ಅಗತ್ಯಬಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿ: ಕಳ್ಳಾಟವಾಡುತ್ತಿದ್ದ ಸಚಿವರಿಗೆ ಖಡಕ್ ವಾರ್ನಿಂಗ್!

ಅಗತ್ಯ ಬಿದ್ದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.
ರಣ್ದೀಪ್ ಸಿಂಗ್ ಸುರ್ಜೇವಾಲಾ
ರಣ್ದೀಪ್ ಸಿಂಗ್ ಸುರ್ಜೇವಾಲಾ

ಬೆಂಗಳೂರು: ಅಗತ್ಯ ಬಿದ್ದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಕೆಲವು ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಹಲವು ಕ್ಷೇತ್ರಗಳಲ್ಲಿ "ಗೆಲ್ಲಬಲ್ಲ" ಅಭ್ಯರ್ಥಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಲಾಗುತ್ತದೆ, ಹೀಗಾಗಿ ಕೆಹೆಚ್ ಮುನಿಯಪ್ಪ (ಏಳು ಬಾರಿ ಕೋಲಾರ ಸಂಸದ), ಕೆಎನ್ ರಾಜಣ್ಣ ಮತ್ತು ಬಿ ನಾಗೇಂದ್ರ ಅವರಂತಹ ಸಚಿವರನ್ನು ಕಣಕ್ಕಿಳಿಸಲು ಪಕ್ಷ ಮುಂದಾಗಬಹುದು ಎಂದು ತಿಳಿದು ಬಂದಿದೆ. ಅಂತಹ ಪರಿಸ್ಥಿತಿ ಎದುರಾದರೆ, ಸಚಿವರು ಸ್ಪರ್ಧಿಸಬೇಕಾಗುತ್ತದೆ ಎಂದು ಸೂಚಿಸಲಾಗಿದೆ.

2019 ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಕೃಷ್ಣ ಬೈರೇಗೌಡ ಸ್ಪರ್ಧಿಸಿದ್ದನ್ನು ಸುರ್ಜೇವಾಲಾ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ಆಗ ಗೌಡರು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು ಲೋಕಸಭೆ ಚುನಾವಣೆಗೆ ಕಣಕ್ಕಿಳಿದಿದ್ದರು. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಮೂಡ್ ಇಲ್ಲದ ಸಚಿವರಿಗೆ ಸುರ್ಜೇವಾಲಾ ಅವರ ಎಚ್ಚರಿಕೆ ಆಘಾತ ತಂದಿದೆ ಎನ್ನಲಾಗಿದೆ.

ಕಾಂಗ್ರೆಸ್ ರಾಜ್ಯದ ಪ್ರತಿ ಲೋಕಸಭೆ ಕ್ಷೇತ್ರಕ್ಕೆ 28 ಸಚಿವರನ್ನು ಸಂಯೋಜಕರನ್ನಾಗಿ ನೇಮಿಸಿದ ಎರಡು ದಿನಗಳ ನಂತರ ಸುರ್ಜೇವಾಲಾ ಅವರಿಂದ ಸಂದೇಶ ಬಂದಿದ್ದು ಬಂದಿದೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಚಿವರುಗಳ ಬಗ್ಗೆ ಚರ್ಚೆ ಇನ್ನೂ ನಡೆಯುತ್ತಿದೆ. ನವದೆಹಲಿಯಲ್ಲಿ ಅಂತಿಮ ಸ್ಪಷ್ಟತೆ ಸಿಗಬಹುದು ಎಂದು ತಿಳಿದು ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com