ಮತ್ತೊಮ್ಮೆ ಮೂರು ಡಿಸಿಎಂ ವಿಚಾರ ಪ್ರಸ್ತಾಪಿಸಿದ ಸಚಿವ ಕೆ.ಎನ್.ರಾಜಣ್ಣ

ಮೂವರು ಉಪ ಮುಖ್ಯಮಂತ್ರಿಗಳ ವಿಚಾರವನ್ನು ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ಲೋಕಸಭಾ ಚುನಾವಣೆಯ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡುವುದು ಸೂಕ್ತ ಎಂದು ಗುರುವಾರ ಅಭಿಪ್ರಾಯಪಟ್ಟಿದ್ದಾರೆ.
ಸಚಿವ ಕೆ.ಎನ್.ರಾಜಣ್ಣ
ಸಚಿವ ಕೆ.ಎನ್.ರಾಜಣ್ಣ
Updated on

ಬೆಂಗಳೂರು: ಮೂವರು ಉಪ ಮುಖ್ಯಮಂತ್ರಿಗಳ ವಿಚಾರವನ್ನು ಸಚಿವ ಕೆ.ಎನ್.ರಾಜಣ್ಣ ಅವರು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ಲೋಕಸಭಾ ಚುನಾವಣೆಯ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡುವುದು ಸೂಕ್ತ ಎಂದು ಗುರುವಾರ ಅಭಿಪ್ರಾಯಪಟ್ಟಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡಿದೆ. ಹಾಗೆಯೇ ಕರ್ನಾಟಕದಲ್ಲೂ ಮೂರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ಒಳ್ಳೆಯದು ಎಂದು ಹೇಳಿದರು.

ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ಈ ವಿಷಯವನ್ನು ತರಲಾಗಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಬೇಡ ಎಂದು ಹೇಳಿದೆ. ಅದರಂತೆ ಸುಮ್ಮನಿದ್ದೆ. ಈಗ ನನ್ನ ಹಿಂದಿನ ಹೇಳಿಕೆಗೆ ಬದ್ಧನಾಗಿದ್ದೇನೆ. ಮೂರು ಡಿಸಿಎಂ ಹುದ್ದೆಗಳನ್ನು ಮಾಡಬೇಕು ಎಂದು ತಿಳಿಸಿದರು.

ಮೂರು ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿ ಬಗ್ಗೆ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಸತೀಶ್ ಜಾರಕಿಹೊಳಿ ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ನಾನೂ ಕೂಡ ಅದನ್ನೇ ಹೇಳುತ್ತಿದ್ದೇನೆ. ಮೂರು ಡಿಸಿಎಂಗಳನ್ನು ಮಾಡಿದರೆ ಲೋಕಸಭಾ ಚುನಾವಣೆಯಲ್ಲಿ ಜಾತಿವಾರು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬರಲಿವೆ ಎಂದರು.

ಸರ್ವರಿಗೂ ಸಮಪಾಲು ಸಮಬಾಳು ಅನ್ನೋದು ಕೇವಲ ಸಂಪತ್ತಿಗೆ ಮಾತ್ರ ಅಲ್ಲ. ಅವಕಾಶಗಳಿಗೂ ಕೂಡ ಹಂಚಿಕೆ ಆಗಬೇಕು. ಕಾಂಗ್ರೆಸ್ ಪರ ಯಾವ ಯಾವ ಸಮುದಾಯಗಳು ಇವೆ ಅವರನ್ನು ಡಿಸಿಎಂ ಮಾಡಬೇಕು ಎಂದು ಪುನರುಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com