ಅಮಿತ್ ಶಾ, ನಡ್ಡಾ ಜೊತೆಗೆ ಕುಮಾರಸ್ವಾಮಿ ಮಹತ್ವದ ಸಭೆ; ಜೆಡಿಎಸ್- ಬಿಜೆಪಿ ನಡುವೆ ಸೀಟು ಹಂಚಿಕೆ ಕುರಿತು ಚರ್ಚೆ

ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಮಹತ್ವದ ಸಭೆ ನಡೆಸಿದ್ದಾರೆ.
ಶಾ, ನಡ್ಡಾ ಅವರೊಂದಿಗೆ ಕುಮಾರಸ್ವಾಮಿ
ಶಾ, ನಡ್ಡಾ ಅವರೊಂದಿಗೆ ಕುಮಾರಸ್ವಾಮಿ

ನವದೆಹಲಿ: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಮಹತ್ವದ ಸಭೆ ನಡೆಸಿದ್ದಾರೆ.

ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಕುಮಾರಸ್ವಾಮಿ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಂಸದ ಕುಪೇಂದ್ರ ರೆಡ್ಡಿ ಕೂಡ ಉಪಸ್ಥಿತರಿದ್ದರು.

ಬಿಜೆಪಿ ವರಿಷ್ಠರೊಂದಿಗೆ ರಾಜ್ಯ ರಾಜಕೀಯ, ಸೀಟು ಹಂಚಿಕೆ ಹಾಗೂ ಮೈತ್ರಿ ವಿಚಾರವಾಗಿ ಗೃಹ ಸಚಿವರು ಮತ್ತು ನಡ್ಡಾ ಜೆಡಿಎಸ್ ಮುಖಂಡರೊಂದಿಗೆ 45 ನಿಮಿಷಕ್ಕೂ ಹೆಚ್ಚು ಕಾಲ ಚರ್ಚೆ ನಡೆಸಿರುವುದಾಗಿ ಕುಮಾರಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಪೂರ್ಣಗೊಂಡ ನಂತರ ನಡ್ಡಾ ಅವರ ಸಮ್ಮುಖದಲ್ಲಿ ಜೆಡಿಎಸ್ ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್ ಡಿಎಗೆ ಸೇರ್ಪಡೆಗೊಳ್ಳುವ ಪ್ರಕ್ರಿಯೆ ಮತ್ತು ಸೀಟು ಹಂಚಿಕೆ ಕುರಿತು ಚರ್ಚಿಸುವುದಾಗಿ ಶಾ ಹೇಳಿರುವುದಾಗಿ ಮಾಜಿ ಮುಖ್ಯಮಂತ್ರಿ  ಹೇಳಿದ್ದಾರೆ.

ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಸಾಧಿಸಬೇಕು ಮತ್ತು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ನಾಯಕರು ಒಮ್ಮತದಿಂದ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com