ತುಮಕೂರು: ಮಾಧುಸ್ವಾಮಿ ಪರ ಬಿಎಸ್ ವೈ ಒಲವು; ದುರಹಂಕಾರಿಗಳಿಗೆ ಟಿಕೆಟ್ ಬೇಡ; ಶೋಭಾ ಹೆಸರು ತೇಲಿಬಿಟ್ಟ ಜಿ.ಎಸ್ ಬಸವರಾಜು!

ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಅವರನ್ನು ಕಣಕ್ಕಿಳಿಸಲು ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಒಲವು ತೋರಿದ್ದು, ಇದಕ್ಕೆ ಸಂಸದ ಜಿ.ಎಸ್ ಬಸವರಾಜು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.
ಜಿಎಸ್ ಬಸವರಾಜು ಮತ್ತು ಮಾಧುಸ್ವಾಮಿ
ಜಿಎಸ್ ಬಸವರಾಜು ಮತ್ತು ಮಾಧುಸ್ವಾಮಿ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಅವರನ್ನು ಕಣಕ್ಕಿಳಿಸಲು ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಒಲವು ತೋರಿದ್ದು, ಇದಕ್ಕೆ ಸಂಸದ ಜಿ.ಎಸ್ ಬಸವರಾಜು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.

ಪಕ್ಷದಿಂದ ಯಾರಿಗೆ ಟಿಕೆಟ್‌ ಕೊಟ್ಟರೂ ಅವರ ಪರ ಕೆಲಸ ಮಾಡುತ್ತೇವೆ. ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಗೆ ಟಿಕೆಟ್‌ ನೀಡಿದರೆ ಫಲಿತಾಂಶದ ಬಗ್ಗೆ ಈಗಲೇ ಏನೂ ಹೇಳಲು ಆಗುವುದಿಲ್ಲ. ಕಳೆದ ಚುನಾವಣೆಯಲ್ಲಿ ಅವರು ಸೋತಿದ್ದಾರೆ. ದುರಹಂಕಾರ ತೋರಿದವರಿಗೆ ಜನ ಮತ ಹಾಕುವುದಿಲ್ಲ. ಹೈಕಮಾಂಡ್‌ ನಾಯಕರು ಜನಾಭಿಪ್ರಾಯ ನೋಡಿಕೊಂಡು ಅಭ್ಯರ್ಥಿಯನ್ನು ಘೋಷಿಸುತ್ತಾರೆ ಎಂದರು.

ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರಿರುವ ಬಸವರಾಜು ಅವರಿಗೆ 82 ವರ್ಷ ವಯಸ್ಸು, ಬಿಜೆಪಿ ಹೈಕಮಾಂಡ್ ಅವರಿಗೆ ಟಿಕೆಟ್ ನೀಡುವುದಿಲ್ಲ, ಹೀಗಾಗಿ ತಮ್ಮ ನಂತರ ಸೋಮಣ್ಣ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಸೋಮಣ್ಣ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಸೂಚಿಸಿರುವುದರಿಂದ ಬಸವರಾಜು ನಿರಾಸೆಗೊಂಡಿದ್ದಾರೆ.

ಮಾಧುಸ್ವಾಮಿ ಅವರಿಗೆ ಚೆಕ್‌ಮೇಟ್ ನೀಡುವ ತಂತ್ರದಲ್ಲಿ, ಬಸವರಾಜು ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರನ್ನು ತೇಲಿಬಿಟ್ಟಿದ್ದಾರೆ, ಆಡಳಿತ ವಿರೋಧಿ ಅಲೆಯಿಂದಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಶೋಭಾ ಬಿಟ್ಟುಕೊಡುವ ಸಾಧ್ಯತೆಯಿದೆ.

ಯಡಿಯೂರಪ್ಪ ಅವರ ಪುತ್ರ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಕೂಡ ಮಾಧುಸ್ವಾಮಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಯಸಿದ್ದಾರೆ. ತುಮಕೂರು ಲೋಕಸಭೆ ಟಿಕೆಟ್ ಕುರಿತು ಅಮಿತ್ ಶಾ ಅವರ ಬಳಿ ಮಾತನಾಡಿ ವಸ್ತು ಸ್ಥಿತಿ ವಿವರಿಸುವುದಾಗಿ ಜಿಎಸ್ ಬಸವರಾಜು ಹೇಳಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮತದಾರರೊಂದಿಗೆ ಶೋಭಾ ಕರಂದ್ಲಾಜೆ ಸಂಪರ್ಕ ಕಳೆದುಕೊಂಡಿರುವಂತೆ ಕಂಡುಬರುತ್ತಿದ್ದು, ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪಕ್ಷದ ಅಭ್ಯರ್ಥಿಯಾಗಿ ಪ್ರಚಾರ ಆರಂಭಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರಿನಲ್ಲಿ ತಮ್ಮ ಇಮೇಜ್ ಡ್ಯಾಮೇಜ್ ಆಗುವಂತಹ ಹೇಳಿಕೆಯನ್ನು ಬಸವರಾಜ್  ನೀಡಿದ್ದಾರೆ ಎಂದು ಶೋಭಾ ಪ್ರತಿಕ್ರಿಯಿಸಿದ್ದಾರೆ. ಮೋದಿ ಅಲೆಯಿಂದ 2014 ಮತ್ತು 2019ರಲ್ಲಿ ಎರಡು ಬಾರಿ ಗೆದ್ದ ಅದೇ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಪ್ರಮುಖ ಸ್ಥಾನವಾಗಿದ್ದು ಇಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಪ್ರಬಲ ನೆಲೆಯನ್ನು ಹೊಂದಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ನೆಗೆದಿರುವ ಪ್ರಮೋದ್‌ಗೆ ಬಿಜೆಪಿ ಟಿಕೆಟ್‌ ಸಿಗುವ ಸಾಧ್ಯತೆ ಕಡಿಮೆ' ಎಂದು ಮೂಲವೊಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com