ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಯತೀಂದ್ರ ಗೆಲ್ಲೋದು ಗ್ಯಾರಂಟಿ: ಕಾಂಗ್ರೆಸ್ ಅಭ್ಯರ್ಥಿ ಹೆಸರು ಬಹಿರಂಗಗೊಳಿಸಿದ ಪ್ರದೀಪ್ ಈಶ್ವರ್

2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಿನಿಂದಲೇ ಕಸರತ್ತು ಆರಂಭಿಸಿದೆ. 
ಪ್ರದೀಪ್ ಈಶ್ವರ್
ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಿನಿಂದಲೇ ಕಸರತ್ತು ಆರಂಭಿಸಿದೆ. 

ಈ ಮಧ್ಯೆ ವರುಣಾ ಕ್ಷೇತ್ರವನ್ನು ತಂದೆಗೆ ಬಿಟ್ಟುಕೊಟ್ಟಿರುವ ಯತೀಂದ್ರ ಸಿದ್ದರಾಮಯ್ಯ ಅವರು ಈ ಬಾರಿ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ಬಿಜೆಪಿ ಸಂಸದ ಪ್ರತಾಪ್​ ಸಿಂಹ ಅವರಿಗೆ ಬೈಯುವ ಭರದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಇಂದು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರದೀಪ್ ಈಶ್ವರ್ ಅವರು, ಸಂಸದ ಪ್ರತಾಪ್​ ಸಿಂಹನಂತಹ ಅಯೋಗ್ಯ, ಮುಠ್ಠಾಳ ಮತ್ತೊಬ್ಬನಿಲ್ಲ. ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡಿದ್ರೆ ಹುಷಾರ್​, ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಕೆ ನೀಡಿದರು.

ಸಂಸತ್ ಭವನದಲ್ಲಿ ಸ್ಮೋಕ್ ಬಾಂಬ್ ಹಾಕಿದವನಿಗೆ ನೀವು ಪಾಸ್ ನೀಡಿದ್ದೀರಿ. ನೀವು ದೇಶ ದ್ರೋಹಿ ಅಲ್ಲವೇ? ಈ ಬಾರಿ ಚುನಾವಣೆಯಲ್ಲಿ ನೀವು ಗೆಲ್ಲುವುದಿಲ್ಲ. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ಯತೀಂದ್ರ ಸಿದ್ದರಾಮಯ್ಯನೇ ಗೆಲ್ಲೋದು ಎಂದು ಅಚ್ಚರಿಕೆ ಹೇಳಿಕೆ ನೀಡಿದ್ದಾರೆ. 

ಇದರೊಂದಿಗೆ ಈ ಬಾರಿ ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಸುದ್ದಿಗೆ ಈಗ ರೆಕ್ಕೆಪುಕ್ಕ ಬಂದಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com