸ್‌ವುಡ್ ತಂದು ವಿಕ್ರಮ್ ಸಿಂಹ ಗುತ್ತಿಗೆ ಪಡೆದಿದ್ದ ಜಮೀನಿನಲ್ಲಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಾಪ್ ಸಿಂಹ ತೇಜೋವಧೆ ಮಾಡಲು ಅಧಿಕಾರಿಗಳಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಪ್ರತಾಪ್ ಸಿಂಹ ಸಹೋದರನಿಗೂ ಮರಕಡಿದ ವಿಚಾರಕ್ಕೂ ಸಂಬಂಧವಿಲ್ಲ. ಯಾರು ಯಾರಿಗೆ ಕರೆ ಮಾಡಿದ್ದರು ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಕಾಲ್​​ ಡೀಟೆಲ್ಸ್ ತೆಗೆಸಿದ್ರೆ ಎಲ್ಲವೂ ಗೊತ್ತಾಗುತ್ತೆ ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನ ದುಷ್ಕರ್ಮಿಯೊಬ್ಬರು ಸಿಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ, ವಿಕ್ರಮ್ ಸಿಂಹ ಅವರನ್ನು ಫಿಕ್ಸ್ ಮಾಡಲು ಈ ಕೇಸ್ ತಂದಿದ್ದಾರೆ ಎಂದು ಹೇಳಿದರು. 

ಪ್ರತಾಪ್ ಸಿಂಹ ಸಹೋದರನ ವಿರುದ್ಧ ಕೇಸ್ ಹಾಕಿ ಜೈಲಿಗೆ ಹಾಕಿದ್ದಾರೆ. ಇದರ ಸತ್ಯಾಸತ್ಯತೆ ಏನಿದೆ? ಕಾಂಗ್ರೆಸ್ ವಿರೋಧಿಗಳ ಧ್ವನಿ ಅಡಗಿಸೋಕೆ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಐದು ಜನ ಅರಣ್ಯಾಧಿಕಾರಿಗಳನ್ನ ಅಮಾನತು ಮಾಡಿದ್ದಾರೆ. ಅಮಾನತುಗೊಳಿಸಲು ಕಾರಣವೇನು? ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

"ನೀವು (ಮುಖ್ಯಮಂತ್ರಿ) ಈ ಪ್ರಕರಣವನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಗೆ ನೀಡುತ್ತೀರಾ ಅಥವಾ ಇನ್ನೊಂದು ಆಯೋಗವನ್ನು ರಚಿಸುತ್ತೀರಾ? ನಾನು ಎಂದಿಗೂ ವಾಸ್ತವಾಂಶವನ್ನು ತಿಳಿಯದೆ ಮಾತನಾಡುವುದಿಲ್ಲ" ಎಂದಿದ್ದಾರೆ.

ಪ್ರತಾಪ್ ಸಿಂಹ ಸಹೋದರ ಗುತ್ತಿಗೆ ಪಡೆದ ಜಮೀನಿನಲ್ಲಿ ಯಾವುದೇ ರೋಸ್‌ವುಡ್‌ಗಳನ್ನು ಕತ್ತರಿಸಿಲ್ಲ. "ಅದನ್ನು ಗೆಂಡೆಕೆರೆ ಅರಣ್ಯದಿಂದ ತಂದು ವಿಕ್ರಮ್ ಸಿಂಹ ಅವರು ಗುತ್ತಿಗೆ ಪಡೆದ ಜಮೀನಿನಲ್ಲಿ ಎಸೆಯಲಾಗಿದೆ. ವಿಕ್ರಮಸಿಂಹ ಅವರ ಜಮೀನಿನಲ್ಲಿ ಕಡಿಯಲಾದ ಮರಗಳು ರೋಸ್‌ವುಡ್ ಅಲ್ಲ" ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ರಾಜ್ಯದಲ್ಲಿ ಅಧಿಕಾರ ದುರ್ಬಳಕೆಯಾಗುತ್ತಿದ್ದು, ಹುಬ್ಬಳ್ಳಿಯಲ್ಲಿ ಸುಮಾರು 30 ವರ್ಷ ಹಳೆಯ ಪ್ರಕರಣಗಳಿಗೆ ಸಂಬಂದಿಸಿದಂತೆ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನವಾಗಿದೆ. ನಮ್ಮ‌ಎನ್​ಡಿಎ ಪಕ್ಷದ ಬಿಜೆಪಿ ನಾಯಕರು ಕರಸೇವಕರ ಪರ ಹೋರಾಟ ಮಾಡುತ್ತಿದ್ದಾರೆ. ಗುಜಾರತ್ ನಲ್ಲಿ ನಡೆದ ಕರಸೇವಕರ ಮೇಲೆ ಆದಂತಹ ದೊಂಬಿ ಇಲ್ಲಿ ಆಗುತ್ತೆ ಎಂದು ಎಮ್​​ಎಲ್​​ಸಿ ಒಬ್ಬರು ಹೇಳಿದ್ದಾರೆ. ಈ ಸರ್ಕಾರ ಬಂದ ಮೇಲೆ ಅಧಿಕಾರ ದುರ್ಬಳಕೆ ಆಗ್ತಿದೆ ಎಂದು ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com