ಹಿಂದುಳಿದ ವರ್ಗದ ನಾಯಕರಿಗೆ ಡಿಸಿಎಂ ಹುದ್ದೆ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಲಾಭ: ಸತೀಶ್ ಜಾರಕಿಹೊಳಿ

ಎಲ್ಲರಿಗೂ ಸಮಾನ ಪ್ರಾಮುಖ್ಯತೆ ನೀಡಿ ಡಿಸಿಎಂ ಹುದ್ದೆ ನೀಡಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಹೇಳಿದರು.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಳಗಾವಿ: ಎಲ್ಲರಿಗೂ ಸಮಾನ ಪ್ರಾಮುಖ್ಯತೆ ನೀಡಿ ಡಿಸಿಎಂ ಹುದ್ದೆ ನೀಡಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಹೇಳಿದರು.

ತಮ್ಮ ನಿವಾಸದಲ್ಲಿ ನಿನ್ನೆ ನಡೆದ ಭೋಜನಾಕೂಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಂದೇ ಪಕ್ಷದ ಸಚಿವರುಗಳು ಸಹಜವಾಗಿ ಕೂಟಕ್ಕೆ ಸೇರಿದ್ದೇವೆ. ಅದರಲ್ಲಿ ವಿಶೇಷವೇನಿಲ್ಲ. ರಾಜಕಾರಣಿಗಳು ಸೇರಿದರೆ ರಾಜಕಾರಣ ಚರ್ಚೆಯಾಗಿಯೇ ಆಗುತ್ತದೆ ಎಂದು ಹೇಳಿದರು.

ನಮ್ಮ ಮುಂದೆ ಲೋಕಸಭೆ ಚುನಾವಣೆಯ ಸವಾಲಿದೆ. ಅದನ್ನು ನಿಭಾಯಿಸುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಚುನಾವಣೆಗೂ ಮೊದಲೇ ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಿದರೆ ರಾಜಕೀಯವಾಗಿ ಪಕ್ಷಕ್ಕೆ ಲಾಭವಾಗುತ್ತದೆ ಎಂಬುದು ಎಲ್ಲರ ಅಭಿಪ್ರಾಯ. ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರಿಗೆ ಡಿಸಿಎಂ ಹುದ್ದೆ ನೀಡುವ ವಿಚಾರವಾಗಿ ಚರ್ಚೆಗಳನ್ನು ನಡೆಸಲಾಗಿದೆ. ಆದರೆ ಅಂತಿಮ ತೀರ್ಮಾನ ಕೈಗೊಳ್ಳುವುದು ಕಾಂಗ್ರೆಸ್‌ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

ಇದೇ ವೇಳೆ ರಾಜ್ಯದಲ್ಲಿ ದಲಿತ ಸಿಎಂ ಬೇಕು ಎಂಬ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ಜನವರಿ 28 ರಂದು ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ, ಫೆಬ್ರವರಿಯಲ್ಲಿ ಚಿತ್ರದುರ್ಗದಲ್ಲಿ ಎಸ್‍ಸಿ, ಎಸ್ಟಿ ಸಮಾವೇಶ ಆಯೋಜನೆ ಮಾಡುವ ಚರ್ಚೆಗಳಾಗಿವೆ. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯ ಬಗ್ಗೆ ಯಾವುದೇ ರೀತಿಯ ಚರ್ಚೆಗಳಾಗಿಲ್ಲ. ಅದು ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕವಷ್ಟೇ ಅದರ ಬಗ್ಗೆ ಮಾತನಾಡುತ್ತೇವೆ. ಸದ್ಯಕ್ಕೆ ಅದರ ಬಗ್ಗೆ ಒತ್ತಡ ಹೇರುವ ಸಂದರ್ಭವೂ ಇಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com