ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಬರಲಿದೆ: ವಿಜಯೇಂದ್ರ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಬರಲಿದ್ದು, ರಾಜಕೀಯ ಬದಲಾವಣೆಯಾಗಲಿದೆ. ಮೋದಿ ಅವರ ಜನಪ್ರಿಯತೆ ವಿಶ್ವವ್ಯಾಪಿಯಾಗಿದ್ದು, ಇದನ್ನು ಮತವಾಗಿ ಪರಿವರ್ತನೆ ಮಾಡುವ ಕಾರ್ಯದ ಜವಾಬ್ದಾರಿ ಕಾರ್ಯಕರ್ತರಲ್ಲಿ ಇದ್ದು, ಯಶಸ್ವಿಯಾಗಿ ನಿಭಾಯಿಸಬೇಕು
ಬಿ.ವೈ ವಿಜಯೇಂದ್ರ
ಬಿ.ವೈ ವಿಜಯೇಂದ್ರ
Updated on

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಬರಲಿದ್ದು, ರಾಜಕೀಯ ಬದಲಾವಣೆಯಾಗಲಿದೆ. ಮೋದಿ ಅವರ ಜನಪ್ರಿಯತೆ ವಿಶ್ವವ್ಯಾಪಿಯಾಗಿದ್ದು, ಇದನ್ನು ಮತವಾಗಿ ಪರಿವರ್ತನೆ ಮಾಡುವ ಕಾರ್ಯದ ಜವಾಬ್ದಾರಿ ಕಾರ್ಯಕರ್ತರಲ್ಲಿ ಇದ್ದು, ಯಶಸ್ವಿಯಾಗಿ ನಿಭಾಯಿಸಬೇಕು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರವಾದ ಹಳೇ ಮೈಸೂರು ಭಾಗದಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಹಂಬಲದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದಾರೆ. ರಾಜ್ಯದಲ್ಲಿ ಗರಿಷ್ಠ ಸಂಖ್ಯೆಯ ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷದ ವರಿಷ್ಠರಿಗೆ ತಮ್ಮ ಸಂಘಟನಾ ಕೌಶಲ್ಯವನ್ನು ಸಾಬೀತುಪಡಿಸಲು ವಿಜಯೇಂದ್ರ ಬಯಸಿದ್ದಾರೆ.

ಏಳು ತಿಂಗಳ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಈಗಾಗಲೇ ಭ್ರಮನಿರಸನಗೊಂಡಿದ್ದಾರೆ ಎಂದು ಪ್ರತಿಪಾದಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಯನ್ನು ಸತತ ಮೂರನೇ ಅವಧಿಗೆ ಮರು ಆಯ್ಕೆ ಮಾಡಲು ಜನರು ಕಾಯುತ್ತಿದ್ದಾರೆ ಎಂದು ಹೇಳಿದರು. ಆದರೆ, ಪಕ್ಷ ಅಧಿಕಾರಕ್ಕೆ ಬಂದ ನಂತರ ಕಾರ್ಯಕರ್ತರೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಿದ ಮುಖಂಡರು ಅವರನ್ನು ಕೈಬಿಟ್ಟಿದ್ದರಿಂದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ ಎಂದು ಹೇಳಿದರು.

ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆರಿ ಗೆದ್ದಿದ್ದರಿಂದ ಈಗ ಪರಿಸ್ಥಿತಿ ಬದಲಾಗಿದೆ, ಜನರು ಕಾಂಗ್ರೆಸ್ ಭರವಸೆಗಳನ್ನು ತಿರಸ್ಕರಿಸಿದ್ದಾರೆ. ತಮ್ಮ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಪಕ್ಷದ ಹೈಕಮಾಂಡ್‌ಗೆ ಧನ್ಯವಾದ ಹೇಳಿದ ವಿಜಯೇಂದ್ರ, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದನ್ನು ತಡೆಯಲು ಯಾವ ಶಕ್ತಿಯೂ ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ಯೋಜನೆಯ 6,000 ಜೊತೆಗೆ 4,000 ರೈತರಿಗೆ ನೀಡುವುದನ್ನು ನಿಲ್ಲಿಸಿದೆ. ಕಾಂಗ್ರೆಸ್ ಬಡತನ ನಿರ್ಮೂಲನೆಯಲ್ಲಿ ವಿಫಲವಾಗಿದೆ ಮತ್ತು ಎಸ್‌ಸಿ/ಎಸ್‌ಟಿಗಳ ಸಮಸ್ಯೆಗಳನ್ನು ಪರಿಹರಿಸಿಲ್ಲ ಎಂದು ವಿಜಯೇಂದ್ರ ತಿಳಿಸಿದ್ದಾರೆ.

31 ವರ್ಷಗಳ ಹಿಂದಿನ ಪ್ರಕರಣದಲ್ಲಿ ಕರಸೇವಕನನ್ನು ಬಂಧಿಸುವ ಮೂಲಕ ಕಾಂಗ್ರೆಸ್ ದ್ವೇಷವನ್ನು ಹರಡುತ್ತಿದೆ ಎಂದು ಹೇಳಿದ ವಿಜಯೇಂದ್ರ ಗೋದ್ರಾ ರೀತಿ ಗಲಭೆ ನಡೆಸಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್  ಅವರನ್ನು ಮಂಪರು  ಪರೀಕ್ಷೆಗೆ ಒಳಗಾಗಬೇಕು ಎಂದು ಹೇಳಿದರು.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮತ್ತೊಂದೆಡೆ ಅಲ್ಪಸಂಖ್ಯಾತರನ್ನು ಓಲೈಸುವ ಸರ್ಕಾರ ಹಿಂದೂ ಕಾರ್ಯಕರ್ತರಲ್ಲಿ ಭಯ ಹುಟ್ಟಿಸುತ್ತಿದೆ, ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿದವರನ್ನು ಈ ಸರ್ಕಾರ ನಿರಪರಾಧಿಗಳೆಂದು ಸಮರ್ಥಿಸಿಕೊಳ್ಳುತ್ತಿದೆ.  ಅಪಾರ ಆಡಳಿತ ಅನುಭವ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಬರ ಪರಿಹಾರ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com