ಮತ್ತೆ ಕಾಂಗ್ರೆಸ್ ತೆಕ್ಕೆಗೆ ಮುದ್ದಹನುಮೇಗೌಡ: ಮಾಜಿ ಸಂಸದರ ಸೇರ್ಪಡೆಗೆ ಟಿ ಬಿ ಜಯಚಂದ್ರ ವಿರೋಧ!

ಮೇ 10ರಂದು ನಡೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬಂದಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ಎಸ್‌ಪಿ ಮುದ್ದಹನುಮೇಗೌಡ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ ಇದೆ.
ಮುದ್ದಹನುಮೇಗೌಡ
ಮುದ್ದಹನುಮೇಗೌಡ

ಬೆಂಗಳೂರು: ಮೇ 10ರಂದು ನಡೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಬಂದಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ಎಸ್‌ಪಿ ಮುದ್ದಹನುಮೇಗೌಡ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ ಇದೆ.

ತುಮಕೂರಿನಿಂದ ವೀರಶೈವ -ಲಿಂಗಾಯತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ನಿರ್ಧರಿಸಿದ್ದರಿಂದ, ಮುದ್ದಹನುಮೇಗೌಡರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮುದ್ದಹನುಮೇಗೌಡ ಒಂದೆರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಹ ಭೇಟಿ ಮಾಡಿದ್ದಾರೆ.

ಮುದ್ದಹನುಮೇಗೌಡ ಅವರನ್ನು ಭೇಟಿ ಮಾಡಿರುವುದನ್ನು ಪರಮೇಶ್ವರ್ ಖಚಿತಪಡಿಸಿದ್ದಾರೆ. ಬೇಷರತ್ತಾಗಿ ಪಕ್ಷಕ್ಕೆ ಸೇರ್ಪಡೆಗೊಂಡರೆ ಅಭ್ಯಂತರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, ಈ ವಿಷಯವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತರಲಾಗಿದ್ದು, ಜಿಲ್ಲಾ ನಾಯಕರು ತೀರ್ಮಾನ ಕೈಗೊಳ್ಳಬೇಕು, ಚುನಾವಣೆ ಟಿಕೆಟ್ ನೀಡಲು ಪಕ್ಷದಲ್ಲಿ ಕೆಲವು ಮಾನದಂಡಗಳಿವೆ ಎಂದಿದ್ದಾರೆ.

ಆದರೆ ತಮ್ಮ ಪುತ್ರ ಟಿ.ಜೆ.ಸಂಜಯ್‌ಗೆ ಟಿಕೆಟ್‌ಗಾಗಿ ಲಾಬಿ ನಡೆಸುತ್ತಿರುವ ಹೊಸದಿಲ್ಲಿಯಲ್ಲಿರುವ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಪಕ್ಷದ ಅಭ್ಯರ್ಥಿಯಾಗಿ ಗೌಡರನ್ನು ಮರಳಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಜಯಚಂದ್ರ ಕೂಡ ಶಿವಕುಮಾರ್ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿ ಮಾತುಕತೆ ನಡೆಸಿದರು.

2014ರ ಚುನಾವಣೆಯಲ್ಲಿ ನರೇಂದ್ರ ಮೋದಿ ಅಲೆಯ ನಡುವೆಯೂ ತುಮಕೂರಿನಲ್ಲಿ ಗೆದ್ದಿದ್ದ ಮುದ್ದಹನುಮೇಗೌಡರು, 2019ರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಣಕ್ಕಿಳಿದಿದ್ದರಿಂದ ಮುದ್ದಹನುಮೇಗೌಡರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಕುಣಿಗಲ್ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಅವರು ನಂತರ ಬಿಜೆಪಿಗೆ ಸೇರ್ಪಡೆಯಾದರು. ಇದೀಗ ಬಿಜೆಪಿ-ಜೆಡಿಎಸ್ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎಂಬ ಸುಳಿವು ಸಿಕ್ಕಿರುವ ಗೌಡರು ಮತ್ತೆ ಕಾಂಗ್ರೆಸ್‌ಗೆ ಮರಳಲು ಸಜ್ಜಾಗಿದ್ದಾರೆ.

ವಾಸ್ತವವಾಗಿ, ವೀರಶೈವ ಲಿಂಗಾಯತ ನಾಯಕ ವಿ ಸೋಮಣ್ಣ ಅವರು ಬಿಜೆಪಿ ತೊರೆದರೆ ಸೋಮಣ್ಣ ಅವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಯೋಚಿಸುತ್ತಿತ್ತು, ಆದರೆ ದೇವೇಗೌಡರು ಸೋಮಣ್ಣ ಅವರನ್ನುಬಿಜೆಪಿಯಲ್ಲಿ ಮುಂದುವರಿಯುವಂತೆ ದೇವೇಗೌಡರು ಸೂಚಿಸಿದ್ದಾರೆ. ಜೆಡಿಎಸ್ ಬೆಂಬಲದೊಂದಿಗೆ ಸೋಮಣ್ಣ ಈಗ ತುಮಕೂರು ಲೋಕಸಭಾ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪುತ್ರ ಬಿವೈ ವಿಜಯೇಂದ್ರ ಅವರು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕಣಕ್ಕಿಳಿಸಿಲು ಬೆಂಬಲ ತೋರಿದ್ದಾರೆ,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com