ಏಕವಚನ ಬಳಕೆ: ಮೊದಲು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ಹಾಕಲಿ- ಡಾ. ಅಶ್ವತ್ಥ ನಾರಾಯಣ

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದ ಅಂಗವಾಗಿ ದೇಶಾದ್ಯಂತ ಎಲ್ಲಾ ದೇಗುಲಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಹಿನ್ನೆಲೆಯಲ್ಲಿ  ಮಲ್ಲೇಶ್ವರದ 12ನೇ ಅಡ್ಡರಸ್ತೆಯಲ್ಲಿರುವ ಕೋದಂಡರಾಮ ದೇವಸ್ಥಾನದಲ್ಲಿ ಭಾನುವಾರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯ
ಡಾ.ಸಿ.ಎನ್.ಅಶ್ವತ್ಥ ನಾರಾಯಣ
ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಬೆಂಗಳೂರು: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದ ಅಂಗವಾಗಿ ದೇಶಾದ್ಯಂತ ಎಲ್ಲಾ ದೇಗುಲಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಹಿನ್ನೆಲೆಯಲ್ಲಿ  ಮಲ್ಲೇಶ್ವರದ 12ನೇ ಅಡ್ಡರಸ್ತೆಯಲ್ಲಿರುವ ಕೋದಂಡರಾಮ ದೇವಸ್ಥಾನದಲ್ಲಿ ಭಾನುವಾರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಪಾಲ್ಗೊಂಡರು. 

ಈ ಸಂದರ್ಭದಲ್ಲಿ ಮಾತನಾಡಿದ ಅಶ್ವತ್ಥ ನಾರಾಯಣ, ಅಯೋಧ್ಯೆಯ ಶ್ರೀರಾಮಮಂದಿರ ಸ್ವಾಭಿಮಾನದ ಪ್ರತೀಕವಾಗಿದೆ. ಅಯೋಧ್ಯೆ ಶ್ರೀರಾಮಮಂದಿರ ಪುನರ್ ನಿರ್ಮಾಣ ಆಗಿ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಹಬ್ಬದ ವಾತಾವರಣ ಇದೆ. 500 ವರ್ಷಗಳ ಕಾಲ ನಾವು ಅನ್ಯಾಯಕ್ಕೆ ಒಳಗಾಗಿದ್ದೆವು. ಎಲ್ಲ ಭಾರತೀಯರು ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. 

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಏಕವಚನ ಪ್ರಯೋಗ ಕುರಿತು ಪ್ರತಿಕ್ರಿಯಿಸಿದ ಅಶ್ವತ್ಥ ನಾರಾಯಣ, ಏಕವಚನ ಬಳಕೆಗೆ ಸಂಬಂಧಿಸಿದಂತೆ ಮೊದಲ ಸಿದ್ದರಾಮಯ್ಯ ವಿರುದ್ಧ ಕೇಸ್ ಹಾಕಬೇಕು, ಅವರು ಸಾಕಷ್ಟು ಸಲ ತೊಡೆ ತಟ್ಟಿದ್ದುಇದೆ, ಸಿಎಂ ಸೇರಿದಂತೆ ಕಾಂಗ್ರೆಸ್ ನ ಎಲ್ಲಾ ನಾಯಕರು ಏಕವಚನದಲ್ಲಿ ಮಾತನಾಡಿದ್ದಾರೆ. ಸದನದ ಒಳಗೆ, ಹೊರಗೂ ಮಾತನಾಡಿದ್ದು ಇದೆ ಎಂದರು. 

ನಮ್ಮ ಭಾಷೆ ಮೇಲೆ ಹಿಡಿತ ಇರಬೇಕು. ಸಮಾಧಾನದಿಂದ ಎಲ್ಲರಿಗೂ ಗೌರವ ನೀಡುವುದು ನಮ್ಮ ಸಂಸ್ಕೃತಿ ಆಗಿರಬೇಕು. ತಪ್ಪಾದಾಗ ಅದನ್ನು ಸರಿಪಡಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com