ಯತೀಂದ್ರ ಹೇಳಿಕೆ ಒಕ್ಕಲಿಗ ಸಮುದಾಯಕ್ಕೆ ಮಾಡಿದ ವಿದ್ರೋಹ: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಬಿಜೆಪಿ ಮುಖಂಡರು!

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗರಿಷ್ಠ ಸ್ಥಾನಗಳನ್ನು ಗೆದ್ದರೆ ತಮ್ಮ ತಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯಲ್ಲಿ ಐದು ವರ್ಷಗಳ ಕಾಲ ಅಧಿಕಾರದಲ್ಲಿ ಮುಂದುವರಿಯುತ್ತಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ.
ಡಾ ಯತೀಂದ್ರ ಸಿದ್ದರಾಮಯ್ಯ
ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗರಿಷ್ಠ ಸ್ಥಾನಗಳನ್ನು ಗೆದ್ದರೆ ತಮ್ಮ ತಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯಲ್ಲಿ ಐದು ವರ್ಷಗಳ ಕಾಲ ಅಧಿಕಾರದಲ್ಲಿ ಮುಂದುವರಿಯುತ್ತಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ.

ಯತೀಂದ್ರ ಹೇಳಿಕೆಯು ಮುಖ್ಯಮಂತ್ರಿಗಳ ಅಧಿಕಾರಾವಧಿಯ ವಿಷಯವನ್ನು ಮತ್ತೊಮ್ಮೆ ಪ್ರಮುಖ ವೇದಿಕೆಗೆ ತರಲಾಗಿದ್ದು, ಆಡಳಿತ ಪಕ್ಷದ ವಿರುದ್ಧ ಚಾಟಿ ಬೀಸಲು ಬಿಜೆಪಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.ಯತೀಂದ್ರ ಹೇಳಿಕೆ ಒಕ್ಕಲಿಗರಿಗೆ ಮಾಡಿದ ದ್ರೋಹವಾಗಿದೆ ಎಂದು ಬಿಜೆಪಿ ಟೀಕಿಸಿದೆ.

ತಮ್ಮ ಶ್ರಮ ಮತ್ತು ಪಕ್ಷದ ಪದಾಧಿಕಾರಿಗಳನ್ನು ಸಂಘಟಿಸುವ ಮೂಲಕ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಭರವಸೆಯೊಂದಿಗೆ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗರು ಪಕ್ಷವನ್ನು ಬೆಂಬಲಿಸಿರುವುದು ಕಾಂಗ್ರೆಸ್ ನಾಯಕರ ಒಂದು ವರ್ಗವನ್ನು ಚಿಂತೆಗೀಡು ಮಾಡಿದೆ.

ಈ ಹೇಳಿಕೆ ಅನಗತ್ಯ , ಇದು ಮುಖ್ಯಮಂತ್ರಿಗೆ ಮುಜುಗರವನ್ನುಂಟುಮಾಡುತ್ತದೆ ಮತ್ತು ಸರ್ಕಾರದೊಳಗಿನ ಅಧಿಕಾರದ ಹೋರಾಟವನ್ನು ಬಿಜೆಪಿ ಮತ್ತು ಜೆಡಿಎಸ್ ಬಳಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ಸಾರ್ವತ್ರಿಕ ಚುನಾವಣೆಯ ನಂತರ ಸರ್ಕಾರದಲ್ಲಿ ಪ್ರಮುಖ ಬೆಳವಣಿಗೆಗಳು ನಡೆಯಲಿವೆ ಎಂಬ ವದಂತಿಗಳಿವೆಯಾದರೂ, ಪಕ್ಷದ ವರಿಷ್ಠರು ಅಂತಹ ಯಾವುದೇ ಅಧಿಕಾರ ಹಂಚಿಕೆ ಒಪ್ಪಂದವನ್ನು ನಿರಾಕರಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಇತರ ಬಿಜೆಪಿ ನಾಯಕರು ಯತೀಂದ್ರ ಹೇಳಿಕೆಯನ್ನು ಒಕ್ಕಲಿಗರಿಗೆ ಮಾಡಿದ ದ್ರೋಹ ಎಂದು ಬಣ್ಣಿಸಿದ್ದಾರೆ, ಇದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಸಾಕಷ್ಟು ಮತದಾರರ ಬೆಂಬಲವನ್ನು ಪಡೆಯುವ ಸ್ಪಷ್ಟ ಪ್ರಯತ್ನವಾಗಿದೆ.

ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಮೂಲಕ ಹೇಳಿಕೆ ಕೊಡಿಸಿ ತಾವೇ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸುತ್ತಿದ್ದಾರೆ ಎಂದು ಪ್ರಕತಾಪ್ ಸಿಂಹ ಹೇಳಿದರು. ಎಸ್.ಎಂ.ಕೃಷ್ಣ ನಂತರ ಒಕ್ಕಲಿಗರ ಸಮುದಾಯದ ಯಾವೊಬ್ಬ ನಾಯಕನೂ ಮುಖ್ಯಮಂತ್ರಿ ಆಗಿಲ್ಲ, ಹೀಗಾಗಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಒಕ್ಕಲಿಗರ ಮತದಾರರಲ್ಲಿ ಮನವಿ ಮಾಡಿದ್ದ ಶಿವಕುಮಾರ್ ಅವರ ಬಗ್ಗೆ ನನಗೆ ಸಹಾನುಭೂತಿ ಇದೆ ಎಂದು ಪ್ರತಾಪ್ ಸಿಂಹ ಹೇಳಿದರು.

ಈಗ ಅವಕಾಶ ಬಂದಿದ್ದು, ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿದೆ. ಆದರೆ ಪಕ್ಷವು ಚುನಾವಣೆಯಲ್ಲಿ ಗೆದ್ದ ನಂತರ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಕೇಂದ್ರ ನಾಯಕತ್ವದ ಮೇಲೆ ಮೇಲುಗೈ ಸಾಧಿಸಿದರು ಮತ್ತು ಇಬ್ಬರೂ ಎರಡೂವರೆ ವರ್ಷಗಳ ಕಾಲ ಸಿಎಂ ಸ್ಥಾನವನ್ನು ಹಂಚಿಕೊಳ್ಳುವ ಒಪ್ಪಂದ ಮಾಡಿಕೊಂಡರು ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com